Shivamogga Airport: ಶಿವಮೊಗ್ಗ-ಹೈದರಾಬಾದ್, ಶಿವಮೊಗ್ಗ-ಚೆನ್ನೈ ವಿಮಾನ, ವೇಳಾಪಟ್ಟಿ

ಶಿವಮೊಗ್ಗ, ಸೆಪ್ಟೆಂಬರ್ 23: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಚ್ಚು ವಿಮಾನಗಳ ಸಂಚಾರ ಆರಂಭವಾಗುತ್ತಿದೆ. ಅಕ್ಟೋಬರ್ 10ರಿಂದ ಸ್ಪೈಸ್ ಜೆಟ್ ಶಿವಮೊಗ್ಗ-ಚೆನ್ನೈ ಮತ್ತು ಶಿವಮೊಗ್ಗ-ಹೈದರಾಬಾದ್ ನಡುವೆ ವಿಮಾನ ಸಂಚಾರ ಆರಂಭಿಸುವುದಾಗಿ ಘೋಷಣೆ ಮಾಡಿದೆ. ವಿಮಾನದ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನ ಸಂಚಾರದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 'ಶಿವಮೊಗ್ಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್. ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆ ಶಿವಮೊಗ್ಗ-ಹೈದರಾಬಾದ್‌ ಮತ್ತು ಶಿವಮೊಗ್ಗ-ಚೆನ್ನೈ ಮಧ್ಯೆ ವಿಮಾನಯಾನ ಸೇವೆ ಆರಂಭಿಸುತ್ತಿದೆ. ಅ.10ರಿಂದ ಶಿವಮೊಗ್ಗದಿಂದ ಮೂರನೇ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ' ಎಂದು ಹೇಳಿದ್ದಾರೆ.

SpiceJet Shivamogga To Hyderabad And Chenni Flight Know Schedule

'ಈ ಹೊಸ ವಿಮಾನ ಮಾರ್ಗಗಳು ಶಿವಮೊಗ್ಗದ ಸಂಪರ್ಕವನ್ನು ಉತ್ತಮಗೊಳಿಸಿ, ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ. ಇದಕ್ಕೆ ಸಹಕರಿಸಿದ ಸ್ಪೈಸ್‌ಜೆಟ್‌ಗೆ ಶಿವಮೊಗ್ಗ ಜನತೆಯ ಪರವಾಗಿ ಧನ್ಯವಾದಗಳು' ಎಂದು ಸಂಸದರು ತಿಳಿಸಿದ್ದಾರೆ.

ವಿಮಾನದ ವೇಳಾಪಟ್ಟಿ: ಸಂಸದ ಬಿ. ವೈ. ರಾಘವೇಂದ್ರ ತಮ್ಮ ಪೋಸ್ಟ್‌ನಲ್ಲಿ ಹೊಸ ವಿಮಾನ ಹಾರಾಟ ಮಾರ್ಗದ ಮಾಹಿತಿ ಜೊತೆಗೆ ವೇಳಾಪಟ್ಟಿಯನ್ನು ಸಹ ಹಾಕಿದ್ದಾರೆ.

* ಚೆನ್ನೈ-ಶಿವಮೊಗ್ಗ ನಡುವಿನ ವಿಮಾನ ಬೆಳಗ್ಗೆ 10:40ಕ್ಕೆ ಹೊರಟು, ಮಧ್ಯಾಹ್ನ 12:10ಕ್ಕೆ ತಲುಪಲಿದೆ. ಅದೇ ರೀತಿ ಶಿವಮೊಗ್ಗ-ಚೆನ್ನೈ ವಿಮಾನ ಸಂಜೆ 4:25ಕ್ಕೆ ಹೊರಟು, ಸಂಜೆ 5:55ಕ್ಕೆ ತಲುಪಲಿದೆ.

* ಶಿವಮೊಗ್ಗ-ಹೈದರಾಬಾದ್ ನಡುವಿನ ವಿಮಾನ ಮಧ್ಯಾಹ್ನ 12:35ಕ್ಕೆ ಹೊರಟು, ಮಧ್ಯಾಹ್ನ 2:05ಕ್ಕೆ ತಲುಪಲಿದೆ. ಅದೇ ರೀತಿ ಹೈದರಾಬಾದ್‌-ಶಿವಮೊಗ್ಗ ವಿಮಾನ ಮಧ್ಯಾಹ್ನ 2:40ಕ್ಕೆ ಹೊರಟು, ಸಂಜೆ 4:10ಕ್ಕೆ ತಲುಪಲಿದೆ.

ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ 27.02.2023ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದರು. ಶಿವಮೊಗ್ಗದಿಂದ ಮೊದಲು ಇಂಡಿಗೋ ಏರ್‌ಲೈನ್ಸ್ 31.08.2023ರಿಂದ ಬೆಂಗಳೂರು-ಶಿವಮೊಗ್ಗ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಿತು. ಈಗ ಶಿವಮೊಗ್ಗದಿಂದ ದೇಶದ ಪ್ರಮುಖ ಮೆಟ್ರೋ ನಗರಗಳಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ.

ಪ್ರಸ್ತುತ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಮತ್ತು ಇಂಡಿಗೋ ವಿಮಾನಯಾನ ಸಂಸ್ಥೆಗಳು ಸೇವೆ ನೀಡುತ್ತಿವೆ. ಅಕ್ಟೋಬರ್ 10ರಿಂದ ಸ್ಪೈಸ್‌ ಜೆಟ್‌ ಶಿವಮೊಗ್ಗದಿಂದ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ಸದ್ಯ ಶಿವಮೊಗ್ಗದಿಂದ ಬೆಂಗಳೂರು, ಹೈದರಾಬಾದ್, ತಿರುಪತಿ, ಗೋವಾಕ್ಕೆ ವಿಮಾನ ಸೇವೆ ಇದೆ. ಅಕ್ಟೋಬರ್‌ನಿಂದ ಚೆನ್ನೈಗೂ ವಿಮಾನ ಹಾರಾಟ ಪ್ರಾರಂಭವಾಗಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಮೂಲಕ ನಿರ್ವಹಣೆಯಾಗುತ್ತಿದೆ. ರಾಜ್ಯದಲ್ಲಿ ನಿಗಮ ನಿರ್ವಹಣೆ ಮಾಡುತ್ತಿರುವ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಶಿವಮೊಗ್ಗದ್ದು. ಸೋಗಾನೆ ಗ್ರಾಮದಲ್ಲಿ ಸುಮಾರು 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹವಾಮಾನ ವೈಪರೀತ್ಯ ಮತ್ತು ರಾತ್ರಿ ವೇಳೆಯೂ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗುವಂತೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ, ಶೀಘ್ರವೇ ಇದು ಪೂರ್ಣಗೊಳ್ಳಲಿದೆ ಎಂದು ಹೇಳಿದೆ. ಏರ್‌ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆಯೂ ರನ್‌ ವೇ ವಿನ್ಯಾಸ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+