ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ ಕಾಮಗಾರಿಗೆ ಮುಹೂರ್ತ ನಿಗದಿ

ಶಿವಮೊಗ್ಗ, ಮೇ 25; ಮಲೆನಾಡು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗದ ಕಾಮಗಾರಿ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಯೋಜನೆಗೆ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ಮಾಡಿದ್ದು, 2025ರಲ್ಲಿ ಮಾರ್ಗ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಶಿವಮೊಗ್ಗದ ಸಂಸದ ಬಿ. ವೈ. ರಾಘವೇಂದ್ರ ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರು. ಅನೇಕ ರೈಲ್ವೆ ಯೋಜನೆಗಳ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ಕುರಿತು ಸಹ ಚರ್ಚೆ ನಡೆದಿದೆ.

Shivamogga - Ranebennur Railway:

1,200 ಕೋಟಿ ವೆಚ್ಚ; 2019-20ರ ಕೇಂದ್ರ ಬಜೆಟ್‌ನಲ್ಲಿ ಮಲೆನಾಡಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಸೇತುವೆಯಾಗುವ ಈ ಹೊಸ ರೈಲು ಮಾರ್ಗವನ್ನು ಘೋಷಣೆ ಮಾಡಲಾಗಿತ್ತು. ರೂ. 1,200 ಕೋಟಿಗಳ ಅಂದಾಜು ವೆಚ್ಚದಲ್ಲಿ ಮಂಜೂರಾಗಿರುವ ಶಿವಮೊಗ್ಗ-ಶಿಕಾರಿಪುರ- ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗ ಯೋಜನೆಯ ಮೊದಲನೇ ಹಂತವಾದ ಶಿವಮೊಗ್ಗ-ಶಿಕಾರಿಪುರ (46 ಕಿ.ಮೀ) ನಡುವಿನ ಕಾಮಗಾರಿಗೆ ಅಗತ್ಯವಿರುವ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ.

ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆದಾರರನ್ನು ಸಹ ನಿಗದಿಪಡಿಸಲಾಗಿದೆ. 27/2/2023 ರಂದು ನರೇಂದ್ರ ಮೋದಿ ಈ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಕಾಮಗಾರಿಯ ಪೂರ್ವಭಾವಿ ಸಿದ್ಧತೆಗಳು ಆರಂಭಗೊಂಡಿದ್ದು ಮುಂದಿನ ವಾರ ಕಾಮಗಾರಿಯನ್ನು ಪ್ರಾರಂಭಿಸಿ ಡಿಸೆಂಬರ್ 2025ರ ವೇಳೆಗೆ ಶಿವಮೊಗ್ಗ-ಶಿಕಾರಿಪುರ ನಡುವಿನ ಕಾಮಗಾರಿಯು ಪೂರ್ಣಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

Shivamogga - Ranebennur Railway:

90 ಕಿ. ಮೀ. ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದಲ್ಲಿ 12 ನಿಲ್ದಾಣಗಳು ಬರಲಿವೆ. ಯೋಜನೆಯ ಕಾಮಗಾರಿಯನ್ನು ಶಿವಮೊಗ್ಗ-ಶಿಕಾರಿಪುರ ಎಂದು ಮೊದಲ ಹಂತ, ಶಿಕಾರಿಪುರ-ರಾಣೆಬೆನ್ನೂರು ಎಂದು ಎರಡು ಹಂತವಾಗಿ ಮಾಡಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು. ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಗೆ ರಾಜ್ಯದಲ್ಲಿ ಒಪ್ಪಿಗೆ ನೀಡಿ, ಕೇಂದ್ರ ಬಜೆಟ್‌ನಲ್ಲಿಯೂ ಘೋಷಣೆ ಮಾಡಿದ್ದರು. 50:50ರಷ್ಟು ಅನುಪಾತದಲ್ಲಿ ಈ ಯೋಜನೆಯ ಅನುದಾನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಂಚಿಕೊಂಡಿವೆ. ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯವೇ ನೀಡಲಿದೆ.

2008ರಲ್ಲಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಯೋಜನೆ ಪ್ರಸ್ತಾಪವಾಗಿತ್ತು. ಬಳಿಕ 2019ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಯೋಜನೆಗೆ ಒಪ್ಪಿಗೆ ಸಿಕ್ಕಿತ್ತು. ಈ ವರ್ಷದ ಫೆಬ್ರವರಿಯಲ್ಲಿ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿದ್ದು, ಕಾಮಗಾರಿ ಸಹ ಆರಂಭವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+