ಕಿಚ್ಚ ಸುದೀಪ್ ಚಾರಿಟೆಬಲ್ ವತಿಯಿಂದ ವಿಭಿನ್ನವಾಗಿ ಸುದೀಪ್ ಜನ್ಮದಿನ ಆಚರಣೆ
ಶಿವಮೊಗ್ಗ, ಸೆಪ್ಟೆಂಬರ್ 2: ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಅವರ ಜನ್ಮದಿನದ ಅಂಗವಾಗಿ ಶಿವಮೊಗ್ಗದಲ್ಲಿ ಕಿಚ್ಚ ಸುದೀಪ್ ಚಾರಿಟೆಬಲ್ ವತಿಯಿಂದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕೊರೊನಾ ವಾರಿಯರ್ಸ್ ಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ.
ಶಿವಮೊಗ್ಗದ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ನಟ ಕಿಚ್ಚ ಸುದೀಪ್ ಹೆಸರಿನಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಶಿವಮೊಗ್ಗದ ವಿವಿಧ ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೆ ಮಾಸ್ಕ್ ವಿತರಣೆ ಮಾಡಿದರು.

ನಟ ಕಿಚ್ಚ ಸುದೀಪ್ ತಮ್ಮ ಜನ್ಮದಿನದ ಅಂಗವಾಗಿ ಯಾರೂ ದುಂದುವೆಚ್ಚ ಮಾಡಬೇಡಿ ಹಾಗೂ ತಮ್ಮ ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿದ್ದರು. ಅದರಂತೆ ಶಿವಮೊಗ್ಗ ನಗರದಲ್ಲಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಾಗೂ ಸುದೀಪ್ ಅವರ ಅಪ್ಪಟ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಣೆ ಮಾಡಿದರು.

ನಗರದ ಪ್ರಮುಖ ಆಶ್ರಮಗಳ ಮಕ್ಕಳಿಗೆ ಊಟ ವಿತರಿಸಿ ಹಾಗೂ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ನರ್ಸ್ ಗಳು, ಪೌರಕಾರ್ಮಿಕರಿಗೆ ಮಾಸ್ಕ್ ವಿತರಸಿ ದೇವಸ್ಥಾನಗಳ ಪೂಜೆ ಸಲ್ಲಿಸಿದರು. ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಕಿಚ್ಚ ಸುದೀಪ್ ಅವರ ಹೆಸರಿಗೆ ಗೌರವ ನೀಡುವ ಕೆಲಸವನ್ನು ಅವರ ಅಭಿಮಾನಿಗಳು ನೆರವೇರಿಸಿ ಮಾದರಿಯಾಗಿದ್ದಾರೆ.












Click it and Unblock the Notifications