ಜೆಡಿಎಸ್-ಕಾಂಗ್ರೆಸ್ ಮೈತ್ರಿ ಗುಸುಗುಸು: ಡಿಕೆಶಿ ಹೇಳಿದ್ದೇನು?
Recommended Video

ಶಿವಮೊಗ್ಗ, ಮಾರ್ಚ್ 27 : ಹಳೇ ಟ್ರಾನ್ಸ್ ಫಾರ್ಮರ್ ಗೆ ಅವಕಾಶ ನೀಡಲಾಗಿತ್ತು. ಆದರೆ ಆ ಟ್ರಾನ್ಸ್ ಫಾರ್ಮರ್ ಹೇಗೆ ಕೆಲಸ ಮಾಡಿದೆ ಎಂಬುದನ್ನು ಜನ ನೋಡಿದ್ದಾರೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
ನಗರದ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರು ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸರಕಾರ ಕೆಟ್ಟ ಟ್ರಾನ್ಸ್ ಫಾರ್ಮರ್ ಇದ್ದಂತೆ ಎಂದು ಲೇವಡಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಏಪ್ರಿಲ್ 3-4 ಹಾಗೂ 7-8 ರಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನಗರಕ್ಕೆ ಬಂದಿರುವುದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಳೆದ 5 ವರ್ಷ ಸತ್ಯ ಮಾರ್ಗದಲ್ಲಿ ನಡೆದಿದ್ದೇವೆ. ಸತ್ಯ ಮಾರ್ಗದ ಫಲಿತಾಂಶದಿಂದ ಜನರ ಆಶೀರ್ವಾದ ಪಡೆಯಲು ಹೊರಟಿದ್ದೇವೆ. ರಾಹುಲ್ ಗಾಂಧಿ ಶಿವಮೊಗ್ಗ ಭೇಟಿ ಸಂಬಂಧ ಕಾರ್ಯಕ್ರಮ ಆಯೋಜನೆಗಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ದೇವೆಗೌಡರು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಗುಮಾನಿ ಕೇಳಿ ಬರುತ್ತಿದೆ. ಈ ಕುರಿತು ಕಾಂಗ್ರೆಸ್ ನಿರ್ಧಾರವೇನು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ದೇವೇಗೌಡರ ನಿರ್ಧಾರದ ಬಗ್ಗೆ ಮಾತನಾಡುವ ಶಕ್ತಿ ನನಗಿಲ್ಲ. ಅವರು ದೊಡ್ಡವರು. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಪಕ್ಷದಲ್ಲಿ ಒಮ್ಮತದ ಅಭ್ಯರ್ಥಿಯ ತೀರ್ಮಾನವಿದೆ. ರಾಹುಲ್ ಗಾಂಧಿ ಈ ಬಗ್ಗೆ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ತೀ.ನ.ಶ್ರೀನಿವಾಸ, ಮುಖಂಡ ಕಲಗೋಡು ರತ್ನಾಕರ್ ಮೊದಲಾದವರು ಉಪಸ್ಥಿತರಿದ್ದರು.











Click it and Unblock the Notifications