• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್‌ಗೆ ಸಾವನ್ನಪ್ಪಿದ ಕವಲೇದುರ್ಗದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.

ಕಳೆದ ಕೆಲ ದಿನದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಶ್ರೀಗಳನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳ ಹಿಂದೆ ಸ್ವಾಮೀಜಿಗಳ ಉಸಿರಾಟದಲ್ಲಿ ತೊಂದರೆ‌ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೇದುರ್ಗ ಶ್ರೀಗಳು, ಐದು ಪಿಎಚ್‌ಡಿ ಪದವಿ ಪಡೆದಿದ್ದರು. ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಲಿಂ. ಡಾ. ಮಹಾಂತ ಅಪ್ಪಗಳ ಕೃಪಾ ಪಾತ್ರರಾಗಿದ್ದ ಶ್ರೀಗಳು, ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೆ, ಮಠಕ್ಕೆ ಬಂದ ಭಕ್ತರಿಗೆ ಕೈಯಾರೆ ದಾಸೋಹ ಮಾಡಿ ಬಡಿಸುತ್ತಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಮಠದ ಅಭಿವೃದ್ಧಿ ಮತ್ತು ಕೆಳದಿ ಸಂಸ್ಥಾನದ ಇತಿಹಾಸದ ಬಗ್ಗೆ ಅಪಾರ ಕಾಳಜಿ ಹೊಂದಿ ಕ್ರಿಯಾಶೀಲರಾಗಿದ್ದರು. ಭಗವಂತನು ಶ್ರೀಗಳಿಗೆ ಸದ್ಗತಿಯನ್ನು ಕರುಣಿಸಲಿ ಹಾಗೂ ಶಿಷ್ಯವೃಂದಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

English summary
Dr Siddhalinga Shivacharya Mahaswamy of Bhuvanagiri Mutt in Kavaledurga Thirthahalli taluk of Shivamogga district has died of coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X