ಶಿವಮೊಗ್ಗ; ಮಹಿಳಾ ಮತದದಾರರ ಸಂಖ್ಯೆಯಲ್ಲಿ ಗಣನೀಯ ಏರಿಕೆ

ಬೆಂಗಳೂರು, ಜನವರಿ 22: ಶಿವಮೊಗ್ಗ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ನೋಂದಣಿಯಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ ನೋಂದಣಿಯಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮತದಾರರ ಪಟ್ಟಿಯ ಕುರಿತು ವಿವರಗಳನ್ನು ನೀಡಿದರು.

Surge In Women Voters In Shivamogga District

ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ಪ್ರಸ್ತುತ ಜಿಲ್ಲೆಯ 7 ತಾಲೂಕುಗಳ ವ್ಯಾಪ್ತಿಯಲ್ಲಿ 1793 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 7,31,779 ಪುರುಷ, 7,51,159 ಮಹಿಳೆಯರು ಸೇರಿದಂತೆ ಒಟ್ಟು 14,82,938 ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ" ಎಂದರು.

ಮತದಾರರ ವಿವಿರ; ಇದುವರೆಗೂ ನೋಂದಣಿಯಾದಂತೆ ಕಳೆದ ವಿಧಾನಸಭಾ ಚುನಾವಣೆಯ ಮತದಾರರ ಸಂಖ್ಯೆಯನ್ನು ಗಮನಿಸಿದಾಗ 20,500 ಮಹಿಳಾ ಮತದಾರರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಲೋಕಸಭೆ ಚುನಾವಣೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಸಹ ಅವಕಾಶವಿದೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳು. 1,06,200 ಪುರುಷ, 1,08,433ಮಹಿಳೆಯರು ಸೇರಿದಂತೆ ಒಟ್ಟು 2,14,633 ಮತದಾರರು ಇದ್ದಾರೆ. ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ 253 ಮತಗಟ್ಟೆಗಳಿದ್ದು, 103183 ಪುರುಷ, 1,09,587 ಮಹಿಳೆಯರು ಸೇರಿದಂತೆ ಒಟ್ಟು 2,12,770 ಮತದಾರರು ಇದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ 288 ಮತಗಟ್ಟೆಗಳಿದ್ದು, 129019 ಪುರುಷ, 135700 ಮಹಿಳೆಯರು ಸೇರಿದಂತೆ ಒಟ್ಟು 2,64,719 ಮತದಾರರು ಇದ್ದಾರೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 258 ಮತಗಟ್ಟೆಗಳಿದ್ದು, 92,921 ಪುರುಷ, 95,640 ಮಹಿಳೆಯರು ಸೇರಿದಂತೆ ಒಟ್ಟು 1,88,561ಮತದಾರರು ಇದ್ದಾರೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ 235 ಮತಗಟ್ಟೆಗಳಿದ್ದು, 100456 ಪುರುಷ, 1,00,212 ಮಹಿಳೆಯರು ಸೇರಿದಂತೆ ಒಟ್ಟು 2,00,668 ಮತದಾರರು ಇದ್ದಾರೆ. ಸೊರಬ ವಿಧಾನಸಭಾ ಕ್ಷೇತ್ರದಲ್ಲಿ 239 ಮತಗಟ್ಟೆಗಳಿದ್ದು, 98,147 ಪುರುಷ, 97260 ಮಹಿಳೆಯರು ಸೇರಿದಂತೆ ಒಟ್ಟು 1,95,407 ಮತದಾರರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ 271 ಮತಗಟ್ಟೆಗಳಿದ್ದು, 101853 ಪುರುಷರು, 104327 ಮಹಿಳೆಯರು ಸೇರಿದಂತೆ ಒಟ್ಟು 2,06,180 ಮತದಾರರಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಕಳೆದ ಚುನಾವಣೆಯಲ್ಲಿ 1775 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಅವುಗಳೊಂದಿಗೆ ಮತದಾರರ ಸಂಖ್ಯೆಯಲ್ಲಿ ಆಗಿರಬಹುದಾದ ಹೆಚ್ಚಳ, ಹಳೆ ಕಟ್ಟಡಗಳ ಬದಲಾವಣೆ, ಖಾಸಗಿ ಕಟ್ಟಡ ಹಾಗೂ ಹಲವು ಕಾರಣಗಳಿಗಾಗಿ 19 ಮತಗಟ್ಟೆಗಳನ್ನು ಹೆಚ್ಚಳ ಮಾಡಲಾಗಿದೆ.

ಲಿಂಗತ್ವ ಅಲ್ಪಸಂಖ್ಯಾತರ 3ಜನರನ್ನು ಒಳಗೊಂಡು 18-19ವರ್ಷ ವಯೋಮಿತಿಯೊಳಗಿನ 27,118ಮತದಾರರು, ಲಿಂಗತ್ವ ಅಲ್ಪಸಂಖ್ಯಾತರ 25 ಜನರನ್ನು ಒಳಗೊಂಡು 20-29 ವರ್ಷ ವಯೋಮಿತಿಯೊಳಗಿನ 14,26,240 ಮತದಾರರು, 80-99 ವರ್ಷ ವಯೋಮಿತಿಯೊಳಗಿನ 29,327 ಮತದಾರರು ಹಾಗೂ 100-120+ ವರ್ಷ ವಯೋಮಿತಿಯೊಳಗಿನ 253 ಮಂದಿ ಮತದಾರರು ಜಿಲ್ಲೆಯಲ್ಲಿದ್ದಾರೆ.

80+ ವಯೋಮಿತಿಯ ಮತದಾರರು ಹಾಗೂ ವಿಕಲಚೇತನರು ನಿಯಮಾನುಸಾರ ಕೋರಿಕೆ ಸಲ್ಲಿಸಿದಲ್ಲಿ ಅವರಿರುವಲ್ಲಿಯೇ ಮತದಾನಕ್ಕೆ ಅವಕಾಶ ಒದಗಿಸಲಾಗುತ್ತದೆ. ಕಳೆದ ಸಾಲಿನಲ್ಲಿ ಸುಮಾರು 5,00ಕ್ಕೂ ಹೆಚ್ಚಿನ ಮತದಾರರು ಈ ಸೌಲಭ್ಯವನ್ನು ಬಳಸಿಕೊಂಡಿದ್ದರು. ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಹೆಸರುಗಳು ಸೇರ್ಪಡೆಗೊಂಡಿರುವ ಬಗ್ಗೆ ಜನರು ಪರಿಶೀಲಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಸಾರ್ವಜನಿಕರು ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಅಥವಾ ಮತದಾರರೇ ನೇರವಾಗಿ ಜಾಲತಾಣ : http://www.nvsp.in ಮತ್ತು http://voterportal.eci.gov.in marte voter Helpline App ಗಳ ಮೂಲಕ ಅರ್ಜಿ ಸಲ್ಲಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+