ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದಿದ್ದ ವೃದ್ಧೆ ಮನೆಗೆ ತೆರಳಿ ಮಂಜೂರಾತಿ ಪತ್ರ ನೀಡಿದ ತಹಶೀಲ್ದಾರ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 21: ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ಗಂಟೆಗಟ್ಟಲೇ ಕುಳಿತು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ಸ್ವತಃ ತೆರಳಿದ ತಹಶೀಲ್ದಾರ್ ವಿ.ಎಸ್.ರಾಜೀವ್ ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಶುಕ್ರವಾರ ವೃದ್ಧೆ ಸಾದಮ್ಮ ಬೆಳಗ್ಗೆ 9.30ಕ್ಕೆ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನವಾದರೂ ಗ್ರಾಮ ಲೆಕ್ಕಿಗ ಮಂಜಪ್ಪ ಕಚೇರಿಗೆ ಆಗಮಿಸಿರಲಿಲ್ಲ. ಕಾದು ಕಾದು ಸುಸ್ತಾಗಿದ್ದ ವೃದ್ಧೆ ಸಾಧಮ್ಮ ಸುಸ್ತಾಗಿ ಕುಸಿದು ಬಿದ್ದಿದ್ದರು. ತಕ್ಷಣ ಸ್ಥಳೀಯರು ಅಜ್ಜಿಯನ್ನು ಉಪಚರಿಸಿ ಅವರ ಪರಿಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದರು. ಗ್ರಾಮ ಲೆಕ್ಕಾಧಿಕಾರಿ ನಡೆಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಪೊಲೀಸರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿ ಶಾಹಿದ್ ಖುರೇಶಿ ಕಾಲಿಗೆ ಗುಂಡುಪೊಲೀಸರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿ ಶಾಹಿದ್ ಖುರೇಶಿ ಕಾಲಿಗೆ ಗುಂಡು

ಈ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ವೃದ್ಧೆ ಸಾದಮ್ಮ ಮನೆಗೆ ಪಿಂಚಣಿಪತ್ರವನ್ನು ತಲುಪಿಸುವಂತೆ ಸೂಚನೆ ನೀಡಿದ್ದರು. ಡಿಸಿ ಸೂಚನೆಯಂತೆ ಮಂಗಳವಾರ ತಹಶೀಲ್ದಾರ್ ವಿ.ಎಸ್.ರಾಜೀವ್ ಫಲಾನುಭವಿಯ ಮನೆಗೆ ತೆರಳಿದ ಪಿಂಚಣಿ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿ ಆರೋಗ್ಯ ವಿಚಾರಿಸಿದ್ಧಾರೆ.

Tahsildar personally Visit old woman house, who waiting for Pension long time

ವಿಳಂಬ ಮಾಡಿದರೆ ಕ್ರಮ

ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡುವವರ ವಿರುದ್ಧ ಕ್ರಮವನ್ನು ಜರುಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸಂಬಂಧಪಟ್ಟ ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿಗೆ ಈಗಾಗಲೇ ನೊಟೀಸ್ ಜಾರಿಗೊಳಿಸಲಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಮಾಹಿತಿ ನೀಡಿದ್ದಾರೆ.

ಪಿಎಂ ಕುಸುಮ ಯೋಜನೆ ಫಲಾನುಭವಿಗಳಾಗಲು ಇಲ್ಲಿದೆ ಮಾಹಿತಿ..ಪಿಎಂ ಕುಸುಮ ಯೋಜನೆ ಫಲಾನುಭವಿಗಳಾಗಲು ಇಲ್ಲಿದೆ ಮಾಹಿತಿ..

ನೊಟೀಸ್‌ನಲ್ಲಿ ಏನಿದೆ?

ನಿಟ್ಟೂರು ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಾಧಿಕಾರಿ ಡಿ.ಪಿ.ಮಂಜಪ್ಪಗೆ ಹೊಸನಗರ ತಹಶೀಲ್ದಾರ್ ವಿ.ಎಸ್.ರಾಜೀವ್ ಸಾದಮ್ಮರಿಗೆ ಮಂಜೂರಾತಿ ಪತ್ರವನ್ನು ನೀಡಲು ತಮಾಡಿದ್ದಕ್ಕೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ. " ಪಿಂಚಣಿ ಮಾಡಿಸಲು ವೃದ್ಧೆ 7 ಕಿ.ಮೀ ನಡೆದು ಬಂದಿದ್ದಾರೆ. ಮದ್ಯಾಹ್ನ 1 ಗಂಟೆಯಾದರೂ ತಾವು ಗ್ರಾಮ ಕಚೇರಿಗೆ ಆಗಮಿಸಿರಲಿಲ್ಲ. ವೃದ್ಧೆ ಅಸ್ವಸ್ಥರಾಗಿದ್ದರಿಂದ ಗ್ರಾಮ ಪಂಚಾಯಿತಿ ಸದಸ್ಯರು, ಸಾರ್ವಜನಿಕರು ನಿಮ್ಮ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ನೀವು ನಿಮ್ಮ ಗ್ರಾಮ ಲೆಕ್ಕಾಧಿಕಾರಿ ವೃತ್ತದಲ್ಲಿ ಅನಧಿಕೃತ ಗೈರು ಹಾಜರಾಗಿರುವುದು ಮತ್ತು ಸರ್ಕಾರಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದೀರಾ. ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ಏಕೆ ಶಿಫಾರಸು ಮಾಡಬಾರದು ಎಂಬುದಕ್ಕೆ 24 ಗಂಟೆಯೊಳಗೆ ಉತ್ತರ ಕೊಡಿ" ಎಂದು ನೊಟೀಸ್‌ನಲ್ಲಿ ಪ್ರಶ್ನಿಸಲಾಗಿದೆ.

English summary
Hosanagara Tahsildar personally Visit old woman house for giving to to pension order. 2 days back she collapsesed infront of village accountant office after waiting 3 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X