ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ವಿವಿಧ ಬೇಡಿಕೆಗೆ ಆಗ್ರಹಿಸಿ ಸಿಮ್ಸ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 21: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ನಲ್ಲಿ ಫಾರ್ಮಸಿ, ಸ್ಟಾಫ್ ನರ್ಸ್, ಡಿ ಗ್ರೂಪ್, ಅಟೆಂಡರ್, ಲ್ಯಾಬ್ ಟೆಕ್ನಿಷಿಯನ್ಸ್ ಸೇರಿ 478 ಜನ ಹೊರಗುತ್ತಿಗೆ ನೌಕರರು ಸಿಮ್ಸ್ ಮುಂಭಾಗ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ.

ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆಯನ್ನು ರದ್ದುಪಡಿಸಿ ಸಂಸ್ಥೆಯ ಮುಖಾಂತರ ನೇರ ನೇಮಕಾತಿ ಮಾಡಿಕೊಳ್ಳಬೇಕು, ಸಮಾನ ಸೇವಾ ಭದ್ರತೆ ಒದಗಿಸಬೇಕು, ಸುಪ್ರೀಂ ಕೋರ್ಟ್ 2015 ರಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ವರದಿಯನ್ನು ಇದುವರೆಗೂ ಯಾವ ಸರ್ಕಾರವೂ ಅನುಷ್ಠಾನಗೊಳಿಸಿಲ್ಲ, ಬಿ.ಎಸ್ ಯಡಿಯೂರಪ್ಪನವರ ಸರ್ಕಾರ ಈಗಲಾದರೂ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.

ಮಲೆನಾಡಿನ ಭಾಗಗಳಲ್ಲಿ ಮಳೆ; ಮತ್ತೆ ತುಂಗಾ ನದಿ ಮಂಟಪ ಮುಳುಗಡೆಮಲೆನಾಡಿನ ಭಾಗಗಳಲ್ಲಿ ಮಳೆ; ಮತ್ತೆ ತುಂಗಾ ನದಿ ಮಂಟಪ ಮುಳುಗಡೆ

Shivamogga: SIMS Outer Contract Employees Strike On Various Demands

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಯ್ ರಾಜಾವತ್, ಕಳೆದ 8 ತಿಂಗಳ ಹಿಂದೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಕಾರ್ಮಿಕರ ಸಂಘ ಹೊರಗುತ್ತಿಗೆ ರದ್ದುಪಡಿಸಿ ಒಳಗುತ್ತಿಗೆ ತೆಗೆದುಕೊಳ್ಳಿ ಎಂದು ಆಗ್ರಹಿಸಿ ಧರಣಿ ಕುಳಿತಾಗ, ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡಿ ಸಂಘದ ಭರವಸೆಯನ್ನು ಈಡೇರಿಸುವುದಾಗಿ ಹೇಳಿದ್ದರು.

Shivamogga: SIMS Outer Contract Employees Strike On Various Demands

ಆದರೆ ಇದುವರೆಗೂ ಯಾವ ಭರವಸೆನೂ ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ನಾವು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ,ಇನ್ನೂ ಉಗ್ರ ಹೋರಾಟಕ್ಕೆ ನಾವು ಸಜ್ಜಾಗಿದ್ದೇವೆ ಎಂದು ಎಚ್ಚರಿಸಿದ್ದಾರೆ.

English summary
A total of 478 outsourced employees, including Pharmacy, Staff Nurse, D Group, Attender, Lab Technicians are Strike in front of the SIMS for a long time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X