ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಲಿಂಗನಮಕ್ಕಿ, ಭದ್ರಾ, ತುಂಗಾ ಡ್ಯಾಂ ನೀರಿನ ಮಟ್ಟ ಹೆಚ್ಚಳ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 23: ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ, ಭದ್ರಾ ಡ್ಯಾಂ ನೀರಿನ ಮಟ್ಟ ಮೂರು ಅಡಿ ಹೆಚ್ಚಳವಾಗಿದ್ದು, ಅದೇ ರೀತಿ ತುಂಗಾ ಡ್ಯಾಂನಿಂದ ಹೊರಹರಿವು ನಿರಂತರವಾಗಿದೆ.

ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಹಳ್ಳ, ಕೊಳ್ಳಗಳು ತುಂಬಿಕೊಳ್ಳುತ್ತಿವೆ. ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೂ ಒಳ ಹರಿವು ಹೆಚ್ಚಳವಾಗಿದೆ.

ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ರೆಡ್ ಅಲರ್ಟ್ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ರೆಡ್ ಅಲರ್ಟ್

ಮೂರು ಅಡಿ ಏರಿದ ಲಿಂಗನಮಕ್ಕಿ

ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಮೂರು ಅಡಿಯಷ್ಟು ಹೆಚ್ಚಳವಾಗಿದೆ. ಗುರುವಾರ ನೀರಿನ ಮಟ್ಟ 1796 ಅಡಿಯಷ್ಟು ಇತ್ತು. ಇಂದು(ಶುಕ್ರವಾರ) 1799.15 ಅಡಿಗೆ ಏರಿಕೆಯಾಗಿದೆ. ಲಿಂಗನಮಕ್ಕಿಗೆ 73,431 ಕ್ಯೂಸೆಕ್ ಒಳಹರಿವು ಇದೆ.

Shivamogga: Linganamakki, Bhadra And Tunga Dam Water Levels Rises after Heavy Rain

ಭದ್ರಾ ಡ್ಯಾಂ ನೀರಿನ ಮಟ್ಟ ಹೆಚ್ಚಳ

ಇತ್ತ ಭದ್ರಾ ಜಲಾಶಯದ ನೀರಿನ ಮಟ್ಟವೂ ಮೂರು ಅಡಿಯಷ್ಟು ಹೆಚ್ಚಳವಾಗಿದೆ. ಗುರುವಾರ 167.11 ಅಡಿ ಇತ್ತು. ಇಂದು 171.1 ಅಡಿಗೆ ತಲುಪಿದೆ. 24 ಗಂಟೆ ಅವಧಿಯಲ್ಲಿ 3.99 ಅಡಿಯಷ್ಟು ನೀರಿನ ಸಂಗ್ರಹ ಹೆಚ್ಚಳವಾಗಿದೆ. 39,286 ಕ್ಯೂಸೆಕ್ ಒಳಹರಿವು ಇದೆ.

Shivamogga: Linganamakki, Bhadra And Tunga Dam Water Levels Rises after Heavy Rain

ತುಂಗಾ ಜಲಾಶಯದ ಹೊರ ಹರಿವು

ಗಾಜನೂರು ತುಂಗಾ ಜಲಾಶಯದಿಂದ ರಾತ್ರಿ ಭಾರೀ ಪ್ರಮಾಣದ ನೀರನ್ನು ಹೊರಗೆ ಬಿಡಲಾಗಿತ್ತು. ಶುಕ್ರವಾರ ಬೆಳಗ್ಗೆ 48,323 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಹಾಗಾಗಿ ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.

English summary
In the last 24 hours the water level of Linganamakki and Bhadra Dam in Shivamogga district has increased by 3 feet, while the outflow from Tunga Dam is continuous.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X