ಆಗುಂಬೆ ಘಾಟಿಯಲ್ಲಿ ₹3,500 ಕೋಟಿ ವೆಚ್ಚದ ಸುರಂಗ ಮಾರ್ಗ ನಿರ್ಮಾಣ-ಇದರಿಂದ ಏನಲ್ಲಾ ಪ್ರಯೋಜನಾಗಳಾಗಲಿದೆ?-ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಂತಾಗಿದೆ. ಹಾಗಾದರೆ ಇದಕ್ಕೆ ತಗಲುವ ವೆಚ್ಚ ಎಷ್ಟು ಸಾವಿರ ಕೋಟಿ? ಹಾಗೂ ಇದರಿಂದ ಏನೆಲ್ಲ ಪ್ರಯೋಜನೆಗಳಾಗಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

ಮಲ್ಪೆ-ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169A) ಚತುಷ್ಪಥ ಯೋಜನೆ ಸದ್ಯ ಪ್ರಗತಿಯಲ್ಲಿದೆ. ಮತ್ತೊಂದೆಡೆ ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಯೋಜನೆ ಇದೀಗ ಕೇಳೊಇಬರುತ್ತಿದೆ. ಇನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹದ್ದಾರಿ ಸಚಿವ ನಿತಿನ್‌ ಗಡ್ಕರಿ ಇತ್ತೀಚೆಗಷ್ಟೇ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಕರಾವಳಿ ಮಲೆನಾಡು ಸಂಪರ್ಕ ಕಲ್ಪಿಸುವ ಸುರಂಗ ಯೋಜನೆ ಪ್ರಸ್ತಾವನೆವನ್ನು ಸಲ್ಲಿಕೆ ಮಾಡಲಾಗಿತ್ತು.

Tunnel Construction at Agumbe Ghat at cost of 3 500 Cr

ಇನ್ನು ಈ ಯೋಜನೆಯ ಬಗ್ಗೆ ತಿಳಿದುಕೊಳ್ಳು ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿದ್ದು, 2 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಪಿಆರ್‌ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಸೋಮೇಶ್ವರದಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಗೆ ಸಂಪರ್ಕ ಕಲ್ಪಿಸುವ 12 ಕಿಲೋ ಮೀಟರ್‌ ದೂರದವರೆಗೆ 3,500 ಕೋಟಿ ರೂಪಾಯಿ ವೆಚ್ಚ ಎಂದು ನಿರೀಕ್ಷಿಸಲಾಗಿದೆ. ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ (169ಎ) ಚತುಷ್ಪಥ ಯೋಜನೆಯಡಿ ಸುರಂಗ ನಿರ್ಮಾಣ ಯೋಜನೆ ಇದಕ್ಕೆ ಸೇರಿಲ್ಲ. ಆದರೂ ದ್ವಿಪಥ ರಸ್ತೆ ನಿರ್ಮಾಣದ ಬದಲು ಸುರಂಗ ಯೋಜನೆ ಸೇರಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ನಿತಿನ್ ಗಡ್ಕರಿ ಏನು ಹೇಳಿದ್ದರು?

2022ರಲ್ಲಿ ಶಿರಾಡಿ ಘಾಟ್‌ನಲ್ಲಿ ಸುರಂಗ ರಸ್ತೆ ನಿರ್ಮಿಸುವ ಕುರಿತಾಗಿ ಪ್ರಸ್ತಾಪ ಕೇಳಿ ಬಂದಿತ್ತು. ಆದರೆ ಈ ಕುರಿತ ಪರಾಮರ್ಶೆ ಬಳಿಕ ಲೋಕಸಭೆಗೆ ಮಾಹಿತಿ ನೀಡಿದ್ದ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಸಾಧ್ಯವಿಲ್ಲ ಎಂದು ಹೇಳಿದ್ದರು. 26 ಕಿಲೋ ಮೀಟರ್ ಸುರಂಗ ರಸ್ತೆ ಬದಲಿಗೆ ಶಿರಾಡಿ ಘಾಟ್ ರಸ್ತೆ ವಿಸ್ತರಣೆ ಸೂಕ್ತ ಎಂದು ಸಚಿವರು ಲೋಕಸಭೆಗೆ ಮಾಹಿತಿ ನೀಡಿದ್ದರು.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 75, ಮಂಗಳೂರು ಹಾಗೂ ಬೆಂಗಳೂರು ನಗರವನ್ನು ಸಂಪರ್ಕಿಸುತ್ತದೆ. ಸುರಂಗ ರಸ್ತೆ ನಿರ್ಮಾಣ ಯೋಜನೆಯ ಪ್ರಸ್ತಾಪವನೆಯನ್ನು ಕೇಂದ್ರ ಸರ್ಕಾರ ಕೈ ಬಿಟ್ಟ ಬಳಿಕ ಈ ಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+