Get Updates
Get notified of breaking news, exclusive insights, and must-see stories!

Breaking: ಶಿವಮೊಗ್ಗದಲ್ಲಿ ಕರ್ಫ್ಯೂ ಅವಧಿ ಫೆ.26ರವರೆಗೆ ವಿಸ್ತರಣೆ

ಶಿವಮೊಗ್ಗ, ಫೆಬ್ರವರಿ 23: ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ಅವಧಿಯನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯನ್ನು ಫೆ.26ರ ಶನಿವಾರ ಬೆಳಗ್ಗೆ 9 ಗಂಟೆವರೆಗೂ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಇಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಸೆಕ್ಷನ್ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮೊದಲು ಫೆಬ್ರವರಿ 25ರ ಶುಕ್ರವಾರ ಬೆಳಗ್ಗೆ ತನಕ ಕರ್ಫ್ಯೂ ಇತ್ತು.

"ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅವಕಾಶ ಕಲ್ಪಿಸಲಾಗುತ್ತಿದೆ," ಎಂದು ತಿಳಿಸಿದರು.

Shivamogga: Section 144 Extended Till February 26th Saturday Morning; Shivamogga DC Order

"ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ," ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿದರು.

ಹರ್ಷ ಹತ್ಯೆ ಬಳಿಕ ಗಲಭೆ;
ಭಾನುವಾರ ರಾತ್ರಿ ಶಿವಮೊಗ್ಗ ನಗರದ ಸೀಗೆಹಟ್ಟಿ ನಿವಾಸಿ 28 ವರ್ಷದ ಹರ್ಷ ಹತ್ಯೆಯಾಗಿತ್ತು. ಹರ್ಷ ಬಜರಂಗದಳ ಕಾರ್ಯಕರ್ತ. ಹರ್ಷ ಹತ್ಯೆಯ ಬಳಿಕ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಹರ್ಷ ಕೊಲೆ ಪ್ರಕರಣ: ಪೊಲೀಸ್ ಪಾತ್ರದ ಬಗ್ಗೆ ತನಿಖೆ
ಬೆಂಗಳೂರು, ಫೆಬ್ರವರಿ 23: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಆರೋಪಿಗಳಿಗೆ ಯಾರ ಲಿಂಕ್ ಇದೆ, ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದ್ದು, ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿ 8 ಜನರ ಬಂಧನ ಆಗಿದೆ. ಅವರ ಮೇಲೆ ಅನೇಕ ಕೇಸ್ ಇದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಶಿವಮೊಗ್ಗದಲ್ಲಿ 144 ಸೆಕ್ಷನ್ ಮುಂದುವರಿಸುತ್ತೇವೆ ಎಂದು ಹೇಳಿದರು.

Shivamogga: Section 144 Extended Till February 26th Saturday Morning; Shivamogga DC Order

ಅನೇಕ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಆರಗ ಜ್ಞಾನೇಂದ್ರ, ಬೆದರಿಕೆ ಬಂದ ಕೂಡಲೇ ಪೊಲೀಸರಿಗೆ ದೂರು ಕೊಡಿ, ಭದ್ರತೆ ಕೊಡುತ್ತೇವೆ. ಪರಿಷತ್ ಸದಸ್ಯ ಅರುಣ್‌ಕುಮಾರ್ ಸೇರಿದಂತೆ ಎಲ್ಲರಿಗೂ ಭದ್ರತೆ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಶಿವಮೊಗ್ಗದ ಕೋಟೆ ಮತ್ತೆ ದೊಡ್ಡಪೇಟೆ ಸ್ಟೇಷನ್‌ನಲ್ಲಿ ಆರೋಪಿಗಳ ವಿರುದ್ಧ ತನಿಖೆಯಾಗುತ್ತಿದೆ. 5 ವರ್ಷ ಹಿಂದಿನ ಸಂಪೂರ್ಣ ತನಿಖೆ ನಡೆಸಲು ಕ್ರೈಂ ಆಡಿಟ್‌ಗೆ ಸೂಚನೆ ನೀಡಲಾಗಿದೆ. ಆರೋಪಿಗಳ ಮೇಲೆ ಅನೇಕ ಕೇಸ್ ಇವೆ. ಆದರೂ ಪೊಲೀಸರು ಈವರೆಗೆ ಏನು ಮಾಡುತ್ತಿದ್ದರೂ ಎಂದು ತನಿಖೆ ನಡೆಯುತ್ತಿದೆ.

ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ.

Shivamogga: Section 144 Extended Till February 26th Saturday Morning; Shivamogga DC Order

ಈ ಬಗ್ಗೆ ಡಿಜಿಪಿಗೆ ಪತ್ರ ಬರೆದಿರುವ ಸಚಿವರು, ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ. ಪೊಲೀಸರು ಲೋಪ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆ ಬ್ಯಾನ್ ವಿಚಾರವಾಗಿ ಮಾತನಾಡಿದ ಅವರು, ಶಾಸಕರ ಆದಿಯಾಗಿ ಎಲ್ಲರೂ ಇದಕ್ಕೆ ಒತ್ತಾಯ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಶಿವಮೊಗ್ಗ ಘಟನೆಯಲ್ಲಿ ಕಲ್ಲು ತೂರಾಟದಿಂದ ಆದ ಹಾನಿ ಬಗ್ಗೆ ಲೆಕ್ಕ ಹಾಕಲಾಗುತ್ತಿದೆ. ನಾವು ಈ ಪ್ರಕರಣವನ್ನು ಸಾಮಾನ್ಯ ಪ್ರಕರಣ ಅಂತ ಅಂದುಕೊಂಡಿಲ್ಲ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವ ಸಂಪೂರ್ಣ ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಎಲ್ಲರೂ ಸಣ್ಣ ವಯಸ್ಸಿನವರು
ಬಂಧಿತ ಆರೋಪಿಗಳೆಲ್ಲ 21ರಿಂದ 22 ವರ್ಷ ವಯಸ್ಸಿನವರು. ಖಾಸಿಫ್ ಮಾತ್ರ 30 ವರ್ಷದವನು. ಎಲ್ಲರೂ ಕ್ಲಾರ್ಕ್ ಪೇಟೆ ನಿವಾಸಿಗಳಾಗಿದ್ದಾರೆ. ಇವರು ಒಟ್ಟಿಗೆ ಇರುತ್ತಿದ್ದರು. ಇತ್ತೀಚೆಗೆ ಎಲ್ಲರೂ ಬೇರೆ ಬೇರೆ ಕಡೆ ವಾಸವಾಗಿದ್ದಾರೆ. ಖಾಸಿಫ್ ಮಾತ್ರ ಕ್ಲಾರ್ಕ್ ಪೇಟೆಯಲ್ಲಿ ವಾಸವಾಗಿದ್ದಾನೆ ಎಂದು ಶಿವಮೊಗ್ಗ ಎಸ್ಪಿ ಮಾಹಿತಿ ನೀಡಿದರು.

ಈವರೆಗೆ 12 ಮಂದಿಯ ವಿಚಾರಣೆ
ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮಿಪ್ರಸಾದ್ ತಿಳಿಸಿದ್ದು, ಪ್ರಕರಣ ಸಂಬಂಧ ಮತ್ತಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದರು.

ಹತ್ಯೆಗೆ ಕಾರಣವೇನು?
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧಿತರ ವಿಚಾರಣೆ ಬಳಿಕ ಈ ಕುರಿತು ಸ್ಪಷ್ಟತೆ ಸಿಗಲಿದೆ. ಭಾನುವಾರ ರಾತ್ರಿ ಹರ್ಷನನ್ನು ಸ್ವಲ್ಪ ದೂರದವರೆಗೆ ಓಡಿಸಿಕೊಂಡು ಹೋಗಿ ಹತ್ಯೆ ಮಾಡಿದ್ದಾರೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮಿಪ್ರಸಾದ್ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+