ಶಿವಮೊಗ್ಗದ ಬಳಿ ಭೀಕರ ಅಪಘಾತ: ಹಸೆಮಣೆ ಬದಲಾಗಿ ಮಸಣ ಸೇರಿದ ಯುವತಿ
ಶಿವಮೊಗ್ಗ, ಸೆಪ್ಟೆಂಬರ್ 8: ದಿನದಿಂದ ದಿನಕ್ಕೆ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಹಾಗೆಯೇ ಇದೀಗ ಶಿವಮೊಗ್ಗದ ಮಲವಗೊಪ್ಪದ ಬಳಿ ಬೈಕ್ ಅಪಘಾತ ಸಂಭವಿಸಿ ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೆಲವೇ ದಿನಗಳಲ್ಲಿ ಹನೆಮಣೆ ಏರಬೇಕಿದ್ದ ಯುವತಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಆಕೆ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುವ ವೇಳೆ ಈ ಆಫಘಾತ ಸಂಭವಿಸಿದೆ. ಇನ್ನೊಂದು ಬೈಕ್‌ನಲ್ಲಿ ಹೆಚ್ಚು ಲಗೇಜ್ ತುಂಬಿಕೊಂಡ ವ್ಯಕ್ತಿ ಇವರು ಹೋಗುತ್ತಿದ್ದ ಬೈಕ್‌ಗೆ ಗುದ್ದಿದ್ದಾನೆ.

ಈ ವೇಳೆ ಯುವತಿಯ ಸಹೋದರ ಫುಟ್‌ಪಾತ್ ಮೇಲೆ ಬಿದ್ದರೆ, ಆಕೆ ರಸ್ತೆಗೆ ಬಿದ್ದಿದ್ದಳು. ಬಳಿಕ ಹಿಂದೆ ಇದ್ದ ಸಿಟಿ ಬಸ್ ಆಕೆಯ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕವಿತಾಳಿಗೆ ವಿವಾಹ ನಿಶ್ಚಯ ಆಗಿದ್ದು, 15 ದಿನಗಳಲ್ಲಿ ಹಸೆಮಣೆ ಏರಬೇಕಿತ್ತು. ಆದರೆ, ದುರಾದೃಷ್ಟವಶಾತ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಹಿಂದೆ ಇಂತಹ ಹಲವು ಘಟನೆಗಳು ಸಹ ನಡೆದಿವೆ.
ಕೆಲ ವಾಹನ ಸವಾರರ ನರ್ಲಕ್ಷ್ಯದಿಂದ ಅಪಘಾತ ಪ್ರಕರಣಗಳು ಸಂಭವಿಸುತ್ತಲಿವೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಹಲವು ಜಾಗೃತಿ ಕ್ರಮಗಳನ್ನು ಕೈಗೊಂಡರೂ ಕೆಲ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಟನೆ ಮಾಡಿ ಅಪಘಾತಗಳು ಸಂಭವಿಸುತ್ತಿವೆ. ಇತ್ತೀಚೆಗಷ್ಟೇ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ನಿನ್ನೆಷ್ಟೇ ಚಾರ್ಮಾಡಿ ಘಾಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿತ್ತು.
ಹೆದ್ದಾರಿಯಲ್ಲಿ ಸರಣಿ ಅಪಘಾತ: ಲಾರಿ-ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಕೊಟ್ಟಿಗೆಹಾರದ ಕಡೆ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯು ಉಜಿರೆ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಅಪಘಾತ ಘಟನೆಯಿಂದ ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟಿದ ಘಟನೆ ನಡೆದಿದೆ.
ಘಾಟಿಯ ಎರಡನೇ ತಿರುವಿನ ಬಳಿ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಇನ್ನು ಘಟನೆ ಬಗ್ಗೆ ವಾಹನ ಸವಾರರು ಧರ್ಮಸ್ಥಳ ಪೊಲೀಸ್ ಠಾಣೆಗೆ ತಿಳಿಸಿದರು. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಸೇರಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಭಾನುವಾರ ಹಿನ್ನೆಲೆ ಘಾಟಿ ಪ್ರದೇಶದಲ್ಲಿ ಹೆಚ್ಚಿನ ವಾಹನಗಳು ಸಂಚಾರ ಮಾಡುತ್ತಿದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿತ್ತು.












Click it and Unblock the Notifications