ಶಿವಮೊಗ್ಗ : ವಿದ್ಯಾರ್ಥಿನಿ ಕಿಡ್ನಾಪ್ ಯತ್ನ, ನಾಲೆಗೆ ಎಸೆದ ದುಷ್ಕರ್ಮಿಗಳು
ಶಿವಮೊಗ್ಗ, ಸೆಪ್ಟೆಂಬರ್ 20 : 10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಲು ಯತ್ನಿಸಿ ಬಳಿಕ ನಾಲೆಗೆ ಎಸೆದು ಹೋದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬುಧವಾರ ಮಲ್ಲಿಕಾರ್ಜುನ ನಗರದ ಬಳಿ ಈ ಘಟನೆ ನಡೆಸಿದೆ. ಮಾರುತಿ ಓಮ್ನಿ ವ್ಯಾನಿನಲ್ಲಿ ಬಂದಿದ್ದ ದುಷ್ಕರ್ಮಿಗಳು 10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಲು ಪ್ರಯತ್ನ ನಡೆಸಿದ್ದಾರೆ.

ಅಪಹರಣ ಮಾಡಿಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಇದರಿಂದ ಗಾಬರಿಗೊಂಡ ಮೂವರು, ಆಕೆಯನ್ನು ತುಂಗಾ ನಾಲೆಗೆ ಎಸೆದು ಪರಾರಿಯಾಗಿದ್ದಾರೆ.
ಶಾಲಾ ಬಾಲಕಿ ಅಸ್ವಸ್ಥಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯಿಂದ ಹೇಳಿಕೆ ಪಡೆದಿದ್ದಾರೆ.












Click it and Unblock the Notifications