ಗುಂಪು ಘರ್ಷಣೆ: ಸಹಜ ಸ್ಥಿತಿಯತ್ತ ಶಿವಮೊಗ್ಗ
ಶಿವಮೊಗ್ಗ, ಫೆ. 22 : ಗುಂಪು ಘರ್ಷಣೆಯಿಂದ ತತ್ತರಿಸಿದ್ದ ಶಿವಮೊಗ್ಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಭಾನುವಾರ ನಾಗರಿಕರು ಮನೆಯಿಂದ ಹೊರಬಂದಿದ್ದು ದೈನಂದಿನ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿವೆ.
ನಗರದಲ್ಲಿ ನಿಷೇಧಾಜ್ಞೆಯನ್ನು ಫೆಬ್ರವರಿ 25 ರವರೆಗೆ ಜಾರಿಯಲ್ಲಿಡಲಾಗಿದೆ. ಶನಿವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಜಾರ್ಜ್, ಸಕಲ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲಾಗಿದೆ. ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.[ಚಿತ್ರಗಳಲ್ಲಿ: ಶಿವಮೊಗ್ಗದಲ್ಲಿ ಗುರುವಾರ ನಡೆದಿದ್ದೇನು?]

ಗಾಜನೂರು ಬಳಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದ್ದ ವಿಶ್ವನಾಥ ಅವರ ಪತ್ನಿ ಅಸ್ವಸ್ಥಗೊಂಡಿದ್ದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೃಹಸಚಿವ ಜಾರ್ಜ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.[ಶಿವಮೊಗ್ಗ : ಯುವಕ ಕೊಲೆ, ಪಶು ವೈದ್ಯರಿಗೆ ಚಾಕು ಇರಿತ]
ಹಿಂದು ಸಂಘಟನೆಗಳು ಫೆಬ್ರವರಿ 21 ರಂದು ಕರೆ ನೀಡಿದ್ದ ಶಿವಮೊಗ್ಗ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಉಂಟಾಗಿದ್ದ ಗುಂಪು ಘರ್ಷಣೆ ಹಿಂಸಾಚಾರಕ್ಕೆ ತಿರುಗಿತ್ತು. ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ವಿಶ್ವನಾಥ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಶಿವಮೊಗ್ಗ ನಗರದ ಅನೇಕ ಪೆಟ್ಟಿಗೆ ಅಂಗಡಿಗಳಿಗೆ ಬೆಂಕಿ ಹಾಕಲಾಗಿತ್ತು.












Click it and Unblock the Notifications