ಅರಮನೆ ವೈಭವ; ಶಿವಮೊಗ್ಗದಲ್ಲಿ ಕಿರೀಟ ತೊಟ್ಟ ಮತದಾರರು!
ಶಿವಮೊಗ್ಗ, ಮೇ 7: ಮಂಗಳವಾರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಇದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಹ ಸೇರಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದ್ದು, ಜನರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ಮತದಾರರನ್ನು ಸೆಳೆಯಲು ಮತಗಟ್ಟೆಗಳನ್ನು ವಿವಿಧ ರೀತಿಯಲ್ಲಿ ಸಿಂಗಾರ ಮಾಡಲಾಗಿದೆ. ಅದರಲ್ಲೂ ಶಿವಮೊಗ್ಗ ನಗರದಲ್ಲಿ ಸ್ಥಾಪನೆ ಮಾಡಿರುವ ಮತಗಟ್ಟೆಯೊಂದು ಗಮನ ಸೆಳೆಯುತ್ತಿದೆ. ಈ ಮತಗಟ್ಟೆಯ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

'ಅರಮನೆ ಗತ ವೈಭವ' ಎಂಬ ಪರಿಕಲ್ಪನೆಯಲ್ಲಿ ಮತಗಟ್ಟೆಯನ್ನು ವಿನ್ಯಾಸಗೊಳಿಸಲಾಗಿದೆ. ಅಲ್ಲದೇ ಮತಗಟ್ಟೆಯಲ್ಲಿ ಸಿಬ್ಬಂದಿಗಳು ವಿಶೇಷ ಪೋಷಾಕು ತೊಟ್ಟು ಮತದಾನಕ್ಕೆ ಬರುವ ಜನರನ್ನು ಸ್ವಾಗತಿಸುತ್ತಿದ್ದಾರೆ.
ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಆವರಣದ ಮತಗಟ್ಟೆ ಆಕರ್ಷಣೀಯವಾಗಿ ಕಂಗೊಳಿಸುತ್ತಿದೆ. ಈ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದವರು ರಾಜರಂತೆ ಕಿರೀಟ ತೊಟ್ಟು ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂಬ ಕಲ್ಪನೆಯೊಂದಿಗೆ ಈ ಮತಗಟ್ಟೆಯನ್ನು ಸಿದ್ಧಪಡಿಸಲಾಗಿದೆ. ಇಲ್ಲಿ ಇಟ್ಟಿರುವ ಕುರ್ಚಿಯ ಮೇಲೆ 'ಮತದಾರ ಪ್ರಭು' ಎಂದು ಬರೆಯಲಾಗಿದೆ.
ಮತದಾನ ಜಾಗೃತಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಬಿ. ವೈ. ರಾಘವೇಂದ್ರ, ಕಾಂಗ್ರೆಸ್‌ನಿಂದ ಗೀತಾ ಶಿವರಾಜ್‌ಕುಮಾರ್ ಅಭ್ಯರ್ಥಿಗಳು. ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಚಿವ ಈಶ್ವರಪ್ಪ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗಾಗಿ ಹಲವು ಕಾರ್ಯಕ್ರಮಗಳನ್ನು ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಮಾತನಾಡಿ, "ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಶೇ.100 ರಷ್ಟು ಮತದಾನ ಆಗಬೇಕು ಎನ್ನುವ ಉದ್ದೇಶದಿಂದ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಾಗೂ ವಿಶಿಷ್ಟವಾದ, ವಿಭಿನ್ನವಾದ ಚಟುವಟಿಕೆಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದ್ದು, ಮತದಾರರು ತಪ್ಪದೇ ಮತದಾನ ಕಾರ್ಯದಲ್ಲಿ ಭಾಗವಹಿಸಿ ದೇಶದ ಅಭಿವೃದ್ಧಿಗೆ ಸಹಕಾರ ನೀಡಬೇಕು" ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 8,62,789 ಪುರುಷ, 890061 ಮಹಿಳೆ, 3 ತೃತೀಯಲಿಂಗಿ ಸೇರಿದಂತೆ 17,52,885 ಮತದಾರರಿದ್ದಾರೆ. ವಿಕಲಚೇತನ 10925 ಪುರುಷ, 8340 ಮಹಿಳೆ ಸೇರಿ ಒಟ್ಟು 19265 ಮತದಾರರು ಇದ್ದಾರೆ. 18 ರಿಂದ 19 ವರ್ಷದೊಳಗಿನ 22067 ಯುವಕ, 19861 ಯುವತಿ, 3 ತೃತೀಯಲಿಂಗಿ ಸೇರಿದಂತೆ ಒಟ್ಟು 41931 ಯುವ ಮತದಾರರು ಇದ್ದಾರೆ. 85 ವರ್ಷ ಮೀರಿದ 6214 ಪುರುಷ, 9114 ಮಹಿಳೆ ಒಟ್ಟು 15328 ಮತದಾರರು ಇದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications