ಶಿವಮೊಗ್ಗ-ಬೆಂಗಳೂರು ಪ್ಯಾಸೆಂಜರ್ ರೈಲು ರದ್ದು

ಶಿವಮೊಗ್ಗ, ಡಿಸೆಂಬರ್ 9 : ಬೆಂಗಳೂರು- ಶಿವಮೊಗ್ಗ ಮಾರ್ಗದಲ್ಲಿ ಸಂಚಾರ ನಡೆಸುವ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಡಿಸೆಂಬರ್ 10 ರಿಂದ 13ರ ತನಕ ಸಂಚಾರ ನಡೆಸುವ ರೈಲುಗಳ ಸಂಚಾರ ರದ್ದಾಗಿದೆ.

ಸೋಮವಾರ ನೈಋತ್ಯ ರೈಲ್ವೆ ಈ ಕುರಿತು ಆದೇಶ ಹೊರಡಿಸಿದೆ. ಅರಸೀಕೆರೆ- ತುಮಕೂರು-ಬಾಣಸಂದ್ರ ನಡುವಿನ ರೈಲ್ವೆ ನಿಲ್ದಾಣ ಯಾರ್ಡ್‌ನಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ, ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಡಿಸೆಂಬರ್ 10 ರಿಂದ 13ರ ತನಕ ವಿವಿಧ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಹಲವು ರೈಲುಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳು ವಿಳಂಬವಾಗಿ ಸಂಚಾರ ನಡೆಸಲಿವೆ ಎಂದು ಪ್ರಕಟಣೆ ಹೇಳಿದೆ.

Train Service Cancelled Due To Civil Works

ಶಿವಮೊಗ್ಗ ಬೆಂಗಳೂರು ಮಾರ್ಗದಲ್ಲಿ ಸಂಚಾರ ನಡೆಸುವ ಶಿವಮೊಗ್ಗ-ಬೆಂಗಳೂರು ಪ್ಯಾಸೆಂಜರ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಡಿಸೆಂಬರ್ 10 ಮತ್ತು 13ರಂದು ಈ ರೈಲು ಸಂಚಾರ ನಡೆಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ರೈಲು ಸಂಖ್ಯೆ 56917/56918 ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸುತ್ತಿತ್ತು. ಈ ರೈಲು ಪ್ರತಿದಿನ ಮಧ್ಯಾಹ್ನ 12.30ಕ್ಕೆ ಶಿವಮೊಗ್ಗದಿಂದ ಹೊರಡುತ್ತಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+