• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೀರ್ಥಹಳ್ಳಿಯಲ್ಲಿ ನಂದಿತಾ ಸ್ಟೋರ್ ಕಟ್ಟಿದ ಕಾರ್ಯಕರ್ತರು

|

ಶಿವಮೊಗ್ಗ, ಡಿ. 25 : ಅಂದು ಡಿ.12 ತೀರ್ಥಹಳ್ಳಿಯಲ್ಲಿ ಸಾವನ್ನಪ್ಪಿದ 8ನೇ ತರಗತಿ ವಿದ್ಯಾರ್ಥಿನಿ ನಂದಿತಾ ತಂದೆ ಕೃಷ್ಣಮೂರ್ತಿ ಅವರ ದಿನಸಿ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಇಂದು ಡಿ.25 ಅದೇ ಜಾಗದಲ್ಲಿ ಹೊಸ ಕಟ್ಟಡದಲ್ಲಿ 'ನಂದಿತಾ ಸ್ಟೋರ್' ಪುನಃ ಆರಂಭಗೊಂಡಿದೆ.

ತೀರ್ಥಹಳ್ಳಿಯ ಬಾಳೇಬೈಲಿನಲ್ಲಿರುವ ನಂದಿತಾ ತಂದೆ ಕೃಷ್ಣಮೂರ್ತಿ ಅವರ ದಿನಸಿ ಅಂಗಡಿಯನ್ನು ಇಂದು ಪುನಃ ಆರಂಭಿಸಲಾಗಿದೆ. ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ಕಾರ್ಯಕರ್ತರು ದೇಣಿಗೆ ಎತ್ತಿ, ಕೃಷ್ಣಮೂರ್ತಿ ಅವರ ಅಂಗಡಿಯನ್ನು ಪುನಃ ಅದೇ ಸ್ಥಳದಲ್ಲಿ ಕಟ್ಟಿಕೊಟ್ಟಿದ್ದಾರೆ.

ಗುರುವಾರ ಆರಗ ಜ್ಞಾನೇಂದ್ರ, ರೇಣುಕಾನಂದ ಸ್ವಾಮೀಜಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮುಂತಾದವರು ನಂದಿತಾ ಸ್ಟೋರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. [ತೀರ್ಥಹಳ್ಳಿಯಲ್ಲಿ ನಂದಿತಾ ತಂದೆ ಅಂಗಡಿಗೆ ಬೆಂಕಿ]

ನಂದಿತಾ ತಂದೆ ಕೃಷ್ಣಮೂರ್ತಿ ಅವರ ದಿನಸಿ ಅಂಗಡಿಗೆ ಡಿ.12ರ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಸುಮಾರು 4 ಲಕ್ಷ ರೂ. ನಷ್ಟ ಸಂಭವಿಸಿತ್ತು. ಅಂದು ಸ್ಥಳಕ್ಕೆ ಭೇಟಿ ನೀಡಿದ್ದ ಬಿಜೆಪಿ ಕಾರ್ಯಕರ್ತರು ಅಂಗಡಿ ಪುನರ್ ನಿರ್ಮಿಸಿಕೊಡುವ ಭರವಸೆ ನೀಡಿದ್ದರು.

ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ನಂತರ ತೀರ್ಥಹಳ್ಳಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಸ್ಪಿ ಕೌಶಲೇಂದ್ರ ಕುಮಾರ್ ಮತ್ತು ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಆದರೆ, ಅಂಗಡಿಗೆ ಬೆಂಕಿ ಹಚ್ಚಿದವರು ಯಾರು? ಎಂಬುದು ಇನ್ನೂ ಪತ್ತೆಯಾಗಿಲ್ಲ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Shivamogga : Thirthahalli Nanditha's father shop reconstructed after shop was burnt by anonymous on Friday December 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more