ಕಾನಕೇರಿಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಾಸ್ಪದ ಸಾವು
ಸೊರಬ, ಜುಲೈ 16: ಪಟ್ಟಣದ ಕಾನಕೇರಿಯ ಹಾಸ್ಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಅಶ್ವಿನಿ ಕಲ್ಲಹಳ್ಳಿ ಮೃತಪಟ್ಟ ಯುವತಿ.
ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ನಿವಾಸಿ ಅಶ್ವಿನಿ ಕಳೆದ ವರ್ಷ ಜೂನ್ ನಲ್ಲಿ ಕಾನಕೇರಿಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಕೆಲಸದವರಾಗಿ ಸೇರಿಕೊಂಡಿದ್ದರು. ಇದೇ ನಗರದಲ್ಲಿ ಬಾಡಿಗೆ ಮನೆಯಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಇವರ ಸ್ನೇಹಿತೆ ಕೂಡ ಮತ್ತೊಂದು ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು.
ಜುಲೈ 14ರ ಸಂಜೆ ಅಶ್ವಿನಿ ಹಾಸ್ಟೆಲ್ ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಅಂದು ರಾತ್ರಿ ಅವರ ಸ್ನೇಹಿತೆ ಹಾಸ್ಟೆಲ್ ನಲ್ಲೇ ಉಳಿದುಕೊಂಡಿದ್ದರು. ಸೋಮವಾರ ಬೆಳಿಗ್ಗೆ ಮನೆಗೆ ಬಂದು ನೋಡಿದಾಗ ಅಶ್ವಿನಿ ಮೃತಪಟ್ಟಿರುವ ವಿಷಯ ತಿಳಿದುಬಂದಿದೆ.

ಹೇಗೆ ಸತ್ತಿರಬಹುದು ಎಂಬುದು ತಿಳಿದುಬಂದಿಲ್ಲ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಅಶ್ವಿನಿ ಮೊಬೈಲ್ ಪತ್ತೆಯಾಗಿಲ್ಲ. ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ದಾಖಲಿಸಲಾಗಿದೆ.












Click it and Unblock the Notifications