ಅನೈತಿಕ ಸಂಬಂಧ ಶಂಕೆ; ಪತ್ನಿಗೆ ಚಾಕು ಇರಿದು ಕೊಲೆ ಮಾಡಿದ ಪತಿ

ಶಿವಮೊಗ್ಗ, ನವೆಂಬರ್ 2: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಶಿವಮೊಗ್ಗ ನಗರದ ಸಯ್ಯದ್ ಫರ್ವೇಜ್ ಎಂಬಾತನು ಪತ್ನಿ ಫಾತಿಮಾಳ ಮೇಲೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಗೊಂಡು, ನವೆಂಬರ್ 1 ರಂದು ಭಾನುವಾರ ರಾತ್ರಿ 7-30ರ ವೇಳೆಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ.

ಕೊಲೆಗೈದ ಆರೋಪಿ ಸಯ್ಯದ್ ಫರ್ವೇಜ್ ನನ್ನು ಘಟನೆ ನಡೆದ ಎರಡು ಗಂಟೆಯ ಒಳಗೆ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಲೆ ಆರೋಪಿ ಸಯ್ಯದ್ ಫರ್ವೇಜ್ ನ ತಂದೆಯೊಂದಿಗೆ ಪತ್ನಿ ಫಾತೀಮಾ ಅವರು ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಅನುಮಾನಗೊಂಡ ಕಾರಣ ಆಕೆಯನ್ನು ಫರ್ವೇಜ್ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

Shivamogga: Man Kills Wife Over Suspected Illicit Relations

ಮನೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೋಲಿಸರು ತನಿಖೆ ಮುಂದುವರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+