ಬಿಎಸ್ವೈ ಗೆದ್ದರೆ ತಲೆ ಬೋಳಿಸಿಕೊಂಡು ಪಾದಯಾತ್ರೆ!

ಶಿವಮೊಗ್ಗ, ಫೆ.14 : ಕೆಜೆಪಿ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗಿಲ್ಲ, ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ಮಾತ್ರ ಪಕ್ಷ ತೊರೆದಿದ್ದಾರೆ ಎಂದು ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಗೆದ್ದರೆ ತಲೆ ಬೊಳಿಸಿಕೊಳ್ಳುವುದಾಗಿ ಅವರು ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಕುಮಾರ್, ಕೆಜೆಪಿ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಿದ್ದೇವೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು, ಯಡಿಯೂರಪ್ಪ ಮತ್ತು ಅವರ ಬೆಂಬಲಗರು ಮಾತ್ರ ಕೆಜೆಪಿ ಪಕ್ಷ ತೊರೆದಿದ್ದಾರೆ ಎಂದರು. [ನಾನೇ ಕೆಜೆಪಿ ಅಧ್ಯಕ್ಷ : ಪ್ರಸನ್ನ ಕುಮಾರ್]

Prasanna Kumar

ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ ವಿರುದ್ಧ ಕೆಜೆಪಿಯಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಒಂದು ಯಡಿಯೂರಪ್ಪ ಗೆದ್ದರೆ ತಲೆಬೋಳಿಸಿಕೊಂಡು ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುತ್ತೇನೆ ಎಂದು ಪ್ರಸನ್ನ ಕುಮಾರ್ ಘೋಷಿಸಿದರು. [ಕೆಜೆಪಿ ಅಧ್ಯಕ್ಷ ಹುದ್ದೆ ಮುಗಿದ ಅಧ್ಯಾಯ]

ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಮೂಲಕ ಯಡಿಯೂರಪ್ಪ ಹರಕೆಯ ಕುರಿಯಾಗಲಿದ್ದಾರೆ. ಬಿಜೆಪಿಗೆ ಮರಳಿದ ಯಡಿಯೂರಪ್ಪ ಅವರು ಕಲ್ಯಾಣಸಿಂಗ್‌, ಉಮಾಭಾರತಿ ರೀತಿ ಪಕ್ಷದಲ್ಲಿ ಮೂಲೆಗುಂಪಾಗಲಿದ್ದಾರೆ ಎಂದು ಪ್ರಸನ್ನ ಕುಮಾರ್ ವಿಶ್ಲೇಷಿಸಿದರು.

10 ಕೋಟಿ ಆಮಿಷ : ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳಿದ್ದಾಗ, ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ ಎಂದು 10 ಕೋಟಿ ರೂ. ಆಮಿಷ ಒಡ್ಡಿದ್ದರು. ಈ ಬಗ್ಗೆ ಸೂಕ್ತ ದಾಖಲೆಗಳು ನನ್ನ ಬಳಿ ಇದ್ದು, ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+