ಶಿವಮೊಗ್ಗ; 2 ಗ್ರಾ.ಪಂ, ಒಂದು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೆ
ಶಿವಮೊಗ್ಗ, ನವೆಂಬರ್ 12: ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಹಾಗೂ ಒಂದು ಪಟ್ಟಣ ಪಂಚಾಯಿತಿಯನ್ನು ಹೊಸ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಮೂಲಕ ಸಿಎಂ ತವರು ಜಿಲ್ಲೆಗೆ ಕೊಡುಗೆ ನೀಡಿದಂತಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಸಹ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಅದೇ ರೀತಿ ಭದ್ರಾವತಿ ತಾಲೂಕು ಹೊಳೆ ಹೊನ್ನೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.

ಈ ಬೆಳವಣಿಗೆಗೆ ಸಂಸದ ಬಿ.ವೈ ರಾಘವೇಂದ್ರ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಜನಸಂಖ್ಯೆಯ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದರಿಂದ ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳ ಅಭಿವೃದ್ಧಿಗೆ ಪ್ರತ್ಯೇಕವಾಗಿ ಅನುದಾನ ನೀಡಲು ಸಾಧ್ಯವಾಗಲಿದೆ. ಪರೋಕ್ಷವಾಗಿ ಇಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲೂ ಸಹಾಯವಾಗಲಿದೆ












Click it and Unblock the Notifications