Government Employee: ತೀರ್ಥಹಳ್ಳಿ ತಹಶೀಲ್ದಾರ್ ಬೆಂಗಳೂರಿನಲ್ಲಿ ನಿಗೂಢ ಸಾವು
ಶಿವಮೊಗ್ಗ, ಅಕ್ಟೋಬರ್ 17: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ. ಬಿ. ಚಿಕ್ಕನಗೌಡರ್ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್‌ನಲ್ಲಿ ಶವ ಪತ್ತೆಯಾಗಿದೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಾಕಿ ಇದೆ. ಈ ಕುರಿತು ಕುಟುಂಬ ಸದಸ್ಯರಿಗೂ ಮಾಹಿತಿಯನ್ನು ರವಾನೆ ಮಾಡಲಾಗಿದೆ.
54 ವರ್ಷದ ಜಿ. ಬಿ. ಚಿಕ್ಕನಗೌಡರ್ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ನ್ಯಾಯಾಲಯದ ಕೆಲಸಕ್ಕಾಗಿ ಅವರು ತೀರ್ಥಹಳ್ಳಿಯಿಂದ ಬೆಂಗಳೂರಿಗೆ ಆಗಮಿಸಿ, ನರ್ತಕಿ ಚಿತ್ರಮಂದಿರದ ಸಮೀಪದ ಲಾಡ್ಜ್‌ನಲ್ಲಿ ವಾಸ್ತವ್ಯ ಹೂಡಿದ್ದರು.

ಬುಧವಾರ ರಾತ್ರಿ ಲಾಡ್ಜ್‌ನ ಕೊಠಡಿಯಲ್ಲಿ ಜಿ. ಬಿ. ಚಿಕ್ಕನಗೌಡರ್ ಶವ ಪತ್ತೆಯಾಗಿದೆ. ಹೃದಯಾಘಾತದಿಂದ ಅವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರ ತನಿಖೆ ಮುಂದುವರೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಗುರುವಾರ ಹಸ್ತಾಂತರ ಮಾಡಲಾಗುತ್ತದೆ.
ಪೋನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ: ಕೆಲಸದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಜಿ. ಬಿ. ಚಿಕ್ಕನಗೌಡರ್ ಮಂಗಳವಾರ ಸಂಜೆಯಿಂದಲೂ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಕುಟುಂಬದವರು ಪದೇ ಪದೇ ಅವರನ್ನು ಸಂಪರ್ಕಿಸಲು ಪ್ರಯತ್ನ ಮಾಡಿದ್ದರು. ಆದರೆ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಆತಂಕಗೊಂಡಿದ್ದರು.
ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಪೊಲೀಸರು ಮೊಬೈಲ್ ಲೊಕೇಷನ್ ಆಧಾರದ ಮೇಲೆ ಮೆಜೆಸ್ಟಿಕ್ ಸಮೀಪದ ಲಾಡ್ಜ್‌ನಲ್ಲಿ ಇರುವ ಮಾಹಿತಿ ಸಂಗ್ರಹ ಮಾಡಿದ್ದರು. ಬೆಂಗಳೂರು ಪೊಲೀಸರಿಗೆ ಈ ಕುರಿತು ವಿವರ ಕೊಟ್ಟಿದ್ದರು.
ಪೊಲೀಸರು ಆಗಮಿಸಿ ಲಾಡ್ಜ್‌ನಲ್ಲಿ ಪರಿಶೀಲನೆ ನಡೆಸಿದಾಗ ಜಿ. ಬಿ. ಚಿಕ್ಕನಗೌಡರ್ ಶವ ಕೊಠಡಿಯಲ್ಲಿ ಪತ್ತೆಯಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಗುರುವಾರ ನಡೆಯಲಿದ್ದು, ಬಳಿಕ ಮಾಹಿತಿ ತಿಳಿಯಲಿದೆ. ಜಿ. ಬಿ. ಚಿಕ್ಕನಗೌಡರ್ ಸಾವನ್ನಪ್ಪಿರುವ ಬಗ್ಗೆ ಕುಟುಂಬದವರಿಗೂ ಸಹ ಪೊಲೀಸರು ಮಾಹಿತಿ ನೀಡಿದ್ದಾರೆ.
ಜಿ. ಬಿ. ಚಿಕ್ಕನಗೌಡರ್ ಮೂಲತಃ ಗದಗ ಮೂಲದವರು ಹಲವು ದಿನಗಳಿಂದ ತೀರ್ಥಹಳ್ಳಿಯಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಸರ್ಕಾರಿ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಾಗ ಲಾಡ್ಜ್‌ನಲ್ಲಿ ಮೃತಪಟ್ಟಿದ್ದಾರೆ.
ತೀರ್ಥಹಳ್ಳಿ ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೃತ್ ಅತ್ರೇಶ್ ಅವರನ್ನು 2023ರಲ್ಲಿ ವರ್ಗಾವಣೆ ಮಾಡಲಾಗಿತ್ತು. ಬಳಿಕ ಹಂಗಾಮಿಯಾಗಿ ಲಿಂಗರಾಜು ಕಾರ್ಯ ನಿರ್ವಹಿಸುತ್ತಿದ್ದರು. ಬಳಿಕ ಸರ್ಕಾರ 2023ರ ಅಕ್ಟೋಬರ್‌ನಲ್ಲಿ ಜಿ. ಬಿ. ಚಿಕ್ಕನಗೌಡರ್ ಅವರನ್ನು ನೂತನ ತಹಶೀಲ್ದಾರ್ ಆಗಿ ನೇಮಕ ಮಾಡಿತ್ತು.
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಈ ಕುರಿತು ಮಾತನಾಡಿದ್ದಾರೆ, "ಜಿ. ಬಿ. ಚಿಕ್ಕನಗೌಡರ್ ಯಾವ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು ಎಂಬ ಮಾಹಿತಿ ಇಲ್ಲ. ಅವರ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಕ್ಕಿಲ್ಲ" ಎಂದು ಹೇಳಿದ್ದಾರೆ.
"ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಗುರುವಾರ ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ" ಎಂದು ತಿಳಿಸಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications