ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ

|
Google Oneindia Kannada News

ಶಿವಮೊಗ್ಗ, ಮೇ 25 : ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. 2013ರ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಯಡಿಯೂರಪ್ಪ ಶಾಸಕರಾಗಿ ಆಯ್ಕೆಯಾಗಿದ್ದರು.

ಭಾನುವಾರ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕಳುಹಿಸಿದ್ದಾರೆ. ಮೇ 30ರಿಂದ ಅನ್ವಯವಾಗುವಂತೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದ್ದಾರೆ.

Yeddyurappa

2013ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಎಸ್.ಯಡಿಯೂರಪ್ಪ ಅವರು, ಸುಮಾರು 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದರು. ಸದ್ಯ ಸಂಸದರಾಗಿ ಆಯ್ಕೆಯಾಗಿರುವುದರಿಂದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.[ಶಿವಮೊಗ್ಗದಲ್ಲಿ ಯಡಿಯೂರಪ್ಪಗೆ ದಾಖಲೆಯ ಗೆಲುವು]

ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾದ ಶಿಕಾಪುರ ಶಾಸಕ ಸ್ಥಾನಕ್ಕೆ ಆರು ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದೆ. ಶಿವಮೊಗ್ಗ ರಾಜಕೀಯ ವಲಯದಲ್ಲಿ ಹಬ್ಬಿರುವ ಮಾತಿನಂತೆ ಶಿವಮೊಗ್ಗ ಕ್ಷೇತ್ರದ ಮಾಜಿ ಸಂಸದ ಮತ್ತು ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಶಿಕಾರಿಪುರದಿಂದ ಉಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. [ಸಚಿವ ಸ್ಥಾನ ಬೇಡ, ಮೋದಿಗೆ ಬಿಎಸ್ವೈ ಪತ್ರ]

ಗೆದ್ದರೂ ಮಂತ್ರಿ ಸ್ಥಾನ ಬೇಡ : ಶಿವಮೊಗ್ಗ ಕ್ಷೇತ್ರದಿಂದ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ ಯಡಿಯೂರಪ್ಪ ಕೇಂದ್ರ ಸಚಿವ ಸ್ಥಾನ ಬೇಡ ಎಂದು ಹೇಳುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವೆ ನನಗೆ ಸಚಿವ ಸ್ಥಾನದ ಆಸೆ ಇಲ್ಲ ಎಂದು ಅವರು ಹೇಳಿದ್ದಾರೆ.

ಅಮಿತ್‌ ಶಾ ಉತ್ತರ ಪ್ರದೇಶಕ್ಕೆ ತೆರಳಿ ಪಕ್ಷಕ್ಕೆ ಅಭೂತಪೂರ್ವ ಯಶಸ್ಸು ತಂದು ಕೊಡುತ್ತಾರೆ ಎಂದರೆ ಅದು ಯಡಿಯೂರಪ್ಪಗೆ ಏಕೆ? ಸಾಧ್ಯವಿಲ್ಲ. ರಾಜ್ಯದ ಮಾಜಿ ಮುಖ್ಯಮಂತ್ರಿಯಾದ ನಾನು ರಾಜ್ಯದಲ್ಲಿ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದಕ್ಕೆ ಶ್ರಮಿಸಿ ಯಶಸ್ವಿಯಾಗುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

English summary
After electing as Shimoga MP BS Yeddyurappa on May 25 resigned for MLA post. The resignation letter has been sent to Speaker Kagodu Thimmappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X