ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ‌ ಮಂಡಳಿಯಲ್ಲಿ ಸ್ಥಾನ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 27: ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ರಾಜ್ಯ ಸರ್ಕಾರ ಹೊರಡಿಸಿರುವ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಸ್ಥಾನವನ್ನು ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಿಲ್ಲೆಯ ಇಬ್ಬರು ಶಾಸಕರಿಗೆ ಶ್ರಾವಣ ಮಾಸದ ಬಂಪರ್ ಕೊಡುಗೆ ನೀಡಿದ್ದಾರೆ.

Recommended Video

ಭಾರತದ ವಾಯುಪಡೆಗೆ ಇಂದು ಭೇಟೆಗಾರನ ಆಗಮನ | Oneindia Kannada

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನದ‌ ಬೇಡಿಕೆ ಕೂಗು ಕೇಳಿ ಬರುತ್ತಿತ್ತು. ಆದರೆ ಬಿಜೆಪಿ ಪಕ್ಷ ಬಹುಮತ ಬರದೆ ಇದ್ದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಬದಲಾವಣೆ ನಡೆದಿದ್ದು, ಈಗ ಆರಗ ಜ್ಞಾನೇಂದ್ರ ಅವರಿಗೆ ಕರ್ನಾಟಕ ಗೃಹ ಮಂಡಳಿ ನಿಗಮದ ಅಧ್ಯಕ್ಷರಾಗಿ ಸರ್ಕಾರ ಆದೇಶ ನೀಡಿದೆ.

ಮುಖ್ಯಮಂತ್ರಿಗಳು ಇಷ್ಟು ಕೆಳಮಟ್ಟದ ರಾಜಕೀಯ ಮಾಡಬಾರದು: ಸುಂದರೇಶ್ಮುಖ್ಯಮಂತ್ರಿಗಳು ಇಷ್ಟು ಕೆಳಮಟ್ಟದ ರಾಜಕೀಯ ಮಾಡಬಾರದು: ಸುಂದರೇಶ್

ಇನ್ನು ಮಾಜಿ ಸಚಿವ ಎಚ್.ಹಾಲಪ್ಪ ಕೂಡಾ ಮಾಜಿ ಮಂತ್ರಿಗಳಾಗಿದ್ದು, ಸಾಗರದ ಕ್ಷೇತ್ರ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಈ ಬಾರಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್(MSIL) ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

Shivamogga: Two MLAs In The District Appointed As Chiefs Of Corporations

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯದ 24 ಶಾಸಕರಿಗೆ ನಿಗಮ ಮಂಡಳಿ ಸ್ಥಾನವನ್ನು ಘೋಷಣೆ ಮಾಡಿದ್ದು, ಜಿಲ್ಲೆಯ ಇಬ್ಬರು ಹಿರಿಯ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ.

English summary
Two MLAs in the Shivamogga district have been named of the corporation council chairman issued by the state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X