ಶಿವಮೊಗ್ಗ-ಬೆಂಗಳೂರು ಜನ ಶತಾಬ್ದಿ ರೈಲಿನ ವೇಳಾಪಟ್ಟಿ, ನಿಲ್ದಾಣಗಳು

ಶಿವಮೊಗ್ಗ, ಜನವರಿ 29 : ಶಿವಮೊಗ್ಗ-ಬೆಂಗಳೂರು ನಡುವೆ ಜನ ಶತಾಬ್ದಿ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಫೆಬ್ರವರಿ 3ರಂದು ರೈಲು ಸಂಚಾರ ಆರಂಭವಾಗಲಿದೆ.

ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಜನ ಶತಾಬ್ದಿ ರೈಲು ವಾರದಲ್ಲಿ ನಾಲ್ಕು ದಿನ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ' ಎಂದು ಹೇಳಿದರು.

ಶಿವಮೊಗ್ಗದಿಂದ ಹೊರಡುವ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ತನಕ ಸಂಚಾರ ನಡೆಸುತ್ತದೆ. 14 ಬೋಗಿಯ ರೈಲಿನಲ್ಲಿ 7 ಎಸಿ ಕೋಚ್ ಇರಲಿದೆ.

Shivamogga to Bengaluru shatabdi train timings

ವೇಳಾಪಟ್ಟಿ : ಶಿವಮೊಗ್ಗದಿಂದ ಬೆಳಗ್ಗೆ 5.30ಕ್ಕೆ ಹೊರಡುವ ರೈಲು 10 ಗಂಟೆಗೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಸಂಜೆ 5.30ಕ್ಕೆ ಹೊರಡುವ ರೈಲು ರಾತ್ರಿ 10 ಗಂಟೆಗೆ ಶಿವಮೊಗ್ಗಕ್ಕೆ ತಲುಪಲಿದೆ.

ಜನ ಶತಾಬ್ದಿ ರೈಲು ಸೋಮವಾರ, ಬುಧವಾರ, ಶುಕ್ರವಾರ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ಶನಿವಾರ ಬೆಳಗ್ಗೆ ಶಿವಮೊಗ್ಗದಿಂದ ಹೊರಡುವ ರೈಲು ಭಾನುವಾರ ಸಂಜೆ ಬೆಂಗಳೂರಿನಿಂದ ಹೊರಡಲಿದೆ.

ನಿಲ್ದಾಣಗಳು : ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನ ಶತಾಬ್ದಿ ರೈಲು ಭದ್ರಾವತಿ, ತರೀಕೆರೆ, ಕಡೂರು, ಬೀರೂರು, ಅರಸೀಕೆರೆ, ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+