• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದಲ್ಲಿ ಮಳೆ ಪ್ರಮಾಣ, ಅಣೆಕಟ್ಟಲ್ಲಿ ನೀರು ಎಷ್ಟಿದೆ?

|

ಶಿವಮೊಗ್ಗ, ಆಗಸ್ಟ್ 13: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 50.84 ಮಿಮಿ ಮಳೆಯಾಗಿದ್ದು, ಸರಾಸರಿ 7.26 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 417.87 ಮಿಮಿ ಇದ್ದು, ಇದುವರೆಗೆ ಸರಾಸರಿ 525.13 ಮಿಮಿ ಮಳೆ ದಾಖಲಾಗಿದೆ.

      MLA Akhanda Srinivasamurtyಯನ್ನು ತರಾಟೆಗೆ ತೆಗೆದುಕೊಂಡ ಜನ | Oneindia Kannada

      ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಿದೆ. ಆಗುಂಬೆಯಲ್ಲಿ 15 ಸೆಂ.ಮೀ ಮಳೆಯಾಗಿದೆ. ಉಳಿದೆಡೆ ಸಾಧಾರಣ ಮಳೆಯಾಗಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

      ಶಿವಮೊಗ್ಗದಲ್ಲಿ ಉತ್ತಮ ಮಳೆ: 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

      ಶಿವಮೊಗ್ಗ 0.40 ಮಿಮಿ., ಭದ್ರಾವತಿ 0.00 ಮಿಮಿ., ತೀರ್ಥಹಳ್ಳಿ 13.20 ಮಿಮಿ., ಸಾಗರ 2.04 ಮಿಮಿ., ಶಿಕಾರಿಪುರ 0.80 ಮಿಮಿ., ಸೊರಬ 5.00 ಮಿಮಿ. ಹಾಗೂ ಹೊಸನಗರ 29.40 ಮಿಮಿ. ಮಳೆಯಾಗಿದೆ.

      ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

      ರಾಜ್ಯದ ಜಲಾಶಯಗಳಲ್ಲಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

      ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:

      ಲಿಂಗನಮಕ್ಕಿ: 1819 (ಗರಿಷ್ಠ), 1795.10 (ಇಂದಿನ ಮಟ್ಟ), 29142.00 (ಒಳಹರಿವು), 0.00 (ಹೊರಹರಿವು).

      ಭದ್ರಾ: 186 (ಗರಿಷ್ಠ), 176.50 (ಇಂದಿನ ಮಟ್ಟ), 17300.00 (ಒಳಹರಿವು), 3006.00 (ಹೊರಹರಿವು).

      ತುಂಗಾ: 588.24 (ಗರಿಷ್ಠ), 587.99 (ಇಂದಿನ ಮಟ್ಟ), 33608.00 (ಒಳಹರಿವು), 31698.00 (ಹೊರಹರಿವು).

      ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 582.62 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4339 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).

      ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 563.02 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1349 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).

      ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 574.06 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1205.00 (ಒಳಹರಿವು), 812 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).

      ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 580.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2168.00 (ಒಳಹರಿವು), 1741.00 (ಹೊರಹರಿವು ಕ್ಯೂಸೆಕ್ಸ್ ಗಳಲ್ಲಿ).

      English summary
      Heavy rainfall recorded in Shivamogga district, In this season so far 525.13 mm rain recorded in Shivamogga district. Here are the water level of various dams in the district.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X