ಶಿವಮೊಗ್ಗ ಗಲಭೆ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಶಿವಮೊಗ್ಗ, ಫೆಬ್ರವರಿ 22; ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗದಲ್ಲಿ ಗಲಭೆ ನಡೆದಿದೆ. ಶಿವಮೊಗ್ಗ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಜಾರಿಯಲ್ಲಿದೆ. ಮಂಗಳವಾರ ನಗರದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಹರ್ಷ ಕೊಲೆ ಪ್ರಕರಣ, ನಂತರ ನಡೆದ ಗಲಭೆ ಸೇರಿದಂತೆ ಎಲ್ಲಾ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
"ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಹಲ್ಲೆ, ಕಲ್ಲು ತೂರಾಟ, ಸರ್ಕಾರದ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿರುವುದು ಈ ಎಲ್ಲಾ ಒಟ್ಟು ಘಟನೆಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ" ಎಂದರು.
ಕರ್ಫ್ಯೂ ಹಿನ್ನಲೆಯಲ್ಲಿ ಮಂಗಳವಾರ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ. ವ್ಯಾಪಾರ, ವಹಿವಾಟು ಇಲ್ಲದೆ ನಗರ ಬಣಗುಡುತ್ತಿದೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಇದೆಯೇ?
"ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತ ಹರ್ಷ ಅವರ ಕೊಲೆಯಾದದ್ದು ಭಾನುವಾರ. ಮುಂಜಾಗ್ರತಾ ಕ್ರಮವಾಗಿ ಆ ದಿನದ ರಾತ್ರಿಯಿಂದಲೇ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ಗೃಹ ಸಚಿವರ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಈಶ್ವರಪ್ಪ ಅವರು ಅದೇ ಜಿಲ್ಲೆಯವರು. ಅಲ್ಲೇ ಈ ರೀತಿಯ ಕೊಲೆಗಳು ನಿರಂತರವಾಗಿ ನಡೆಯುತ್ತವೆ ಎಂದರೆ ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶವಯಾತ್ರೆ ನಡೆಸಿದ್ದು ಹೇಗೆ?
"ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಮತ್ತು ಏಕೆ?. ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
|
ಕೆ. ಎಸ್. ಈಶ್ವರಪ್ಪ ನೇರ ಹೊಣೆ
"ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಸರ್ಕಾರದ ಸಚಿವರ ಎದುರೇ ಕಲ್ಲುತೂರಾಟ ನಡೆದಿದೆ, ಅಂಗಡಿ, ವಾಹನಗಳಿಗೆ ಬೆಂಕಿ ಹಾಕಲಾಗಿದೆ, ಜನ ಗುಂಪು ಗುಂಪಾಗಿ ಕತ್ತಿ, ತಲ್ವಾರ್ ಹಿಡಿದು ಓಡಾಡುತ್ತಾರೆ, ಈ ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರೀಕ ಸರ್ಕಾರವ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಸಚಿವ ಈಶ್ವರಪ್ಪ ಅವರೇ ನೇರ ಹೊಣೆ" ಎಂದು ಸಿದ್ದರಾಮಯ್ಯ ದೂರಿದರು.

ಶಿವಮೊಗ್ಗ ಗಲಭೆ, ಸಿದ್ದರಾಮಯ್ಯ ಪ್ರಶ್ನೆಗಳು
"ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
"ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಬೇರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ನಡೆಸಲಿ. ಅದಕ್ಕೆ ನನ್ನ ತಕರಾರು ಇಲ್ಲ. ಅದರ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ, ಕಲ್ಲು ತೂರಾಟ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ" ಎಂದರು.

ಈಶ್ವರಪ್ಪ ಸಂಪುಟದಿಂದ ವಜಾಗೊಳಿಸಿ
"ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದು ಹೇಳಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ವಿಚಾರ ಬೇರೆ ಉಂಟಾ? ಈಶ್ವರಪ್ಪ ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು" ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
-
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications