ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಗಂಧೂರು ಸೇತುವೆ ಕಾಮಗಾರಿಗೆ ಟೆಂಡರ್ ಅಂತಿಮ

|
Google Oneindia Kannada News

ಶಿವಮೊಗ್ಗ, ಜುಲೈ 19 : ದಶಕಗಳ ಕನಸಾದ ಸಿಗಂಧೂರು ಸೇತುವೆ ನಿರ್ಮಾಣಕ್ಕೆ ಟೆಂಡರ್ ಅಂತಿಮಗೊಂಡಿದೆ. 2.16 ಕಿ.ಮೀ. ದೂರದ ಸೇತುವೆ ನಿರ್ಮಾಣಕ್ಕೆ 2018ರ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ಮಾಡಲಾಗಿತ್ತು.

ಶರಾವತಿ ನದಿ ಹಿನ್ನೀರಿನ ಕಳಸವಳ್ಳಿ-ಅಂಬಾರಗೋಡ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣವಾಗಲಿದೆ. ಸುಮಾರು 360 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಲಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.

ಸಿಗಂದೂರಿಗೆ ಸೇತುವೆ : ದಶಕಗಳ ಕನಸು ನನಸುಸಿಗಂದೂರಿಗೆ ಸೇತುವೆ : ದಶಕಗಳ ಕನಸು ನನಸು

ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಸಾವಿರಾರು ಭಕ್ತರಿಗೆ ಸೇತುವೆ ನಿರ್ಮಾಣದಿಂದ ಅನುಕೂಲವಾಗಲಿದೆ. ಸಿಗಂಧೂರು ಸೇತುವೆ ನಿರ್ಮಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಅಂತ್ಯಗೊಂಡಿದೆ. ಎರಡು ಕಂಪನಿಗಳಿಗೆ ಟೆಂಡರ್ ಅಂತಿಮಗೊಂಡಿದೆ.

ಸಿಗಂದೂರು ದೇವಸ್ಥಾನಕ್ಕೆ ನನ್ನ ತೀರ್ಥಯಾತ್ರೆ- ಶಾಮ್ಸಿಗಂದೂರು ದೇವಸ್ಥಾನಕ್ಕೆ ನನ್ನ ತೀರ್ಥಯಾತ್ರೆ- ಶಾಮ್

Sigandur bridge

ಮಧ್ಯಪ್ರದೇಶದ ದಿಲೀಪ್ ಬಿಲ್ಡ್‌ಕಾನ್ ಲಿಮಿಟೆಡ್ ಮತ್ತು ಚೀನಾ ಮೂಲದ ಶಾನ್ಕ್ಸಿ ರೋಡ್ ಎಂಡ್ ಬ್ರಿಡ್ಜ್‌ ಗೂಪ್ ಕಂಪನಿಗಳಿಗೆ ಟೆಂಡರ್ ಸಿಕ್ಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ ಹಾಗೂ ಒಳನಾಡು ಜಲಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಸಿಗಬೇಕಿದೆ.

ಶಿವಮೊಗ್ಗ ಜಿಲ್ಲೆ ವಿಧಾನಸಭಾ ಕ್ಷೇತ್ರಗಳ ಪರಿಚಯಶಿವಮೊಗ್ಗ ಜಿಲ್ಲೆ ವಿಧಾನಸಭಾ ಕ್ಷೇತ್ರಗಳ ಪರಿಚಯ

2009ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸೇತುವೆ ನಿರ್ಮಾಣಕ್ಕೆ ಅನುದಾನ ಘೋಷಣೆ ಮಾಡಿದ್ದರು. ಆದರೆ, 2018ರಲ್ಲಿ ಯೋಜನೆಗೆ ಶಂಕುಸ್ಥಾಪನೆ ಆಯಿತು. ಈ ಸೇತುವೆ ನಿರ್ಮಾಣದಿಂದ ಹಲವು ಗ್ರಾಮದ ಜನರಿಗೆ ಅನುಕೂಲವಾಗಲಿದೆ.

English summary
Tender process final for construct bridge across Sharavathi river backwater to connect Kalasavalli and Ambaragodlu villages in Sagara taluk, Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X