ಶಿವಮೊಗ್ಗ: ಕಿಸ್ ಆಫ್ ಲವ್ ಅಭಿಯಾನಕ್ಕೆ ಪೊಲೀಸರಿಂದ ಬ್ರೇಕ್
ಶಿವಮೊಗ್ಗ, ಜ. 31: ಪ್ರೇಮಿಗಳ ದಿನ (ಫೆಬ್ರವರಿ 14) ದಂದು ಕಿಸ್ ಆಫ್ ಲವ್ ಆಯೋಜಿಸಲು ಮುಂದಾಗಿದ್ದ ವಿದ್ಯಾರ್ಥಿ ಸಂಘಟನೆಗಳಿಗೆ ಮುಖಭಂಗವಾಗಿದೆ. ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ತೀವ್ರ ವಿರೋಧಕ್ಕೆ ಮಣಿದ ಜಿಲ್ಲಾ ಪೊಲೀಸರು 'ಕಿಸ್ ಆಫ್ ಲವ್' ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ.
ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಸಂಜೆ 6 ರಿಂದ ರಾತ್ರಿ 11ರವರೆಗೆ ಕಿಸ್ ಆಫ್ ಲವ್ ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದರಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕು ಎಂದು ಎಸ್ಪಿ ರವಿ ಡಿ.ಚೆನ್ನಣ್ಣನವರ್ ಮತ್ತು ತಹಶೀಲ್ದಾರ್ ಅವರಿಗೆ ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷ ವಿನಯ್ ಕೆ.ಸಿ ಮನವಿ ಸಲ್ಲಿಸಿದ್ದರು. [ಕಿಸ್ ಆಫ್ ಲವ್ : ವಿದ್ಯಾರ್ಥಿಗಳು ಏನಂತಾರೆ?]

ಈಗ ಕಾರ್ಯಕ್ರಮಕ್ಕೆ ಪೊಲೀಸ್ ಅನುಮತಿ ನಿರಾಕರಿಸಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿನಯ್ ಅವರು, ಅಂದಿನ ಕಾರ್ಯಕ್ರಮ ರದ್ದಾದರೂ ಚಿಂತೆ ಇಲ್ಲ, ಫೆಬ್ರವರಿ ತಿಂಗಳಲ್ಲಿ ಯಾವುದಾದರೂ ಒಂದು ದಿನವನ್ನು ಆಯ್ಕೆ ಮಾಡಿ ಕಿಸ್ ಆಫ್ ಲವ್ ಆಚರಿಸಲಾಗುವುದು.
ಆದರೆ, ಈ ಬಾರಿ ರಾಷ್ಟ್ರಕ್ಕಾಗಿ ಹೋರಾಡಿದ ಧೀಮಂತರ ಭಾವಚಿತ್ರ, ಅಂಧರು, ಮಕ್ಕಳು, ವೃದ್ಧರನ್ನು ಚುಂಬಿಸುವ ಮೂಲಕ ಕಿಸ್ ಆಫ್ ಲವ್ ಆಚರಿಸಲಾಗುವುದು ಎಂದು ವಿನಯ್ ಕೆಸಿ ರಾಜಾವತ್ ಪ್ರತಿಕ್ರಿಯಿಸಿದ್ದಾರೆ.
ಪೊಲೀಸರ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಶಿವಮೊಗ್ಗ ಜಿಲ್ಲಾಧ್ಯಕ್ಷ ರಮೇಶ್ ಬಾಬು ಜಾಧವ್ ಹಾಗೂ ಭಜರಂಗ ದಳದ ಸಂಚಾಲಕ ಮಾಲತೇಶ್ ಅವರು ಸ್ವಾಗತಿಸಿದ್ದಾರೆ.
2014ರ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಕಿಸ್ ಆಫ್ ಲವ್ ಆಯೋಜಿಸಲು ಪೊಲೀಸರ ಅನುಮತಿ ಕೇಳಲಾಗಿತ್ತು. ಆದರೆ, ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಕಿಸ್ ಆಫ್ ಲವ್‌ಗೆ ಅನುಮತಿ ನೀಡದಂತೆ ಹಿಂದೂ ಸಂಘಟನೆಗಳು ಪೊಲೀಸರನ್ನು ಒತ್ತಾಯಿಸಿದ್ದವು. ಕೇರಳದಲ್ಲಿ ಕಿಸ್ ಆಫ್ ಲವ್ ಅಭಿಯಾನದ ರೂವಾರಿಗಳಾದ ರಾಹುಲ್ ಪಶುಪಾಲನ್ ಮತ್ತು ಆತನ ಪತ್ನಿ ರೇಶ್ಮಿ ನಾಯರ್ ಕೆಲವು ದಿನಗಳ ಹಿಂದೆ ವೇಶ್ಯಾವಾಟಿಕೆ ಜಾಲದಲ್ಲಿ ಸಿಕ್ಕಿಬಿದ್ದ ಕತೆ ಎಲ್ಲರಿಗೂ ಗೊತ್ತಿರಬಹುದು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications