ಜುಲೈ 1ರಂದು ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪತ್ರಿಕಾ ದಿನಾಚರಣೆ

ಶಿವಮೊಗ್ಗ , ಜೂನ್.19 :ಶಿವಮೊಗ್ಗದಲ್ಲಿ ಜುಲೈ 1ರಂದು ರಾಜ್ಯಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು ಅವರು ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಜುಲೈ 1ರಂದು ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದ್ದು, ಇದುವರೆಗೆ ಬೆಂಗಳೂರಿಗೆ ಸೀಮಿತವಾಗಿದ್ದ ಪತ್ರಿಕಾ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ನಡೆಸುವ ಪರಿಪಾಟವನ್ನು ಮಾಧ್ಯಮ ಅಕಾಡೆಮಿ ಆರಂಭಿಸಿದೆ ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಹ್ಯಾದ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಮಾಧ್ಯಮ ಅಕಾಡೆಮಿ ಪತ್ರಿಕಾ ದಿನಾಚರಣೆ ಆಯೋಜಿಸುತ್ತಿದ್ದು, ಜಿಲ್ಲೆಯ ಎಲ್ಲಾ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

State level patrika dinacharane will be held on July 1 in Shimoga

ಪ್ರಜಾವಾಣಿಯ ದೆಹಲಿ ವಿಶೇಷ ಪ್ರತಿನಿಧಿ ಡಿ.ಉಮಾಪತಿ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಸ್ಥಳೀಯ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜುಲೈ 1ರಂದು ಬೆಳಿಗ್ಗೆ 10ಗಂಟೆಗೆ ಪತ್ರಿಕಾ ದಿನಾಚರಣೆ ಸಮಾರಂಭ ನಡೆಯಲಿದೆ ಎಂದರು.

ಮಂಗಳೂರು ಸಮಾಚಾರ' ಪತ್ರಿಕೆ ಆರಂಭಗೊಂಡ ದಿನವನ್ನು ಪತ್ರಿಕಾ ದಿನಾಚರಣೆ'ಯನ್ನಾಗಿ ಆಚರಿಸಲಾಗುತ್ತಿದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ' ರೆವರೆಂಡ್ ಹರ್ಮನ್ ಮೊಗ್ಲಿಂಗ್ ಅವರು 1843ರ ಜುಲೈ 1ರಂದು ಆರಂಭಿಸಿದ 176ನೇ ವರ್ಷದ ಅಂಗವಾಗಿ ಈ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಶಂಕ್ರಪ್ಪ, ಸದಸ್ಯ ರವಿಕುಮಾರ್ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+