Get Updates
Get notified of breaking news, exclusive insights, and must-see stories!

ರಾಜ್ಯದ ಖ್ಯಾತ ಗಮಕ ಕಲಾವಿದ ಎಚ್‌.ಆರ್. ಕೇಶವಮೂರ್ತಿಗೆ ಪದ್ಮಶ್ರೀ ಪ್ರಶಸ್ತಿ

ಶಿವಮೊಗ್ಗ, ಜನವರಿ 26: 73ನೇ ಗಣರಾಜ್ಯೋತ್ಸವದ ಮುನ್ನಾ ದಿನ ಮಂಗಳವಾರದಂದು ಕೇಂದ್ರ ಸರ್ಕಾರ ನೀಡುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕದ ದಲಿತ ಕವಿ ದಿ.ಸಿದ್ದಲಿಂಗಯ್ಯ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪ್ರಶಸ್ತಿ ಲಭಿಸಿದೆ.

ಖ್ಯಾತ ಗಮಕ ಕಲಾವಿದರಾದ ಎಚ್‌.ಆರ್. ಕೇಶವಮೂರ್ತಿಯವರಿಗೆ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಗೌರವ ಲಭಿಸಿದೆ. ಕಳೆದ ಹಲವು ದಶಕಗಳಿಂದ ಎಚ್‌.ಆರ್. ಕೇಶವಮೂರ್ತಿ ನಿರಂತರವಾಗಿ ಗಮಕ ಕಾರ್ಯಕ್ರಮಗಳ ಮೂಲಕ ಸಂಗೀತ ಕ್ಷೇತ್ರಕ್ಕೆ ಮಾಡಿರುವ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

ಎಚ್‌.ಆರ್. ಕೇಶವಮೂರ್ತಿ ಅವರು ಮೂಲತಃ ಶಿವಮೊಗ್ಗ ಸಮೀಪದ ಮತ್ತೂರು ಹೊಸಳ್ಳಿ. ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಪುತ್ರ. 22 ಫೆಬ್ರವರಿ 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು.

Shivamogga: State-renowned Gamaka Artist HR Kesavamurthy Got Padma Shri Award

ತಂದೆ, ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾದ ಕೇಶವಮೂರ್ತಿ 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡರು. 100ಕ್ಕೂ ಹೆಚ್ಚು ವಿಭಿನ್ನ ರಾಗಗಳಲ್ಲಿ ವಾಚನ ಮಾಡುವ ಮೂಲಕ ಶತಕರಾಗಿ ಎಂಬ ಬಿರುದಿಗೂ ಪಾತ್ರರಾಗಿದ್ದಾರೆ.

ರಾಜ್ಯ ಹಾಗೂ ದೇಶದ ಹಲವೆಡೆ ನಡೆದ ಸಂಗೀತ ಕಾರ್ಯಕ್ರಮಗಳಲ್ಲಿ ಗಮಕ ವಾಚನದ ಮೂಲಕ ಗಮನ ಸೆಳೆದಿರುವ ಕೇಶವಮೂರ್ತಿ ಸಾಧನೆಗೆ ಕುಮಾರವ್ಯಾಸ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಪ್ರಸ್ತುತ ಹೊಸಳ್ಳಿಯಲ್ಲಿ ನೆಲೆಸಿದ್ದಾರೆ.

ಖ್ಯಾತ ಗಮಕ ಕಲಾವಿದ ಎಚ್.ಆರ್. ಕೇಶವಮೂರ್ತಿ ಅವರು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೆಚ್.ಆರ್.ಕೇಶವಮೂರ್ತಿ ಅವರು ಗಮಕ ಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿರಿಸಿದ್ದು, ನೂರಾರು ವಿದ್ಯಾರ್ಥಿಗಳಿಗೆ ಗಮಕ ಕಲೆಯನ್ನು ಉಚಿತವಾಗಿ ಕಲಿಸುವ ಮೂಲಕ ಮಾದರಿಯಾಗಿದ್ದಾರೆ. ಅವರ ಶೈಲಿಯು ಕೇಶವಮೂರ್ತಿ ಘರಾನಾ ಎಂದೇ ಖ್ಯಾತವಾಗಿದ್ದು, ಇದೀಗ ಪದ್ಮಶ್ರೀ ಪ್ರಶಸ್ತಿಯನ್ನು ಪಡೆಯುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಮಾತ್ರವಲ್ಲದೇ, ಇಡೀ ರಾಜ್ಯಕ್ಕೆ ಖ್ಯಾತಿ ತಂದಿದ್ದಾರೆ.

ಎಚ್‌.ಆರ್. ಕೇಶವಮೂರ್ತಿ ಅವರು ಹೆಗ್ಗೋಡು, ಮತ್ತೂರು, ಶಿವಮೊಗ್ಗ, ಮೈಸೂರು, ಬೆಂಗಳೂರು, ಗದಗ ಹಾಗೂ ಹೊರ ರಾಜ್ಯಗಳು ಸೇರಿದಂತೆ ಅನೇಕ ಕಡೆ ಸುಮಾರು ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳನ್ನು ನೀಡುತ್ತ ಬಂದಿದ್ದಾರೆ.

ಹಿರಿಯ ವ್ಯಾಖ್ಯಾನಕಾರರಾಗಿದ್ದ ವ್ಯಾಖ್ಯಾನ ವಾಚಸ್ಪತಿ ಮತ್ತೂರು ಲಕ್ಷ್ಮೀಕೇಶವ ಶಾಸ್ತ್ರಿಯವರ ವ್ಯಾಖ್ಯಾನದೊಂದಿಗೆ ಸಮಗ್ರ ಕುಮಾರವ್ಯಾಸ ಭಾರತದ 135 ಧ್ವನಿ ಸುರುಳಿಗಳು, ಮಾರ್ಕಂಡೇಯ ಅವಧಾನಿ ಅವರ ವ್ಯಾಖ್ಯಾನದೊಂದಿಗೆ 35 ಧ್ವನಿ ಸುರುಳಿಗಳಲ್ಲಿ ಜೈಮಿನಿ ಭಾರತ ಹೊರ ಬಂದಿದೆ.

ಡಾ. ಮತ್ತೂರು ಕೃಷ್ಣಮೂರ್ತಿ ಮತ್ತು ಕೇಶವಮೂರ್ತಿಗಳ ಜೋಡಿ ಜಗತ್ಪ್ರಸಿದ್ಧವಾಗಿದ್ದು, ಇವರಿಬ್ಬರ ವಾಚನ ವ್ಯಾಖ್ಯಾನದಲ್ಲಿ ಕುಮಾರವ್ಯಾಸ ಭಾರತದ 200 ಕ್ಯಾಸೆಟ್‌ಗಳು ಬಿಡುಗಡೆಯಾಗಿವೆ.

ಪದ್ಮಶ್ರೀ ಪ್ರಶಸ್ತಿ ಪಡೆದ ಕರ್ನಾಟಕದ ಇತರ ಸಾಧಕರು
ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಇಂಜಿನಿಯರಿಂಗ್), ಎಚ್​.ಆರ್. ಕೇಶವಮೂರ್ತಿ (ಕಲೆ, ಸಂಗೀತ), ಅಬ್ದುಲ್ ಖಾದರ್ ನಡಕಟ್ಟಿನ, ಅಮೈ ಮಹಾಲಿಂಗ ನಾಯ್ಕ (ಕೃಷಿ), ಡಾ. ಸಿದ್ದಲಿಂಗಯ್ಯ (ಸಾಹಿತ್ಯ ಮತ್ತು ಶಿಕ್ಷಣ) ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+