ಮೇ 7ರಂದು ಮತದಾನ: ಮಾಲ್‌ನಲ್ಲಿಯೂ ಮತದಾನ ಜಾಗೃತಿ

ಶಿವಮೊಗ್ಗ, ಏಪ್ರಿಲ್ 30: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು 2ನೇ ಹಂತದ ಮತದಾನ ನಡೆಯಲಿದೆ. ಮತದಾನದ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಗಳ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯುತ್ತಿದೆ. "ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕೆಂದು" ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಮನವಿ ಮಾಡಿದರು.

Voting Awareness Campaign By Shivamogga SVEEP At Mall

ಶಿವಪ್ಪನಾಯಕ ಮಾರುಕಟ್ಟೆಯ ಸಿಟಿ ಸೆಂಟರ್ ಮಾಲ್‍ನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ ಮತದಾನ ಜಾಗೃತಿ ವೇದಿಕೆ ವತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಮಾಲ್‍ನಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಮಾಡೆಲ್ ಅನ್ನು ಅವರು ಉದ್ಘಾಟಿಸಿದರು.

ಮತದಾನ ಪ್ರಮಾಣ ಹೆಚ್ಚಿಸಬೇಕು: ಶಿವಮೊಗ್ಗ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆ ಇದೆ. ಮತದಾನ ಪ್ರಮಾಣ ಹೆಚ್ಚಬೇಕು. ಬೆಂಗಳೂರಿನಲ್ಲಿ ಶೇಕಡ 50ಕ್ಕಿಂತ ಕಡಿಮೆ ಮತದಾನ ನಡೆದಿದ್ದು, ಆ ರೀತಿ ನಮ್ಮ ಶಿವಮೊಗ್ಗದಲ್ಲಿ ಆಗಬಾರದು. ಮತ ಚಲಾಯಿಸುವ ಮುಖಾಂತರ ದೇಶದ ಅಭಿವೃದ್ಧಿಯಲ್ಲಿ ನಾವೆಲ್ಲ ಪಾಲ್ಗೊಳ್ಳಬೇಕೆಂದು ಎಂದು ಸಿಇಓ ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಮಾತನಾಡಿ, "ಜಿಲ್ಲೆಯಲ್ಲಿ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇಕಡ 76 ರಷ್ಟು ಮತದಾನ ನಡೆಡಿದ್ದು, ನಗರ ಪ್ರದೇಶದಲ್ಲಿ ಶೇಕಡಾ 60 ರಷ್ಟು ಮಾತ್ರ ಮತದಾನ ನಡೆದಿದೆ. ನಗರ ಪ್ರದೇಶದ ಜನರು ಮತದಾನ ಮಾಡುವಲ್ಲಿ ಆಸಕ್ತಿ ಕಡಿಮೆ ತೋರುತ್ತಿದ್ದಾರೆ. ದೇಶದ ಅಭಿವೃದ್ಧಿ ಮತ್ತು ಜನರ ಜೀವನ ರೂಪಿಸುವುದಕ್ಕೆ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದ್ದು ಎಲ್ಲರೂ ಮತದಾನ ಮಾಡುವಂತೆ" ಮನವಿ ಮಾಡಿದರು.

ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೀಜ್ ಮಾತನಾಡಿ, "ಮೇ 7ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ಮಾಡಬಹುದು. ವಯೋವೃದ್ಧರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತ ಹಾಕುವ ಅವಕಾಶ ಈ ಬಾರಿ ನೀಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಅಕ್ರಮಗಳು ಕಂಡುಬಂದಲ್ಲಿ ತಮ್ಮ ಮೊಬೈಲ್‍ನಲ್ಲಿ ಸಿವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಆ ಮೂಲಕ ದೂರು ಸಲ್ಲಿಸಬಹುದು ಮತ್ತು 1950ಗೆ ಕರೆ ಮಾಡಿ ಸಹ ದೂರು ನೀಡಬಹುದು" ಎಂದರು.

ಜಿಲ್ಲಾ ಸ್ವೀಪ್ ಐಕಾನ್ ನಿವೇದನ್ ನೆಂಪೆ ಮಾತನಾಡಿ, "ಶಿವಮೊಗ್ಗದ ಜನರು ಪ್ರಜ್ಞಾವಂತರೆಂದು ತೋರಿಸಿಕೊಳ್ಳಲು ಒಳ್ಳೆಯ ಅವಕಾಶ ದೊರಕಿದೆ. ಬುದ್ಧಿವಂತರು ಮತದಾನ ಮಾಡುವ ಮೂಲಕ ಪ್ರಜ್ಞಾವಂತರಾಗುತ್ತಾರೆ ಎಂದ ಅವರು ಮೇ 7ಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಿ" ಎಂದು ಕೋರಿದರು.

ಶಿವಮೊಗ್ಗದ ಮತದಾರರ ಕುರಿತು ಜಿಲ್ಲಾ ಚುನಾವಣಾಧಿಕಾರಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾಹಿತಿ ನೀಡಿದ್ದಾರೆ. "ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರದಲ್ಲಿ 8,62,789 ಪುರುಷ, 8,90,061 ಮಹಿಳೆ, 3 ತೃತೀಯಲಿಂಗಿ ಸೇರಿದಂತೆ 17,52,885 ಮತದಾರರಿದ್ದಾರೆ. ವಿಕಲಚೇತನ 10,925 ಪುರುಷ, 8,340 ಮಹಿಳೆ ಸೇರಿ ಒಟ್ಟು 19,265 ಮತದಾರರು ಇದ್ದಾರೆ. 18 ರಿಂದ 19 ವರ್ಷದೊಳಗಿನ 22,067 ಯುವಕ, 19,861 ಯುವತಿ, 3 ತೃತೀಯಲಿಂಗಿ ಸೇರಿದಂತೆ ಒಟು 41,931 ಯುವ ಮತದಾರರು ಇದ್ದಾರೆ. 85 ವರ್ಷ ಮೀರಿದ 6,214 ಪುರುಷ, 9,114 ಮಹಿಳೆ ಸೇರಿ ಒಟ್ಟು 15,328 ಮತದಾರರು ಇದ್ದಾರೆ" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+