Karnataka: ಕೃಷಿ ಅನುದಾನ ಗ್ಯಾರೆಂಟಿ ಯೋಜನೆಗಳ ಬಳಕೆ: ಆರಗ ಜ್ಞಾನೇಂದ್ರ
ಶಿವಮೊಗ್ಗ, ಆಗಸ್ಟ್ 07: ರಾಜ್ಯದಲ್ಲಿ ರೈತರಿಗೆ ಅನುಕೂಲವಾಗಲೆಂದು ಕೃಷಿ ವಲಯಕ್ಕೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಿಡಿ ಕಾರಿದ್ದಾರೆ. ಇತ್ತ ಅವರ ವಿರುದ್ಧ ಹಳೆಯ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಲ್ಲಿಕಾರ್ಜು ಖರ್ಗೆ ಅಭಿಮಾನಿಗಳು ದೂರು ದಾಖಲಿಸಿದ್ದಾರೆ.
ಸೋಮವಾರ ಶಿವಮೊಗ್ಗ ದಲ್ಲಿ ಸುದ್ದಿಗಾರರ ಜೊತೆ ಕೆಲವು ವಿಚಾರಗಳ ಕುರಿತು ಮಾತನಾಡಿದ ಅವರು, ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರೆಂಟಿಗಳಿಗೆ ಬಳಕೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ರೈತರ ಶಾಪಕ್ಕೆ ಗುರಿಯಾಗಿದೆ ಎಂದು ಹೇಳಿದರು.

ಈಗಾಗಲೇ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ವರ್ಗಾವಣೆಯಲ್ಲಿದ್ದ ಲೋಪಗಳನ್ನು ಸರಿ ಮಾಡಿದ್ದೆವು. ಇದೀಗ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಇನ್ನೂ ಶಿವಮೊಗ್ಗ, ಪಶ್ಚಿಮ ಘಟ್ಟಗಳಿಗೆ ಮಾರಕವಾದ ಕಸ್ತೂರಿ ರಂಗನ್ ವರದಿ ಜಾರಿ ಆಗಬಾರದು ಎಂದು ಆಗ್ರಹಿಸಿದರು.
ನಾನು ಅವರ ಹೆಸರನ್ನೇ ಹೇಳಿಲ್ಲ: ಆರಗ
ಈ ಹಿಂದಿನ ಎಐಸಿಸಿ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಹೇಳಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಅವರು, ನಾನು ಮಲ್ಲಿಕಾರ್ಜುನ್ ಖರ್ಗೆ ಅವರ ಹೆಸರನ್ನು ಹೇಳಿಯೇ ಇಲ್ಲ. ನನ್ನ ವಿರುದ್ಧ ಕಾಂಗ್ರೆಸ್‌ನವರು ಸುಳ್ಳು ದೂರು ಹಾಕುತ್ತಿದ್ದಾರೆ. ಕಾಂಗ್ರೆಸ್ ದಲಿತ ವಿರೋಧಿ ಆಗಿದೆ ಎಂದು ಅವರು ಸರ್ಕಾರದ ಮೇಲೆ ಆಕ್ರೋಶ ಹೊರ ಹಾಕಿದರು.

ಮೈಸೂರಿನಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ದೂರು
ಈ ಹಿಂದೆ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿಚಾರವಾಗಿ ಪ್ರತಿಭಟನೆಯೊಂದರಲ್ಲಿ ಮಾತನಾಡುವಾಗ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದರು. ಇದೀಗ 'ಅಖಿಲ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘ' ವು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಆರಗ ಜ್ಞಾನೇಂದ್ರ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.
ಕಸ್ತೂರಿ ರಂಗನ್ ವರದಿ ಅನುಷ್ಠಾನ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ್ಧಾಗಿದೆ. ಈ ಕುರಿತು ಈಶ್ವರ್ ಖಂಡ್ರೆ ಅವರ ಜಾರಿ ಹೇಳಿಕೆ ಕುರಿತು ತಿರುಗೇಟು ನೀಡುವಾಗ ಆರಗ ಜ್ಞಾನೇಂದ್ರ ಅವರು, ಬಿಸಿಲ ನಾಡಿನ ಇವರಿಗೆ ಅರಣ್ಯ ಬಗ್ಗೆ, ಮಲೆನಾಡಿನ ಬಗ್ಗೆ, ಗೊತ್ತಿಲ್ಲ. ರಾಯಚೂರು, ಬೀದರ್‌ನಲ್ಲಿ ಬಿಸಿಲು ಹೆಚ್ಚು ಇದನ್ನು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ನೋಡಿದರೆ ತಿಳಿಯುತ್ತದೆ ಎಂದು ಖರ್ಗೆ ಬಣ್ಣ ಕಪ್ಪು ಎಂದು ಮಾತನಾಡಿದ್ದರು.
ಆರಗ ಜ್ಞಾನೇಂದ್ರ ಅವರ ಈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಆಕ್ರೋಶ ಹೊರ ಹಾಕಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೆ ಎಚ್ಚೆತ್ತು ಹೇಳಿಕೆ ಕುರಿತು ಟ್ವೀಟ್ ಮಾಡಿ ಕ್ಷಮೆ ಕೋರಿದ್ದರು. ಇತ್ತೀಚೆಗೆ ಆ ಭಗ್ಗೆ ಮಾತನಾಡಿದ ಅವರು, ನಾನು ಖಂಡ್ರೆ ಅನ್ನುವ ಬದಲು ಖರ್ಗೆ ಎಂದಿದ್ದೇನೆ ಎಂದು ಸಮರ್ಥನೆ ಮುಂದಾದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications