ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಪದಚ್ಯುತಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 22; ಅವಿಶ್ವಾಸ ಗೊತ್ತುವಳಿಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಡಿ. ಆನಂದ್‌ಗೆ ಸೋಲಾಗಿದೆ. ಎಲ್ಲಾ ನಿರ್ದೇಶಕರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದಾರೆ. ಈ ಮಧ್ಯೆ ಡಿ. ಆನಂದ್ ಅವಿಶ್ವಾಸ ಗೊತ್ತುವಳಿ ಸಭೆಗೆ ಗೈರಾಗಿದ್ದರು.

ಶುಕ್ರವಾರ ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಸಭಾಂಗಣದಲ್ಲಿ ಅವಿಶ್ವಾಸ ಸಭೆ ನಡೆಯಿತು. 14 ನಿರ್ದೇಶಕರ ಪೈಕಿ 13 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲಾ ನಿರ್ದೇಶಕರು ಶಿಮುಲ್ ಅಧ್ಯಕ್ಷ ಡಿ. ಆನಂದ್ ವಿರುದ್ಧ ಮತ ಚಲಾಯಿಸಿದ್ದಾರೆ. ಇದರಿಂದಾಗಿ ಡಿ.ಆನಂದ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತಾಗಿದೆ.

ಹಾಲು ಮಾರಾಟ ಕೇಂದ್ರಗಳನ್ನೇ ಟಾರ್ಗೆಟ್ ಮಾಡುತ್ತಿರುವ ದರೋಡೆಕೋರರು! ಹಾಲು ಮಾರಾಟ ಕೇಂದ್ರಗಳನ್ನೇ ಟಾರ್ಗೆಟ್ ಮಾಡುತ್ತಿರುವ ದರೋಡೆಕೋರರು!

ಇಂದು ನಡೆಸ ಸಭೆಗೆ ಡಿ. ಆನಂದ್ ಸಭೆಗೆ ಗೈರಾಗಿದ್ದರು. ಸಹಕಾರ ಸಂಘಗಳ ಉಪನಿಬಂಧಕ ನಾಗೇಶ್ ಎಸ್.ಡೋಂಗ್ರೆ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜು ಸಭೆಯಲ್ಲಿದ್ದರು.

ಕೋವಿಡ್ ಸೋಂಕಿತರ ಮನೆಯಿಂದ ಹಾಲು ಸ್ವೀಕರಿಸಲ್ಲವೆಂದ ಹಾಲು ಉತ್ಪಾದಕ ಸಂಘಕೋವಿಡ್ ಸೋಂಕಿತರ ಮನೆಯಿಂದ ಹಾಲು ಸ್ವೀಕರಿಸಲ್ಲವೆಂದ ಹಾಲು ಉತ್ಪಾದಕ ಸಂಘ

Shivamogga MIlk Union President Disgraced

ಶಿಮುಲ್‌ನಲ್ಲಿ ಮುಂದೇನು?; ಅಧ್ಯಕ್ಷರ ಪದಚ್ಯುತಿಯ ಹಿನ್ನಲೆ ಆಡಳಿತಾತ್ಮಕ ದೃಷ್ಟಿಯಿಂದ ಶಿಮುಲ್ ಉಪಾಧ್ಯಕ್ಷರೇ ಅಧ್ಯಕ್ಷರ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಶಿಮುಲ್ ಉಪಾಧ್ಯಕ್ಷ ಹೆಚ್. ಕೆ. ಬಸಪ್ಪ ಪ್ರಭಾರ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ನೂತನ ಅಧ್ಯಕ್ಷರಿಗಾಗಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಸಹಕಾರ ಇಲಾಖೆ ಚುನಾವಣಾ ದಿನಾಂಕ ಪ್ರಕಟಿಸಲಿದೆ.

ವಾರದಲ್ಲಿ ಒಂದೆರಡು ದಿನ ಹಾಲು ಖರೀದಿ ಸ್ಥಗಿತ? ವಾರದಲ್ಲಿ ಒಂದೆರಡು ದಿನ ಹಾಲು ಖರೀದಿ ಸ್ಥಗಿತ?

ಅಧ್ಯಕ್ಷರ ಅವಧಿ ಮುಗಿದ ಹಿನ್ನೆಲೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ ಸ್ಥಾನ ಬಿಟ್ಟುಕೊಡಲು ಡಿ. ಆನಂದ್ ನಿರಾಕರಿಸಿದ್ದರು. ಹಾಗಾಗಿ 14 ನಿರ್ದೇಶಕರ ಪೈಕಿ 10 ನಿರ್ದೇಶಕರು ಡಿ. ಆನಂದ್ ವಿರುದ್ಧ ಅವಿಶ್ವಾಸ ಮಂಡನೆಗೆ ಸಭೆ ಕರೆಯಬೇಕು ಎಂದು ಜೂನ್ ತಿಂಗಳಲ್ಲಿ ನೊಟೀಸ್ ನೀಡಿದ್ದರು. ಈ ಹಿನ್ನಲೆ ಜೂನ್ 15ರಂದು ಸಭೆ ನಿಗದಿಪಡಿಸಲಾಗಿತ್ತು. ಆದರೆ ತಡೆಯಾಜ್ಞೆ ಕೋರಿ ಡಿ. ಆನಂದ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆನಂದ್ ಕೋರ್ಟಿಗೆ ಹೋಗಿದ್ದೇಕೆ?; ಕೊರೋನ ಸಂದರ್ಭದಲ್ಲಿ ಯಾವುದೇ ಸ್ಥಳೀಯ ಸಂಸ್ಥೆ, ಸಹಕಾರಿ ಸಂಸ್ಥೆಗಳ ಚುನಾವಣೆ ನಡೆಸಬಾರದು ಎಂದು ಸರ್ಕಾರ ಆದೇಶಿಸಿದೆ. ಇಂತಹ ಸಂದರ್ಭ ಅವಿಶ್ವಾಸ ಮಂಡನೆಗೆ ಅವಕಾಶ ನೀಡುವುದು ಸರಿಯಲ್ಲ.

ಒಂದು ವೇಳೆ ಅಧ್ಯಕ್ಷರ ಪದಚ್ಯುತಿಯಾದರೆ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ. ಅಧ್ಯಕ್ಷರಿಲ್ಲದೆ ಇದ್ದರೆ ಆಡಳಿತಾತ್ಮಕ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ಅವಿಶ್ವಾಸ ಮಂಡನೆಗೆ ಅವಕಾಶ ನೀಡಬಾರದು ಎಂದು ಡಿ. ಆನಂದ್ ಕೋರ್ಟ್ ಮೊರೆ ಹೋಗಿದ್ದರು.

ಆನಂದ್ ಅರ್ಜಿ ವಜಾಗೊಂಡಿತ್ತು; ಶಿಮುಲ್ ಅಧ್ಯಕ್ಷ ಡಿ. ಆನಂದ್ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡಿತ್ತು. ಹಾಗಾಗಿ ಹೈಕೋರ್ಟ್‌ನ ಮತ್ತೊಂದು ಪೀಠದಲ್ಲಿ ಡಿ. ಆನಂದ್ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯೂ ವಜಾಗೊಂಡಿದ್ದರಿಂದ ಇವತ್ತು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ನಿಗದಿಯಾಗಿತ್ತು.

ಸಭೆಗೆ ಗೈರಾದ ಆನಂದ್; ಇನ್ನು, ಅವಿಶ್ವಾಸ ಸಭೆಗೆ ಶಿಮುಲ್ ಅಧ್ಯಕ್ಷ ಡಿ. ಆನಂದ್ ಗೈರಾಗಿದ್ದರು. ಕೊನೆಯ ಹಂತದಲ್ಲಿ ಬೇರೆ ಪ್ರಯತ್ನಗಳನ್ನು ನಡೆಸಬಹುದೆ ಎಂದು ಇತರೆ ನಿರ್ದೇಶಕರ ಕುತೂಹಲಕ್ಕೆ ಕಾರಣವಾಗಿತ್ತು. ಆನಂದ್ ಶಿಮುಲ್‌ಗೂ ಭೇಟಿ ನೀಡದೆ, ಎಲ್ಲರಿಂದಲೂ ದೂರ ಉಳಿದಿದ್ದರು.

ಶಿವಮೊಗ್ಗ ಹಾಲು ಒಕ್ಕೂಟವು ಮೂರು ಜಿಲ್ಲೆಯ ವ್ಯಾಪ್ತಿಗೆ ಒಳಪಡಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ವ್ಯಾಪ್ತಿಯಲ್ಲಿ ಹೈನುಗಾರಿಕೆ ಮಾಡುವವರು ಶಿಮುಲ್‌ಗೆ ಹಾಲು ಕಳುಹಿಸುತ್ತಾರೆ.

ಶಿವಮೊಗ್ಗ ಹಾಲು ಒಕ್ಕೂಟ; ಶಿವಮೊಗ್ಗ ಹಾಲು ಒಕ್ಕೂಟದ ವ್ಯಾಪ್ತಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳು ಸೇರುತ್ತವೆ. 1991ರಲ್ಲಿ ಸ್ಥಾಪನೆಗೊಂಡ ಶಿವಮೊಗ್ಗ ಡೈರಿಯು ದಿನಂಪ್ರತಿ 1.50 ಲಕ್ಷ ಲೀಟರ್ ಹಾಲನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ. ದಾವಣಗೆರೆ ಡೇರಿಯು ಪ್ರತಿನಿತ್ಯ 60,000 ಲೀಟರ್ ಹಾಲನ್ನು ಸಂಸ್ಕರಿಸುವ ಸಾಮರ್ಥ್ಯ ಹೊಂದಿದೆ.

ಈ ಒಕ್ಕೂಟವು ಪ್ರತಿನಿತ್ಯ ಸರಾಸರಿ 5.90 ಲಕ್ಷ ಕೆಜಿ ಹಾಲನ್ನು ಶೇಖರಣೆ ಮಾಡುತ್ತಲಿದ್ದು, ಸರಾಸರಿ 2.10 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡುತ್ತಿದೆ ಮತ್ತು 0.26 ಲಕ್ಷ ಕೆಜಿ ಮೊಸರನ್ನು ಮಾರಾಟ ಮಾಡುತ್ತಿದ್ದು, ಪನ್ನೀರ್, ಕೋವಾ, ಮೈಸೂರು ಪಾಕ್, ಪೇಡಾ ಸಹ ಮಾರಾಟ ಮಾಡುತ್ತಿದೆ.

ಔಷಧೀಯ ಗುಣವುಳ್ಳ ಗಿಡಮೂಲಿಕೆಗಳನ್ನು ಬೆಳೆಸಲು ಮಹಿಳಾ ರೈತ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವಲ್ಲಿ ಪ್ರಪ್ರಥಮ ಒಕ್ಕೂಟ ಎನ್ನುವ ಹೆಗ್ಗಳಿಕೆ ಇದರದ್ದಾಗಿದೆ.

English summary
Shivamogga MIlk Union president D. Anand disgraced. 13 directors voted against D. Anand in the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X