ಶಿವಮೊಗ್ಗದಲ್ಲಿ ಬಿಜೆಪಿಯ ನಡಿಗೆ ವಿಜಯದೆಡೆಗೆ

ಶಿವಮೊಗ್ಗ, ಏ.15 : ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಚುನಾವಣೆ ಫಲಿತಾಂಶ ನೋಡಿ ಭ್ರಮನಿರಸನವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗ ನಗರದಲ್ಲಿ ಮಂಗಳವಾರ ಬಿಜೆಪಿ ಆಯೋಜಿಸಿದ್ದ ವಿಜಯದೆಡೆಗೆ ನಡಿಗೆ ರೋಡ್ ಶೋನಲ್ಲಿ ಪಾಲ್ಗೊಂಡು ಮಾತನಾಡಿದ ಕೆಎಸ್ ಈಶ್ವರಪ್ಪ, ಶಿವಮೊಗ್ಗ ಜಿಲ್ಲೆಯಲ್ಲಿ ನಮಗೆ ಪ್ರತಿಸ್ಪರ್ಧಿಗಳಿಲ್ಲ. 2 ಮತ್ತು 3ನೇ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪೈಪೋಟಿ ನಡೆಸುತ್ತಿವೆ ಎಂದು ಹೇಳಿದರು. [ಯಡಿಯೂರಪ್ಪ ಸಂದರ್ಶನ ಓದಿ]

ರಾಜ್ಯದಲ್ಲಿ ಬಿಜೆಪಿ ಪ್ರತಿ ಮನೆ-ಮನೆಗೂ ಭೇಟಿ ನೀಡಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದೆ. 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಪರವಾದ ಅಲೆ ಇದ್ದು, ದೇಶದ ಅಭಿವೃದ್ಧಿಗಾಗಿ ಜನರು ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಚಿತ್ರಗಳಲ್ಲಿ ನೋಡಿ ವಿಜಯದೆಡೆಗೆ ನಡಿಗೆ

ಶಿವಮೊಗ್ಗದಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ

ಶಿವಮೊಗ್ಗದಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ

ಶಿವಮೊಗ್ಗ ನಗರದಲ್ಲಿ ಬಿಜೆಪಿ ಮಂಗಳವಾರ ಭರ್ಜರಿ ರೋಡ್ ಶೋ ನಡೆಸಿತು. ವಿಜಯದೆಡೆಗೆ ನಡಿಗೆ ಎಂಬ ಘೋಷಣೆಯೊಂದಿಗೆ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಮುಂತಾದ ನಾಯಕರು ಪಾಲ್ಗೊಂಡಿದ್ದರು.

ಬಿಜೆಪಿಗೆ ಜನರ ಬೆಂಬಲ

ಬಿಜೆಪಿಗೆ ಜನರ ಬೆಂಬಲ

ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆಎಸ್ ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿಗೆ ಮನೆ-ಮನೆಗೆ ತೆರಳಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದೆ. ದೇಶದ ಅಭಿವೃದ್ಧಿಗಾಗಿ, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಲು ಜನರು ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ನಮಗೆ ಪ್ರತಿಸ್ಪರ್ಧಿಗಳಿಲ್ಲ

ಶಿವಮೊಗ್ಗದಲ್ಲಿ ನಮಗೆ ಪ್ರತಿಸ್ಪರ್ಧಿಗಳಿಲ್ಲ

ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಜಯಗಳಿಸುವುದು ಖಚಿತ. ಕಾಂಗ್ರೆಸ್ ಮತ್ತು ಜೆಡಿಎಸ್ 2 ಮತ್ತು 3ನೇ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿವೆ ಎಂದು ಈಶ್ವರಪ್ಪ ತಿಳಿಸಿದರು.

ಆರು ತಿಂಗಳ ಶ್ರಮ

ಆರು ತಿಂಗಳ ಶ್ರಮ

ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ನಾವು ಚುನಾವಣೆಯ ಕೆಲಸಗಳನ್ನು ಮಾಡಿದ್ದೇವೆ. ಅದು ಫಲ ನೀಡಲಿದ್ದು, ಜನರು ಬಿಎಸ್ ಯಡಿಯೂರಪ್ಪ ಅವರಿಗೆ ಮತ ನೀಡಲಿದ್ದಾರೆ ಎಂದರು.

ಸೋಲಿನ ಭೀತಿ ಇದೆ

ಸೋಲಿನ ಭೀತಿ ಇದೆ

ಜೆಡಿಎಸ್ ಪಕ್ಷಕ್ಕೆ ಕ್ಷೇತ್ರದಲ್ಲಿ ಸೋಲುವ ಭೀತಿ ಎದುರಾಗಿದೆ. ಆದ್ದರಿಂದ ಸೊರಬ ಶಾಸಕ ಮಧು ಬಂಗಾರಪ್ಪ ಬಿಜೆಪಿಯವರು ಹಣ, ಹೆಂಡ ಹಂಚುತ್ತಿದ್ದಾರೆ ಎಂದು ಆಧಾರರಹಿತವಾದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ ದೂರಿದರು.

ಅಧಿಕ ಅಂತರದ ಗೆಲುವು

ಅಧಿಕ ಅಂತರದ ಗೆಲುವು

ಬಿಎಸ್ ಯಡಿಯೂರಪ್ಪ ಅವರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಶಿವಮೊಗ್ಗದಲ್ಲಿ ಜಯ ಸಾಧಿಸುತ್ತಾರೆ. ಇದು ಪ್ರತಿಪಕ್ಷಗಳಿಗೂ ಗೊತ್ತು. ಆದ್ದರಿಂದ ಅವರು 2 ನೇ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+