• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದಲ್ಲಿ ಮತ್ತೆರಡು ಕೊರೊನಾ ಕೇಸ್: ಜಿಲ್ಲೆಯಲ್ಲಿ ಆತಂಕ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಮೇ 17: ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಮತ್ತೆ ಎರಡು ಪಾಸಿಟಿವ್ ಕೇಸ್ ಪತ್ತೆಯಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಿಂದ ಮಲೆನಾಡಿಗರಲ್ಲಿ ಆತಂಕ ಹೆಚ್ಚಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಒಂದು ಪ್ರಕರಣ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.

ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ; ತೀರ್ಥಹಳ್ಳಿಯ ಕೆಲ ಗ್ರಾಮಗಳು ಸೀಲ್ ಡೌನ್

ಇಬ್ಬರೂ ಮಹಾರಾಷ್ಟ್ರದ ಮುಂಬೈಯಿಂದ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದರು. ಇಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಎರಡು ಪ್ರಕರಣಗಳನ್ನು ಸೇರಿ ಶಿವಮೊಗ್ಗದಲ್ಲಿ ಇದುವರೆಗೆ ಒಟ್ಟು 14 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲಾಡಳಿತವು ಇತರ ರಾಜ್ಯಗಳಿಂದ ಬಂದಿರುವವರ ಮೇಲೆ ಹೆಚ್ಚಿನ‌ ನಿಗಾವಹಿಸಿದ್ದು, ಹೊರ ರಾಜ್ಯದಿಂದ ಬಂದವರ ವೈದ್ಯಕೀಯ ತಪಾಸಣೆ ಚುರುಕುಗೊಳಿಸಿದೆ.

ಹೊರ ರಾಜ್ಯದಿಂದ ಬಂದಿರುವ ಪ್ರತಿಯೊಬ್ಬ ವ್ಯಕ್ತಿಯ ವೈದ್ಯಕೀಯ ತಪಾಸಣೆ ಕಡ್ಡಾಯವಾಗಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ.

ಈಗಾಗಲೇ ಹೊರ ರಾಜ್ಯದಿಂದ ಬಂದವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

English summary
Two more coronavirus positive cases have been detected in Shivamogga district today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X