ಶಿವಮೊಗ್ಗ:ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ
ಶಿವಮೊಗ್ಗ, ಆಗಸ್ಟ್ 30 : ವ್ಯಕ್ತಿಯೊಬ್ಬರಿಗೆ ರೇಷನ್ ಕಾರ್ಡ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಶಿಕಾರಿಪುರದ ಅಂಬಾರಗೊಪ್ಪದ ಗ್ರಾಮ ಲೆಕ್ಕಿಗ ರಮೇಶ್ ಅವರು ಅದೇ ಗ್ರಾಮದ ಮಂಜನಾಯ್ಕ ಎಂಬುವರಿಗೆ ರೇಷನ್ ಕಾರ್ಡ್ ಮಾಡಿಕೊಡಲು ಒಂದು ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ.

ಇಂದು ಮಧ್ಯಾಹ್ನ ಮಂಜನಾಯ್ಕ ಅವರಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಪೊಲೀಸರು ದಾಳಿ ನಡೆಸಿ ರಮೇಶ್ ಅವರನ್ನು ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.












Click it and Unblock the Notifications