ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೂ ತಟ್ಟಿದ ಕೊರೊನಾ ಬಿಸಿ!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮಾರ್ಚ್ 16: ವಿಶ್ವಾದ್ಯಂತ ಕೊರೊನ ವೈರಸ್ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಈಗ ರಾಜ್ಯದ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೂ ಅದರ ಬಿಸಿ ತಟ್ಟಿದ್ದು, ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ವಿಶ್ವವಿಖ್ಯಾತ ಜೋಗ ಜಲಪಾತವನ್ನು ಕಣ್ತುಂಬಿಕೊಳ್ಳಲು ರಾಜ್ಯ, ಹೊರರಾಜ್ಯ ಹಾಗೂ ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಕೊರೊನಾ ಹರಡುವ ಆತಂಕದದಿಂದಾಗಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದ್ದು, ಜಲಪಾತ ವೀಕ್ಷಣೆಗೆ ತೆರಳುವ ಗೇಟ್ ಗೆ ಬೀಗ ಹಾಕಲಾಗಿದೆ.

World Famous Jog Falls Entry Closed

ಹತ್ತು ದಿನಗಳ ಕಾಲ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದ್ದು, ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆಯಲ್ಲಿ ಜೋಗ ಜಲಪಾತದ ಎಂಟ್ರಿ ಗೇಟ್ ಬಂದ್ ಮಾಡಲಾಗಿದೆ. ಜಲಪಾತ ವೀಕ್ಷಣೆಗೆ ಬರುತ್ತಿರುವ ಪ್ರವಾಸಿಗರಿಗೆ ನೋಡಲು ಅವಕಾಶ ಸಿಗದೆ ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ.

English summary
The Jog Falls is restricted due to coronavirus concerns.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X