ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ವೈರಲ್ ಫೀವರ್: ಒಂದೇ ಶಾಲೆಯ 24 ಮಕ್ಕಳು ಅಸ್ವಸ್ಥ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮಾರ್ಚ್ 10: ವೈರಲ್ ಜ್ವರದಿಂದ ಒಂದೇ ಶಾಲೆಯ 24ಮಂದಿ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 26 ಮಂದಿ ಅಸ್ವಸ್ಥಗೊಂಡಿರುವ ಘಟನೆ ಮಂಡಗದ್ದೆಯ ಹೆಗಲಗತ್ತಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

20 ಮಕ್ಕಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿಕ್ಷಕರಾದ ರಮೇಶ್ ಹಾಗೂ ವಿರೂಪಾಕ್ಷ ಸೇರಿದಂತೆ ನಾಲ್ವರು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ಹಾಗೂ ಮಾಜಿ‌ ಶಾಸಕ ಆರಗ ಜ್ಞಾನೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಿಮ್ಮನೆ ರತ್ನಾಕರ, ಈ ಪ್ರಕರಣದ ವರದಿ ಬಂದ ನಂತರ ಘಟನೆ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ಪ್ರಾಥಮಿಕ ಹಂತದಲ್ಲಿ ವೈರಲ್ ಫೀವರ್ ಎಂದು ಗುರುತಿಸಲಾಗಿದ್ದು, ವೈರಲ್​ ಫೀವರ್​ ಹರಡದಂತೆ ಈಗಾಗಲೇ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Viral fever causes 24 students hospitalised

ಅಸ್ವಸ್ಥ ಮಕ್ಕಳ ರಕ್ತವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ, ನಾಳೆ ಬೆಳಗ್ಗೆ ಒಳಗೆ ವರದಿ ಬರಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗವುದು ಎಂದು ಮೆಗ್ಗಾನ್ ಆಸ್ಪತ್ರೆ ಜಿಲ್ಲಾ ಸರ್ಜನ್ ರಘುನಂದನ್ ತಿಳಿಸಿದ್ದಾರೆ. ಮಾಜಿ ಶಾಸಕ ಆರಗ ಜ್ಞಾನೇಂದ್ರ ಈ ಕಾಯಿಲೆಯನ್ನ ಮೊದಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ತನಿಖೆಗೆ ಒಳಪಡಿಸಿ ಹರಡುವ ಕುರಿತು ತಪಾಸಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

English summary
Including two teachers and 24 students at Hegalagatti government school in Teerthahalli taluk were admitted to Meggan hospital in Shivamogga after suffering viral fever.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X