ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮೋತ್ಸವ ಮಾಡಿದ್ದೇ ಡಿಕೆಶಿಯ ಮೇಕೆದಾಟು ಪಾದಯಾತ್ರೆಗೆ ಸೆಡ್ಡು ಹೊಡೆಯಲು: ವಿಜಯೇಂದ್ರ

|
Google Oneindia Kannada News

ಶಿವಮೊಗ್ಗ, ಆಗಸ್ಟ್ 9: ಡಿಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ತಮ್ಮ ನಾಯಕತ್ವವನ್ನು ಬಲಪಡಿಸಿಕೊಳ್ಳುವುದಕ್ಕಾಗಿ ಮೇಕೆದಾಟು ಪಾದಯಾತ್ರೆ ಮಾಡಿದರು. ಇದಕ್ಕೆ ಪ್ರತ್ಯುತ್ತರವಾಗಿ ಸಿದ್ದರಾಮಯ್ಯ ಸಿದ್ದರಾಮೋತ್ಸವ ಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಶಿಕಾರಿಪುರದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರ ಸಭೆಯ ಬಳಿಕ ಮಾತನಾಡಿದ್ದ ವಿಜಯೇಂದ್ರ, ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದೆ. ಆ ಪಕ್ಷದಲ್ಲಿ ಆಂತರಿಕ ಕಲಹಗಳಿವೆ, ನ್ಯೂಟನ್ ನಿಯಮದಂತೆ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತಿದ್ದು, ಇದು ಯಾವ ಹಂತಕ್ಕೆ ತಲುಪಲಿದೆ ಎಂಬುದು ನಿಮಗೆ ತಿಳಿಯಲಿದೆ. ಆದರೆ ಕಾಂಗ್ರೆಸ್‌ ಬಗ್ಗೆಯಾಗಲಿ, ಅವರ ಕಾರ್ಯಕ್ರಮಗಳ ಬಗ್ಗೆಯಾಗಲಿ ಬಿಜೆಪಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಬಗ್ಗೆ ಕೇಳಿದ್ದಕ್ಕೆ , ಶಿಕಾರಿಪುರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಮನವಿನ ಮಾಡಿದ್ದಕ್ಕೆ ನಮ್ಮ ತಂದೆಯವರು ನಾನು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಅದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ನಾನು ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನಾನೇನು ರಾಜಕೀಯದಲ್ಲಿ ಶಾಸಕನಾಗಲೂ ಅಥವಾ ಎಂಎಲ್‌ಸಿಯಾಗಲೂ ಇದೆಲ್ಲಾ ಮಾಡುತ್ತಿಲ್ಲ, ಈ ಹಿಂದೆಯೂ ಸಾಕಷ್ಟು ಬಾರಿ ಇಲ್ಲಿ ಪ್ರವಾಸ ಮಾಡಿದ್ದೆ, ಮುಂದೆಯೂ ಮಾಡುತ್ತೇನೆ ಎಂದರು.

Siddaramotsava was Organized for Given Counter to DK Shivakumars Mekedatu Padayatra: BY Vijayendra

ಭವಿಷ್ಯದ ಬಗ್ಗೆ ಚಿಂತೆಯಿಲ್ಲ
ರಾಜ್ಯದ ಬಿಜೆಪಿ ಉಪಾಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷವನ್ನು ಸಂಘಟನೆ ಮಾಡಲು ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೆನೆ. ನನಗೆ ಅದರಲ್ಲಿ ಸಂತೃಪ್ತಿ ಇದೆ. ಬರುವಂತಹ ದಿನಗಳಲ್ಲಿ ಏನಾಗುತ್ತದೆ ಅಥವಾ ನಾನು ಏನಾಗುತ್ತೇನೆ ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಬಿಜೆಪಿ ರಾಷ್ಟ್ರೀಯ ಪಕ್ಷ. ಈಗಾಗಿ ವಿಜಯೇಂದ್ರ ಯಾವಾಗ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷದ ನಾಯಕರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದರು.

Siddaramotsava was Organized for Given Counter to DK Shivakumars Mekedatu Padayatra: BY Vijayendra

20 ಕೋಟಿ ಮನೆಗಳಲ್ಲಿ ಧ್ವಜ ಹಾರಿಸುವ ಗುರಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ವಾಂತಂತ್ರ್ಯದ ಅಮೃತ ಮಹೋತ್ಸವವನ್ನು ದೊಡ್ಡ ಹಬ್ಬವಾಗಿ ಆಚರಿಸಲು ಕರೆ ನೀಡಿದ್ದಾರೆ. ನಾವು ಅದನ್ನು ಪಾಲಿಸಲು ಸಿದ್ಧರಾಗಿದ್ದೇವೆ. ಇದರ ಕುರಿತು ಪೇಜ್‌ ಪ್ರಮುಖರ ಸಭೆ ನಡೆಸಿದ್ದು, ಯುವಕರಲ್ಲಿ ದೇಶಭಕ್ತಿ ಹೆಚ್ಚಿಸಲು ಹಬ್ಬದ ರೀತಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಕರೆ ನೀಡಲಾಗಿದೆ. ಸುಮಾರು 20 ಕೋಟಿ ಮನೆಗಳ ಮೇಲೆ ಧ್ವಜ ಹಾರಾಡಲಿವೆ. ರಾಜ್ಯದಲ್ಲಿ 58,000 ಬೂತ್‌ಗಳು, 311 ಮಂಡಲಗಳು, 2500 ಶಕ್ತಿ ಕೇಂದ್ರ ಮತ್ತು ಮಹಾಶಕ್ತಿ ಕೇಂದ್ರಗಳಿವೆ. ಈ ಎಲ್ಲ ಕೇಂದ್ರಗಳಲ್ಲಿ ನಾವು ತ್ರಿವರ್ಣ ಧ್ವಜ ಹಾರಿಸಲಾಗುತ್ತದೆ ಎಂದರು.

English summary
KPCC president DK Shivakumar first organized Mekedatu Padayatra for strengthening his leadership in the Party, Now Siddaramaiah gave conter through Siddaramotsav said state BJP vise president BY Vijayendra in Shivamogga,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X