Get Updates
Get notified of breaking news, exclusive insights, and must-see stories!

ವಿಶ್ವದ ಅತೀ ಹೆಚ್ಚು ಅವಧಿಯ ಆಡಿಯೋ ಡಿವಿಡಿ ಮೇ 24 ಕ್ಕೆ ಲೋಕಾರ್ಪಣೆ

28 ಗಂಟೆ 8 ನಿಮಿಷ 38 ಸೆಕೆಂಡ್ ಧ್ವನಿಮುದ್ರಣವಾಗಿರುವ ವಿಶ್ವದ ಅತಿ ಹೆಚ್ಚು ಅವಧಿಯ ಆಡಿಯೋ ಡಿ.ವಿ.ಡಿ ಮೇ 24 ಬುಧವಾರದಂದು ಹರಿಹರದ ಶ್ರೀಸಮರ್ಥ ನಾರಾಯಣಾಶ್ರಮದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಸಾಗರ(ಶಿವಮೊಗ್ಗ), ಮೇ 20: ಯುವ ಸಂಗೀತ ನಿರ್ದೇಶಕ ಚಿನ್ಮಯ ಎಂ.ರಾವ್ ಅವರ ಕಂಠದಲ್ಲಿ ಒಟ್ಟು 28 ಗಂಟೆ 8 ನಿಮಿಷ 38 ಸೆಕೆಂಡ್ ಧ್ವನಿಮುದ್ರಣವಾಗಿರುವ ವಿಶ್ವದ ಅತಿ ಹೆಚ್ಚು ಅವಧಿಯ ಆಡಿಯೋ ಡಿ.ವಿ.ಡಿ ಇದೇ ಮೇ 24 ಬುಧವಾರದಂದು ಹರಿಹರದ ಶ್ರೀ ಸಮರ್ಥ ನಾರಾಯಣಾಶ್ರಮದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಚಿತ್ರದುರ್ಗದ ಹಿರಿಯ ಜ್ಯೋತಿಷಿ ಶ್ರೀ ಎಸ್ ಶ್ರೀಧರ ಮೂರ್ತಿ ನಿರ್ಮಾಣದ ಈ ಆಡಿಯೋ ಡಿ.ವಿ.ಡಿಯನ್ನು ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿ ಹೊರತರುತ್ತಿದೆ.

World's lengthiest audio DVD will be releasing on May 24th in Harihar

'ಶ್ರೀ ಗುರುಸಂಹಿತಾ' ಎಂಬ ಹೆಸರಿನ ಶ್ರೀ ವಾಸುದೇವಾನಂದ ಸರಸ್ವತಿ ವಿರಚಿತ ಈ ಪವಿತ್ರ ಗ್ರಂಥದಲ್ಲಿ ಒಟ್ಟು 6621 ಸಂಸ್ಕೃತ ಶ್ಲೋಕಗಳು 52 ಅಧ್ಯಾಯಗಳಲ್ಲಿದೆ. ಮೂಲತಃ ಮರಾಠಿ ಭಾಷೆಯ ಗಂಗಾಧರ ಸರಸ್ವತಿ ಎಂಬ ಕವಿಯಿಂದ ರಚಿಸಲ್ಪಟ್ಟ ಶ್ರೀ ಗುರುಚರಿತ್ರಾ ಎಂಬ ಈ ಪವಿತ್ರ ಗ್ರಂಥ ಇಂದಿಗೂ ಮಹರಾಷ್ಟ್ರದಾದ್ಯಂತ ಪ್ರಚಲಿತವಾಗಿದೆ.

World's lengthiest audio DVD will be releasing on May 24th in Harihar

ಶ್ರೀ ಗುರುಚರಿತ್ರೆಯು, ಶ್ರೀ ದತ್ತಾತ್ರೇಯರ, ಶ್ರೀಪಾದಶ್ರೀವಲ್ಲಭರ, ಶ್ರೀ ನೃಸಿಂಹ ಸರಸ್ವತಿಗಳ ಅದ್ಭುತವೂ ಪರಮಾನಂದವೂ ಆದ ದಿವ್ಯ ಚರಿತ್ರೆ. ಶ್ರೀ ವಾಸುದೇವಾನಂದ ಸರಸ್ವತಿಗಳು ದತ್ತನ ಪ್ರೇರಣೆಯಿಂದ ಸಂಸ್ಕೃತ ಭಾಷೆಗೆ ಇದನ್ನು ಅನುವಾದಿಸಿದ್ದಾರೆ.

ಅನುಷ್ಟುಪ್ ಛಂಧಸ್ಸಿನಲ್ಲಿರುವ ಒಟ್ಟು 6621 ಶ್ಲೋಕಗಳನ್ನೂ ತಮ್ಮ ಹೊನಗೋಡಿನ ಮನೆಯಲ್ಲಿರುವ ಪುಟ್ಟ ಸ್ಟೂಡಿಯೋದಲ್ಲಿ ತಾವೇ ಧ್ವನಿಮುದ್ರಣ ಮಾಡಿಕೊಂಡು ಹಾಡಿರುವ ಚಿನ್ಮಯ ಎಂ.ರಾವ್ ಇದರ ಸಂಕಲನದ ಕೆಲಸವನ್ನೂ ತಾವೇ ಮಾಡಿಕೊಂಡು ಅಂತಿಮ ಹಂತದ ಮಾಸ್ಟರ್ ಡಿ.ವಿ.ಡಿ ಸಿದ್ಧಪಡಿಸಿ ಬಿಡುಗಡೆ ಮಾಡುತ್ತಿರುವುದು ಇದರ ವಿಶೇಷ. ಯುವ ಸಂಗೀತ ನಿರ್ದೇಶಕ ಚಿನ್ಮಯ ಎಂ.ರಾವ್ ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಹೊನಗೋಡಿನವರು.

{promotion-urls}

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+