ಕುತೂಹಲ ಮೂಡಿಸಿದ ಸಂಸದ ರಾಘವೇಂದ್ರ-ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರು, ಜೂನ್ 5: ಶಿವಮೊಗ್ಗದ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಅವರು ರಾಜ್ಯ ಜಲಸಂಪನ್ಮೂಲ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರ ಪ್ರಚಾರ ನಡೆಸಲು ಉಸ್ತುವಾರಿ ವಹಿಸಿದ್ದ ಡಿ.ಕೆ. ಶಿವಕುಮಾರ್, ರಾಘವೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ಭೇಟಿ ಕುತೂಹಲ ಮೂಡಿಸಿದೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾದ ಒಟ್ಟು ಆರು ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಈ ಭೇಟಿ ಸಂದರ್ಭದಲ್ಲಿ ಕೋರಿದ್ದಾಗಿ ಸಂಸದ ಬಿ.ವೈ ರಾಘವೇಂದ್ರ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ಈ ದಿವಸ ಮಾನ್ಯ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಶ್ರೀ ಡಿ.ಕೆ.ಶಿವಕುಮಾರ್ ರವರನ್ನ ಬೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯವ್ಯಯದಲ್ಲಿ ಘೋಷಣೆಯಾದ ಒಟ್ಟು 6 ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಕೂಡಲೇ ಟೆಂಡರ್ ಆಹ್ವಾನಿಸಿ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದೆ. pic.twitter.com/rie5Ogeia9
— B Y Raghavendra (@BYRBJP) 5 June 2019
ಈ ಯೋಜನೆಗಳ ಅನುಷ್ಠಾನಕ್ಕೆ ಕೂಡಲೇ ಟೆಂಡರ್ ಆಹ್ವಾನ ಮಾಡಿ, ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ.











Click it and Unblock the Notifications