ಶಿವಮೊಗ್ಗ Lok Sabha Election 2024 Results LIVE: ರಾಘವೇಂದ್ರ ಗೆಲುವು

ಶಿವಮೊಗ್ಗ, ಜೂನ್ 04: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಶೇ 78.33ರಷ್ಟು ಮತದಾನವಾಗಿತ್ತು. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಿರೀಕ್ಷೆ ಮಾಡಲಾಗಿತ್ತು. ಗೆಲುವು ಯಾರಿಗೆ? ಎಂಬುದು ಈಗ ಅಂತಿಮಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಶಿವಮೊಗ್ಗದ ಹಾಲಿ ಸಂಸದ ಬಿ. ವೈ. ರಾಘವೇಂದ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಕಾಂಗ್ರೆಸ್‌ನಿಂದ ಗೀತಾ ಶಿವರಾಜ್ ಕುಮಾರ್ ಎದುರಾಳಿ. ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ ಕಣಕ್ಕಿಳಿದು ಚುನಾವಣಾ ಚಿತ್ರಣದ ರಂಗು ಹೆಚ್ಚಿಸಿದ್ದರು.

Shivamogga Lok Sabha Election 2024 Results LIVE Who Will Win Raghavendra Vs Geetha Vs Eshwarappa

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಎಂದರೆ ಅದು ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಮತ್ತು ಎಸ್. ಬಂಗಾರಪ್ಪ ಕುಟುಂಬದ ನಡುವಿನ ಹೋರಾಟ. ಆದರೆ ಈ ಬಾರಿ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆಯ ಬಿಸಿ ಏರಿಸಿದ್ದರು.

2024ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ. ಚಿತ್ರಗಳು, ವಿಡಿಯೋ, ಫಲಿತಾಂಶದ ಕುರಿತು ನಾಯಕರ ಪ್ರತಿಕ್ರಿಯೆ, ಪಡೆದ ಮತಗಳ ನಿಖರ ಅಂಕಿ ಅಂಶಗಳ ಮಾಹಿತಿ ಈ ಪುಟದಲ್ಲಿದೆ.

ಫಲಿತಾಂಶದ ಕ್ಷಣ-ಕ್ಷಣದ ಮಾಹಿತಿ

* ಸಮಯ 5.45: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಂತಿಮ ಫಲಿತಾಂಶ. ಬಿಜೆಪಿಯ ಬಿ. ವೈ. ರಾಘವೇಂದ್ರ ಗೆಲುವು, 7,78,721 ಮತಗಳು. ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ 5,35,006 ಮತಗಳು. ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ 30,050 ಮತಗಳು.

* ಸಮಯ 1.15: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ.

* ಸಮಯ 12.46: ಶಿವಮೊಗ್ಗ ಲೋಕಸಭಾ ಚುನಾವಣೆ ಮತ ಎಣಿಕೆಯ 16ನೇ ಸುತ್ತು ಮುಕ್ತಾಯವಾಗಿದೆ. 16ನೇ ಸುತ್ತಿನಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ 5,72,359. ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ 404570, ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 21,920 ಮತಗಳನ್ನು ಪಡೆದಿದ್ದಾರೆ. ಬಿಜೆಪಿ 1,67,789 ಮತಗಳ ಮುನ್ನಡೆ ಪಡೆದಿದೆ.

* ಸಮಯ 11.40: ಶಿವಮೊಗ್ಗದಲ್ಲಿ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಬಿ. ವೈ. ರಾಘವೇಂದ್ರ 409182, ಗೀತಾ ಶಿವರಾಜ್ ಕುಮಾರ್ 281219, ಈಶ್ವರಪ್ಪ 15,689 ಮತಗಳು. ಬಿಜೆಪಿ ಮುನ್ನಡೆ 1,27,963

* ಸಮಯ 11.12: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 11ನೇ ಸುತ್ತಿನ ಮತ ಎಣಿಕೆ ಆರಂಭವಾಗಿದೆ. ಬಿ. ವೈ. ರಾಘವೇಂದ್ರ 3,32,671. ಗೀತಾ ಶಿವರಾಜ್ ಕುಮಾರ್ 2,34,650 ಮತಗಳು. ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ 12,964 ಮತಗಳನ್ನು ಪಡೆದಿದ್ದಾರೆ.

* ಸಮಯ 10.30: ಶಿವಮೊಗ್ಗದಲ್ಲಿ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಬಿ. ವೈ. ರಾಘವೇಂದ್ರ 2,44,098. ಗೀತಾ ಶಿವರಾಜ್ ಕುಮಾರ್ 170102, ಈಶ್ವರಪ್ಪ 9,557 ಮತಗಳನ್ನು ಪಡೆದಿದ್ದಾರೆ.

* ಸಮಯ 10 ಗಂಟೆ; ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 5ನೇ ಸುತ್ತಿನ ಮತ ಎಣಿಕೆ ಬಳಿಕ ಬಿ. ವೈ. ರಾಘವೇಂದ್ರ 1,33,384 ಮತಗಳು. ಗೀತಾ ಶಿವರಾಜ್ ಕುಮಾರ್ 100199 ಮತಗಳು ಮತ್ತು ಈಶ್ವರಪ್ಪ 5,358 ಮತಗಳನ್ನು ಪಡೆದಿದ್ದಾರೆ.

* ಸಮಯ 9.30: ಶಿವಮೊಗ್ಗದಲ್ಲಿ 3ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ 18,138 ಸಾವಿರ ಮತಗಳ‌ ಮುನ್ನಡೆ ಪಡೆದುಕೊಂಡಿದ್ದಾರೆ. ರಾಘವೇಂದ್ರ 80211 ಮತಗಳನ್ನು ಪಡೆದಿದ್ದಾರೆ. ಗೀತಾ ಶಿವರಾಜ್‌ ಕುಮಾರ್ 62,073 ಮತ್ತು ಈಶ್ವರಪ್ಪ 3,705 ಮತ ಪಡೆದಿದ್ದಾರೆ.

* ಸಮಯ 9 ಗಂಟೆ: ಶಿವಮೊಗ್ಗದಲ್ಲಿ ಇವಿಎಂ ಮತ ಎಣಿಕೆ ಮೊದಲ ಸುತ್ತು ಮುಕ್ತಾಯಗೊಂಡಿದೆ. ಬಿಜೆಪಿಯ ಬಿ. ವೈ. ರಾಘವೇಂದ್ರ 22,134 ಮತಗಳು, ಕಾಂಗ್ರೆಸ್‌ನ ಗೀತಾ ಶಿವಾರಾಜ್‌ ಕುಮಾರ್ 15,771 ಮತಗಳು ಮತ್ತು ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ 1092 ಮತ ಪಡೆದಿದ್ದಾರೆ.

* ಸಮಯ 8.35: ಶಿವಮೊಗ್ಗದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಬಿ. ವೈ. ರಾಘವೇಂದ್ರ ಮುನ್ನಡೆ ಪಡೆದಿದ್ದಾರೆ. ರಾಘವೇಂದ್ರ 76 ಮತಗಳ ಮುನ್ನಡೆ ಪಡೆದಿದ್ದಾರೆ. 687 ಮತಗಳನ್ನು ರಾಘವೇಂದ್ರ ಪಡೆದಿದ್ದು, 611 ಮತಗಳನ್ನು ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ ಪಡೆದಿದ್ದಾರೆ.

* ಸಮಯ 8 ಗಂಟೆ; ಶಿವಮೊಗ್ಗದಲ್ಲಿ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. 5,199 ಅಂಚೆ ಮತಗಳು ಚಲಾವಣೆಗೊಂಡಿದೆ. ಅಂಚೆ ಮತಗಳ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲೇ ಬಿಜೆಪಿಗೆ 50 ಮತಗಳ ಮುನ್ನಡೆ ಸಿಕ್ಕಿದೆ.

* ಸಮಯ 7.45: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದೆ.

* ಸಮಯ 7 ಗಂಟೆ: ಶಿವಮೊಗ್ಗ ಲೋಕಸಭಾ ಚುನಾವಣಾ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣಾ ಕಣದಲ್ಲಿ 23 ಅಭ್ಯರ್ಥಿಗಳಿದ್ದಾರೆ. ಸ್ಟ್ರಾಂಗ್ ರೂಂ ಅನ್ನು ಭಾರೀ ಭದ್ರತೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆ ಸಮ್ಮುಖದಲ್ಲಿ ತೆರೆಯಲಾಗಿದೆ.

* ಸಮಯ 6 ಗಂಟೆ: ಬಿ. ಎಸ್. ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಬಳಿಕ, ಬಿ. ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು.

* ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆಯನ್ನು ಆರಂಭಿಸಲಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಒಟ್ಟು 13,72,949 ಮತಗಳು ಚಲಾವಣೆಯಾಗಿದೆ.

* ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಪಕ್ಷದ ಏಜೆಂಟರು ಆಗಮಿಸಲಿದ್ದಾರೆ. ಅವರ ಸಮ್ಮುಖದಲ್ಲಿಯೇ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲಾಗುತ್ತದೆ.

* ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‌ಗಳು ಇರುತ್ತದೆ. ಮತ ಎಣಿಕೆ ಟೇಬಲ್ ಕೌಂಟರ್‌ಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಮಾತ್ರ ಅವಕಾಶವಿರುತ್ತದೆ.

* ಶಿವಮೊಗ್ಗ ಕ್ಷೇತ್ರದಲ್ಲಿ ಬಿ. ವೈ. ರಾಘವೇಂದ್ರ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ. ಕೆ. ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿ. ಚುನಾವಣಾ ಕಣದಲ್ಲಿ ಒಟ್ಟು 23 ಅಭ್ಯರ್ಥಿಗಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+