Accident News: ಮರಕ್ಕೆ ಗೂಡ್ಸ್ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
Accident News: ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಈ ಭೀಕರ ಅಪಘಾತದ ವೇಳೆ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಅಸಾದುಲ್ಲ (35), ಸಾಧಿಕ್ (31), ಫೈರೋಜ್ (33) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಮೂವರೂ ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ಹಿಂದಿರುಗುವ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದು, ಈ ಹಿನ್ನಂತೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿ ಮಾಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಅಪಘಾತದಲ್ಲಿ ಇಬ್ಬರು ಸಾವು: ಇನ್ನೋವಾ ಕಾರು ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಇನ್ನೋವಾ ಕಾರು ಹಾಗೂ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಇನ್ನೋವಾ ಕಾರು ಹಾಗೂ ಟಂಟಂ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಎಂಬುವವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಎಂಬುವರು ಗಾಯಾಳುಗಳಾಗಿದ್ದು, ಇವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮತ್ತು ಗಾಯಾಳುಗಳು ನವನಗರದ 45ನೇ ಸೆಕ್ಟರ್ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಘಟನೆ ಸ್ಥಳಕ್ಕೆ ಆಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಊಟಕ್ಕೆಂದು ಹತ್ತಿರದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ಹೋಗಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ಬಾಗಲಕೋಟೆ ಕಡೆಗೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ.












Click it and Unblock the Notifications