ಜಲ ಜೀವನ್ ಮಿಷನ್ ಕುರಿತು ನಡೆಯಲಿದೆ ಅಧ್ಯಯನ
ಶಿವಮೊಗ್ಗ, ಮೇ 07: ಜಲ ಜೀವನ್ ಮಿಷನ್ ಯೋಜನೆ ಕುರಿತು ಚರ್ಚೆಗಳು ಸಾಗಿವೆ. ಹಲವು ಗ್ರಾಮಗಳಲ್ಲಿ ಈ ಯೋಜನೆ ಯಶಸ್ವಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛ ಕುಡಿಯುವ ನೀರು ಒದಗಿಸುವ ಈ ಯೋಜನೆಯ ಕುರಿತು ಅಧ್ಯಯನ ನಡೆಯಲಿದೆ. ಯೋಜನೆ ಕುರಿತು ಅಧ್ಯಯನ ಕೈಗೊಂಡು ಯೋಜನೆಯನ್ನು ಎಲ್ಲ ಅರ್ಹರಿಗೆ ತಲುಪುವಂತೆ ಮಾಡುವುದು ಇದರ ಗುರಿಯಾಗಿದೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸಂಸದ ಬಿ. ವೈ. ರಾಘವೇಂದ್ರ ಮಾತನಾಡಿದರು. "ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜೆಜೆಎಂ ಯೋಜನೆಯಡಿ ಜಿಲ್ಲೆಯಲ್ಲಿ ಅಧ್ಯಯನ ಕೈಗೊಂಡು ಯೋಜನೆಯನ್ನು ಎಲ್ಲ ಅರ್ಹರಿಗೆ ತಲುಪಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು" ಸಂಸದರು ಅಧಿಕಾರಿಗಳಿಗೆ ತಿಳಿಸಿದರು.

"ಜೆಜೆಎಂ ಅಡಿಯಲ್ಲಿ ಅಂದಾಜು ರೂ.10.75 ಕೋಟಿ ಮೊತ್ತದಲ್ಲಿ ಒಟ್ಟು 2528 ಕಾಮಗಾರಿ ಮಂಜೂರಾಗಿದ್ದು 2507 ಕಾಮಗಾರಿ ಪ್ರಾರಂಭಗೊಂಡಿವೆ. 699 ಪ್ರಗತಿಯಲ್ಲಿದ್ದು 1808 ಪೂರ್ಣಗೊಂಡಿವೆ. ಯಾವುದೇ ಹೊಸ ಕಾಮಗಾರಿ ಕೈಗೊಳ್ಳುವ ಮುನ್ನ ಅಧಿಕಾರಿಗಳು ಯೋಜನೆಯ ಪೂರ್ವ ಪರಿಶೀಲನೆ ಕೈಗೊಳ್ಳಬೇಕು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಪಡೆದು ಮುನ್ನಡೆಯಬೇಕು" ಎಂದು ಸಂಸದರು ಹೇಳಿದರು.
ವಿವಿಧ ಯೋಜನೆಗಳ ಕುರಿತು ಚರ್ಚೆ: ಸಭೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಚರ್ಚೆಗಳು ನಡೆದವು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಕಟ್ಟಲು ರೂ.1.20 ಲಕ್ಷ ಘಟಕ ವೆಚ್ಚ ನೀಡಲಾಗುತ್ತಿದ್ದು, ಕೆಲ ಫಲಾನುಭವಿಗಳು ಘಟಕ ವೆಚ್ಚ ಸಾಲುತ್ತಿಲ್ಲವೆಂದು ಈ ಹಣವನ್ನು ಹಿಂದಿರುಗಿಸಿದ್ದಾರೆ. ಕೆಲವೆಡೆ ಹಕ್ಕುಪತ್ರ ಇದ್ದವರಿಗೆ ಮಾತ್ರ ನೀಡಲಾಗುತ್ತಿದೆ. ಅನಧಿಕೃತ ಜಾಗಗಳನ್ನು ಸಕ್ರಮಗೊಳಿಸುವ ಹಾಗೂ ಅರ್ಹರಿಗೆ ಈ ಯೋಜನೆಯನ್ನು ತಲುಪಿಸಬೇಕೆಂದು ಎಂದು ಸಂಸದರು ಸೂಚನೆ ನೀಡಿದರು.
ಅಮೃತ್-1 ಯೋಜನೆಯಡಿ ಕುಡಿಯುವ ನೀರು ಯೋಜನೆ ಪೂರ್ಣಗೊಂಡಿದೆ. ಅಮೃತ್-2 ಯೋಜನೆಯಡಿ 7 ಪಟ್ಟಣಗಳಲ್ಲಿ ಟೆಂಡರ್ ಆಗಿದ್ದು ಸರ್ವೇ ಕಾರ್ಯ ನಡೆಯುತ್ತಿದೆ ಎಂದು ಕರ್ನಾಟಕ ನಗರ ಕುಡಿಯುವ ನೀರು ಸರಬರಾಜು ಮಂಡಳಿ ಎಇಇ ತಿಳಿಸಿದರು. ಹೊಸದಾಗಿ ನೀಡಿರುವ ಕುಡಿಯುವ ನೀರಿನ ಸಂಪರ್ಕದಲ್ಲಿ ನೀರು ಬರುತ್ತಿಲ್ಲ ಬದಲಾಗಿ ಹಳೆಯ ಪೈಪ್‌ನಲ್ಲೇ ನೀರು ಬರುತ್ತಿದ್ದು ಇದನ್ನು ಪರಿಶೀಲಿಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಯಿತು.
ದಿಶಾ ಸಮಿತಿ ಸದಸ್ಯ ಗುರುಮೂರ್ತಿ ಮಾತನಾಡಿ, ಜಿಲ್ಲೆಯ ಮೊರಾರ್ಜಿ ಶಾಲೆಗಳ ರಿಪೇರಿಗೆ 2024ರಲ್ಲೇ ರೂ.3.96 ಕೋಟಿ ಹಣ ಶಿವಮೊಗ್ಗ ಜಿಲ್ಲೆಯ ಲ್ಯಾಂಡ್ ಆರ್ಮಿಗೆ ಮಂಜೂರಾಗಿದ್ದು ಈವೆರೆಗೆ ಜಿಲ್ಲೆಗೆ ಹಣ ಬಿಡುಗಡೆಯಾಗಿಲ್ಲ. ಕೇಂದ್ರ ಕಚೇರಿಯಲ್ಲೇ ಇಟ್ಟುಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, "ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಪ್ರಗತಿ ಕಡಿಮೆ ಇದ್ದಂತಿದೆ. ಶಿವಮೊಗ್ಗ ನಗರದಲ್ಲೇ 12 ಸಾವಿರ ಹೆರಿಗೆ ಆಗುತ್ತದೆ. ಆದರೆ ಜಿಲ್ಲಾ ಯೋಜನೆ ಗುರಿ ಕೇವಲ 8524 ಇದ್ದು 2024 ರ ಏಪ್ರಿಲ್ ನಿಂದ 2025ರ ಮಾರ್ಚ್ ತನಕ 7395 ಫಲಾನುಭವಿ ಶೇ.87 ಪ್ರಗತಿ ಸಾಧಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆ ಹೆಚ್ಚಾಗಿ ಆಗುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು" ಎಂದು ತಿಳಿಸಿದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, "ಮಲೆನಾಡು ಭಾಗದಲ್ಲಿ ಇಂಗ್ಲಿಷ್ ಮಾಧ್ಯಮವನ್ನು ನೀಡದ ಕಾರಣ ಮಕ್ಕಳನ್ನು ನಗರಕ್ಕೆ ಕಳುಹಿಸಲಾಗುತ್ತಿದೆ. ಎಸ್‌ಸಿ/ ಎಸ್‌ಟಿ, ಬಡವರ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಇಂತಹ ಗ್ರಾಮೀಣ ಭಾಗ ಶಾಲೆಗಳಿಗೆ ಇಂಗ್ಲಿಷ್ ಮಾಧ್ಯಮ ನೀಡಿದರೆ ಬದುಕುತ್ತವೆ. ಕಳೆದ ಸಾಲಿಗೆ ಹೋಲಿಸಿದರೆ ಈ ವರ್ಷ 11 ಶಾಲೆಗಳು ಬಂದ್ ಆಗಿವೆ. ಇಂಗ್ಲಿಷ್ ಮಾಧ್ಯಮಗಳ ಆರಂಭಕ್ಕೆ ನೀಡಿದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಕಳುಹಿಸುವಂತೆ" ಕೋರಿದರು.
ಡಿಡಿಪಿಐ ಮಂಜುನಾಥ್, ಜಿಲ್ಲೆಯಿಂದ ಇಂಗ್ಲಿಷ್/ ಕನ್ನಡ ಮಾಧ್ಯಮ ದ್ವಿಭಾಷೆ ಮಾಧ್ಯಮಕ್ಕಾಗಿ 32 ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಪ್ರತಿ ತರಗತಿಗೆ ಕನಿಷ್ಟ 25 ವಿದ್ಯಾರ್ಥಿಗಳಿರಬೇಕೆಂಬ ನಿಯಮವಿದ್ದರೂ ತಾಲ್ಲೂಕುಗಳಿಂದ ಬಂದಂತಹ ಎಲ್ಲ 32 ಪ್ರಸ್ತಾವನೆಯನ್ನು ಕಳುಸಹಿಲಾಗಿದೆ. ಜಿಲ್ಲೆಯಲ್ಲಿ 10 ಕೆಪಿಎಸ್ ಶಾಲೆಗಳು ಚಾಲ್ತಿಯಲ್ಲಿದ್ದು 19 ಕೆಪಿಎಸ್ ಶಾಲೆ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸಂಸದರು, ಶಾಸಕರು ಹಾಗೂ ದಿಶಾ ಸಮಿತಿ ಸದಸ್ಯರು, ಮಲೆನಾಡು ಭಾಗದಲ್ಲಿ ಪ್ರತಿ ತರಗತಿಯಲ್ಲಿ 25 ವಿದ್ಯಾರ್ಥಿಗಳು ದಾಖಲಾಗುವುದು ಕಷ್ಟ. ಆದ್ದರಿಂದ ಮಲೆನಾಡು ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕೆಂದು ದಿಶಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕಳುಹಿಸಲು ನಿರ್ಧರಿಸಿದರು.
ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಶಾಲೆಗಳಿಗೆ ಅಡುಗೆ ಸಿಲಿಂಡರ್ ವಿತರಣೆ ವೇಳೆ 6 ಕಿ. ಮೀ. ನಂತರ ಪ್ರತಿ ಕಿ. ಮೀ. ಗೆ ರೂ.1.60 ಪೈಸೆಯನ್ನು ಏಜೆನ್ಸಿಗಳು ವಸೂಲಿ ಮಾಡುತ್ತಿದ್ದಾರೆ ಮತ್ತು ಗೃಹಬಳಕೆಯ ಸಿಲಿಂಡರ್‌ಗೆ ರೂ. 40 ರಿಂದ 60 ವಸೂಲಿ ಮಾಡುತ್ತಿದ್ದು ಈ ವಸೂಲಾತಿಗೆ ರಶೀದಿ ನೀಡುವಂತೆ ತಿಳಿಸಿದ ಅವರು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಸಂಸದರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಗಳನ್ನು ನಿಗದಿತ ವೇಳೆಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಗಮಾರಿ ಕೈಗೊಳ್ಳಬೇಕು. ಹೊಳೆಹೊನ್ನೂರು ಬೈಪಾಸ್ ರಸ್ತೆಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೆ ಅನುವು ಮಾಡಿಕೊಡಬೇಕು ಹಾಗೂ ಸಿಗಂದೂರು ಸೇತುವೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕೆಂದು ಸೂಚನೆ ನೀಡಿದರು. ಬಹು ಗ್ರಾಮ ನೀರಿನ ಯೋಜನೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದರು.
ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿಗಳಿಗೆ ರೂ. 3.70 ಕೋಟಿ ಕಾಮಗಾರಿಯನ್ನು ಕಾನೂನುಬದ್ದವಾಗಿ ಕ್ರಿಯಾ ಯೋಜನೆ ಮೂಲಕ ಅನುಮೋದಿಸುವ ಅವಕಾಶವಿದ್ದು ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಕೇವಲ 30 ರಿಂದ 40 ಲಕ್ಷಕ್ಕೆ ಮಿತಗೊಳಿಸುತ್ತಿರುವುದು ಕಂಡು ಬಂದಿದ್ದು ಈ ರೀತಿ ಮಿತಿಗೊಳಿಸದೇ ಅನುಮೋದನೆ ನೀಡಬೇಕೆಂದರು ಹಾಗೂ ಫಾರಂ 16 ನೀಡಿದ 15 ದಿಗನಳ ಒಳಗೆ ನರೇಗಾ ಅಡಿಯಲ್ಲಿ ಕೆಲಸ ನೀಡಬೇಕು ಎಂದು ಹೇಳಿದರು.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್












Click it and Unblock the Notifications