ಭೀಕರ ರಸ್ತೆ ಅಪಘಾತ: 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಶಿವಮೊಗ್ಗ, ನವೆಂಬರ್ 7: ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ನಡೆದಿದೆ. ಹಲುಗಿನಕೊಪ್ಪ ನಿವಾಸಿಗಳಾದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ನಿನ್ನೆ (ನವೆಂಬರ್6) ರ ರಾತ್ರಿ ಹಲುಗಿನಕೊಪ್ಪ ನಿವಾಸಿ ಮಲ್ಲಿಕಾರ್ಜುನ್‌ ಎನ್ನುವವರು ಮಗಳು ಸೌಜನ್ಯ, ಪತ್ನಿ ಜ್ಯೋತಿ, ಅವರ ತಾಯಿ ಗಂಗಮ್ಮ ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಮಲ್ಲಿಕಾರ್ಜುನ್‌ ಹಾಗೂ ಕುಟುಂಬಸ್ಥರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದರು.

ಈ ವೇಳೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಬರುತ್ತಿದ್ದಂತೆ, ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿದ್ದ ಕಾರು ಏಕಾಏಕಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ನಾಲ್ಕು ವರ್ಷದ ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಲ್ಲಿಕಾರ್ಜುನ, ಜ್ಯೋತಿ ಹಾಗೂ ಗಂಗಮ್ಮ ಅವರನ್ನು ಕೂಡಲೇ ಶಿಕಾರಿಪುರದ ಆಸ್ಪತ್ರೆಗೆ ರವಾನಿಸಲಾಗಿತ್ತು.

Three Deaths From The Same Family In Road Accident

ದುರಾದೃಷ್ಟವಶಾತ್ ಜ್ಯೋತಿ ಶಿಕಾರಿಪುರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಲ್ಲಿಕಾರ್ಜುನ ಹಾಗೂ ಗಂಗಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಗಂಗಮ್ಮ ಚಿಕಿತ್ಸೆಗೆ ಸ್ಪಂದಿಸದೇ ಶಿವಮೊಗ್ಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಅಪಘಾತ ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಶಿರಾಳಕೊಪ್ಪ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದಲ್ಲಿ ಮಲ್ಲಿಕಾರ್ಜುನ ಅವರ ಬೈಕ್‌ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಕಾರಿನ ಮುಂಭಾಗ ಕೂಡ ಜಖಂ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+