Breaking; ವಿಡಿಯೋ; ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಶಿವಮೊಗ್ಗ, ಮೇ 19; ಶಿವಮೊಗ್ಗದಲ್ಲಿ ಮಳೆ ಮುಂದುವರೆದಿದೆ. ತುಂಗಾ ಜಲಾಶಯದ 5 ಗೇಟುಗಳ ಮೂಲಕ ನದಿಗೆ ನೀರು ಬಿಡಲಾಗಿದೆ. ಭಾರಿ ಮಳೆ ಮತ್ತು ಈಗಾಗಲೇ ಜಲಾಶಯ ಭರ್ತಿಯಾಗಿದ್ದರಿಂದ ಒಳ ಹರಿವಿನಷ್ಟು ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.

ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್. ಈಗಾಗಲೇ ಅಷ್ಟೆ ಪ್ರಮಾಣದ ನೀರಿನ ಸಂಗ್ರಹವಿತ್ತು. ಹಿನ್ನೀರು ಭಾಗದಲ್ಲಿ ಭಾರೀ ಮಳೆಯಾಗಿದ್ದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿತ್ತು.

ಗುರುವಾರ ಜಲಾಶಯದ 5 ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ, ಹೊಳೆಗೆ ನೀರು ಹರಿಸಲಾಯಿತು. ಸದ್ಯ 5 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

Water Released From Tunga Dam Gajanur

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಉಪ ವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ಹಲವು ಅಧಿಕಾರಿಗಳು ಜಲಾಶಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಶಾಲೆಗಳಿಗೆ ರಜೆ; ಶಿವಮೊಗ್ಗ ಜಿಲ್ಲೆಯಾದ್ಯಂತ ಗುರುವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಗಳಿಗೂ ಒಂದು ದಿನ ಬಿಡವು ನೀಡಲಾಗಿದೆ.

ಶಿವಮೊಗ್ಗ ನಗರದಲ್ಲಿ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. 10 ರಿಂದ 15 ಸೆಂಟಿ ಮೀಟರ್ ಮಳೆ ಸುರಿಯುವ ಸಂಭವವಿದೆ ಎಂದು ಕೆಪಿಟಿಸಿಎಲ್ ಎಂ. ಆರ್. ಎಸ್. ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಬಿ. ಆರ್. ಯೋಗೇಶ್ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+