ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಕಾರಿನ ಮೇಲೆ ಕಲ್ಲು ತೂರಾಟ, ಬಿಗುವಿನ ವಾತಾವರಣ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 07; ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ, ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನರು ಗುಂಪು ಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೇ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

ಶಿವಮೊಗ್ಗ: ಹುಡುಗಿಯ ಫೋಟೊ ತೋರಿಸುವುದಾಗಿ ನಂಬಿಸಿ ಮನೆಗೆ ಕರೆಯಿಸಿಕೊಂಡು ಕೊಲೆ ಶಿವಮೊಗ್ಗ: ಹುಡುಗಿಯ ಫೋಟೊ ತೋರಿಸುವುದಾಗಿ ನಂಬಿಸಿ ಮನೆಗೆ ಕರೆಯಿಸಿಕೊಂಡು ಕೊಲೆ

ಶಿವಮೊಗ್ಗದಿಂದ ಕಾರು ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಶಿವಮೊಗ್ಗ: ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣಶಿವಮೊಗ್ಗ: ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣ

Stones Pelted At Car In Indira Nagar SP Visits Spot

ಸೂಳೆಬೈಲು ಇಂದಿರಾ ನಗರದ ಬಳಿಕ ಇಬ್ಬರು ಅಥವಾ ಮೂವರು ದುಷ್ಕರ್ಮಿಗಳು ಕಾರಿನ ಹಿಂಬದಿಗೆ ಕಲ್ಲು ತೂರಿದ್ದಾರೆ. ಕಾರಿನ ಹಿಂಬದಿಯ ಗಾಜು ಪುಡಿಯಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರಿಡುವಂತೆ ಒತ್ತಾಯವಿದೆ?ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರಿಡುವಂತೆ ಒತ್ತಾಯವಿದೆ?

ಬಿಗುವಿನ ವಾತಾವರಣ; ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೂಳೆಬೈಲಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಹಿಂದೂ ಸಂಘಟನೆ ಪ್ರಮುಖರು, ಕಾರ್ಯಕರ್ತರು ಸೂಳೆಬೈಲಿನಲ್ಲಿ ಜಮಾಯಿಸಿದರು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಅಂಗಡಿ ಮುಂಗಟ್ಟು ಬಂದ್ ಮಾಡಿಸಿದರು. ಗುಂಪು ಸೇರದಂತೆ ನಿಯಂತ್ರಿಸಿದರು.

ಸ್ಥಳಕ್ಕೆ ಎಸ್‌ಪಿ ಭೇಟಿ; ಇನ್ನು ಕಾರಿಗೆ ಕಲ್ಲು ತೂರಿದ ವಿಚಾರ ಗೊತ್ತಾಗುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದರು. ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ತುಂಗಾ ನಗರ ಠಾಣೆ ಪೊಲೀಸರು ಸೇರಿದಂತೆ ಹೆಚ್ಚುವರಿ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಿದ್ದಾರೆ.

shivamogga sp

ಮತ್ತೊಂದೆಡೆ ಹಿಂದೂ ಸಂಘಟನೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ದೂರು ನೀಡಲು ರಾತ್ರೋರಾತ್ರಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಭೇಟಿಗೆ ನೀಡಲು ನಿರ್ಧರಿಸಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಅವರು ಭೇಟಿ ನೀಡಿದ್ದರಿಂದ ಅಲ್ಲಿಯೇ ಅವರನ್ನು ಭೇಟಿಯಾದರು. ಸೂಳೆಬೈಲು ರಸ್ತೆಯಲ್ಲಿನ ಪರಿಸ್ಥಿತಿ ಕುರಿತು ಮಾಹಿತಿ ನೀಡಿದರು.

ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕಲ್ಲು ಹೊಡೆದವರ ಪತ್ತೆ ಕಾರ್ಯ ನಡೆಯುತ್ತಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

English summary
Unidentified persons threw stones at cars at Indira Nagar in Shivamogga. Superintendent of police visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X