ವಿಡಿಯೋ; ಸಿನಿಮೀಯ ರೀತಿ ಹೊಸನಗರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಎಸ್ಕೇಪ್
ಶಿವಮೊಗ್ಗ, ಮಾರ್ಚ್ 06: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ವಾಸಪ್ಪಗೌಡ ಹೋಟೆಲೊಂದರಿಂದ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿದ್ದು, ಅವರು ಪರಾರಿಯಾದ ದೃಶ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.
ಹೊಸನಗರ ತಾಲೂಕು ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಗೆದ್ದು ಕಾಂಗ್ರೆಸ್ ಬೆಂಬಲ ಪಡೆದು ಅಧ್ಯಕ್ಷರಾಗಿದ್ದ ವಾಸಪ್ಪಗೌಡ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅವರು ಅಧ್ಯಕ್ಷ ಚುನಾವಣೆಗೆ ಯಾರಿಗೆ ಬೆಂಬಲ ನೀಡುತ್ತಾರೆ ಎನ್ನುವುದೇ ಕುತೂಹಲ ಮೂಡಿಸಿತ್ತು.
ಮಾ.7 ರಂದು ನಡೆಯಲಿರುವ ಹೊಸನಗರ ತಾಲೂಕು ಪಂಚಾಯತ್ ಚುನಾವಣೆಗೆ ವಾಸಪ್ಪಗೌಡ ಅವರನ್ನು ಕಾಂಗ್ರೆಸ್ ನಲ್ಲಿ ಉಳಿಸಿಕೊಳ್ಳಲು ಕಾಂಗ್ರೆಸ್ ನವರು ಅವರನ್ನು ಮೈಸೂರಿಗೆ ಕರೆದುಕೊಂಡು ಹೋಗಿದ್ದರು. ಆದರೆ ನಿನ್ನೆ ರಾತ್ರಿ ಬಿಜೆಪಿಯವರು ಅವರನ್ನು ಪಕ್ಷಕ್ಕೆ ಸೆಳೆದು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ.

ನಿನ್ನೆ ಮೈಸೂರಿನ ಹೊಟೇಲ್ ನಿಂದ ವಾಸಪ್ಪಗೌಡರನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗಲಾಗಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲಾತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ನಾಳೆ ಅಧ್ಯಕ್ಷರ ಆಯ್ಕೆ ಚುನಾವಣೆ ನಡೆಯಲಿದ್ದು, ಎಲ್ಲಾ ಹೈಡ್ರಾಮಾಗಳ ನಡುವೆ ಹೊಸನಗರ ತಾಲೂಕು ಪಂಚಾಯತ್ ಅಧ್ಯಕ್ಷ ಸ್ಥಾನ ಬಿಜೆಪಿಗೋ ಅಥಾವ ಕಾಂಗ್ರೆಸ್ ಪಾಲಾಗುತ್ತದೆಯೋ ಎನ್ನುವುದು ಹೊಸನಗರ ಜನತೆಯ ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications