ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದ ಖಾಸಗಿ ಬಸ್ ಮಾಲೀಕರಿಗೆ ಪೊಲೀಸರಿಂದ ಖಡಕ್ ಸೂಚನೆ: ತಪ್ಪಿದರೆ ಕ್ರಮದ ಎಚ್ಚರಿಕೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ ನವೆಂಬರ್‌ 17: ಜಿಲ್ಲಾ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ಬಸ್ ಮಾಲೀಕರೊಂದಿಗೆ ಡಿಎಆರ್ ಸಭಾಂಗಣದಲ್ಲಿ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳು ಬಸ್ ಮಾಲೀಕರಿಗೆ ಎಂಟು ಪ್ರಮುಖ ಸೂಚನೆ ನೀಡಿದ್ದಾರೆ. ಇವುಗಳನ್ನು ಪಾಲಿಸದೆ ಇದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ನೀಡಿದ ಎಂಟು ಸೂಚನೆಗಳು

1. ಖಾಸಗಿ ಬಸ್ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ತಪಾಸಣೆ ವೇಳೆ ಸಮವಸ್ತ್ರ ಧರಿಸದೆ ಇರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಬೈಕಿಗೆ ಬೆಂಕಿ ಹಚ್ಚಿ ಯುವಕನ ಆಕ್ರೋಶಶಿವಮೊಗ್ಗ ಡಿಸಿ ಕಚೇರಿ ಮುಂದೆ ಬೈಕಿಗೆ ಬೆಂಕಿ ಹಚ್ಚಿ ಯುವಕನ ಆಕ್ರೋಶ

2. ಚಾಲಕರು ಹಾಗೂ ನಿರ್ವಾಹಕರುಗಳು ಸಾರ್ವಜನಿಕರೊಂದಿಗೆ ಸೌಜನ್ಯ ರೀತಿಯಲ್ಲಿ ವರ್ತಿಸಬೇಕು. ತೊಂದರೆಯಾಗದಂತೆ ನಡೆದುಕೊಳ್ಳಬೇಕು.

Shivamogga Police Give Eight Instructions To Private Bus Owners

3. ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ವೇಗ ಮಿತಿ ಹಾಗೂ ಸಂಚಾರ ನಿಯಮ ಕಡ್ಡಾಯವಾಗಿ ಚಾಲಕರು ಹಾಗೂ ನಿರ್ವಾಹಕರುಗಳು ಪಾಲಿಸಬೇಕು.

4. ಬಸ್‌ಗಳನ್ನು ನಗರದ ಎಲ್ಲೆಂದರಲ್ಲಿ ನಿಲ್ಲಿಸದೆ ನಿಗದಿಪಡಿಸಿದ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ಮಾಡಬೇಕು.

5. ಬಸ್‌ಗಳಲ್ಲಿ ಸರಕು ಸಾಗಾಣಿಕೆಯ (Parcel Service) ಸಂದರ್ಭ ನಿಗಾ ವಹಿಸಬೇಕು. ಅನುಮಾನಾಸ್ಪದ ಸರಕುಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು.

6. ಸಾರ್ವಜನಿಕರ ಸುರಕ್ಷಿತ ನಿಯಮ( Public Safety Act) ಪ್ರಕಾರ ಶಿವಮೊಗ್ಗ ನಗರ ಖಾಸಗಿ ಬಸ್ ನಿಲ್ದಾಣ ಮತ್ತು ತಾಲೂಕು ಬಸ್ ನಿಲ್ದಾಣಗಳಲ್ಲಿ 10 ದಿನಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.

7. ಬಸ್‌ಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಲ್ಲಿ ಸಂಬಂಧ ಪಟ್ಟ ಖಾಸಗಿ ಬಸ್‌ಗಳ ಮಾಲೀಕರೆ ಹೊಣೆಯಾಗುತ್ತಾರೆ.

8. ಚಾಲಕರು ಬಸ್‌ಗಳನ್ನು ಚಾಲನೆ ಮಾಡುವ ಸಮಯದಲ್ಲಿ, ಮೊಬೈಲ್ ಬಳಸುವುದು ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಓಡಾಟ ಹಾಗೂ ಬಸ್‌ ನಿಲ್ದಾಣಗಳ ಸಂಖ್ಯೆ ಹೆಚ್ಚಿದ್ದು, ಖಾಸಗಿ ಬಸ್‌ಗಳಿಂದ ಕಾನೂನು ಹದಗೆಡಿಸುವ ಯಾವುದೇ ಕೆಲಸಗಳು ನಡೆಯಬಾರದು ಎಂದು ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಖಾಸಗಿ ಬಸ್‌ ಮಾಲೀಕರಿಗೆ ಎಂಟು ಸೂಚನೆಗಳನ್ನು ನೀಡಲಾಗಿದೆ.

ಶಿವಮೊಗ್ಗದಲ್ಲಿ 6 ಪೊಲೀಸ್ ಠಾಣೆಯ 82 ರೌಡಿಗಳ ಪರೇಡ್, ಖಡಕ್ ವಾರ್ನಿಂಗ್

English summary
Shivamogga Police And transport officers give eight instructions to shivamogga private bus owners.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X